ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)

Covid vaccine: ಪಲ್ಸ್​ ಪೋಲಿಯೋ ಮಾದರಿಯಲ್ಲಿ ಕೋವಿಡ್​ ಲಸಿಕೆಯನ್ನು ಜನರಿಗೆ ಉಚಿತವಾಗಿ ನೀಡಿ; ಸರ್ಕಾರಕ್ಕೆ ಎಚ್​ಡಿಕೆ ಮನವಿ

ಈ ಹಿಂದೆ ಪೊಲೀಯೋ ಮಾಹಾಮಾರಿಯನ್ನು ತಡೆಗಟ್ಟಲು ಸರ್ಕಾರ ಯಾವ ರೀತಿ ಒಂದೇ ಮಾದರಿಯಲ್ಲಿ ಕ್ರಮ ಕೈಗೊಂಡಿತೋ ಅದೇ ರೀತಿ ಈಗ ಕೂಡ ಕಾರ್ಯನಿರ್ವಹಿಸಬೇಕು,

ಬೆಂಗಳೂರು (ಏ. 24) ಜಾಗತಿಕ ಸೋಂಕಿನ ವಿರುದ್ಧ ದೇಶ ಹೋರಾಟಕ್ಕೆ ಈಗಾಗಲೇ ದೇಶೀಯವಾಗಿ ಲಸಿಕೆ ತಯಾರಿಸಲಾಗಿದೆ. ಕೋವಿಡ್​ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಮೂರನೇ ಹಂತದ ಲಸಿಕೆಯನ್ನು 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡಲು ಮುಂದಾಗಿದೆ. ಇದೇ ಮೇ. 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈಗಾಗಲೇ ಮೊದಲ ಹಂತದ ಅಂದರೆ 60 ವರ್ಷ ಮೇಲ್ಪಟ್ಟ ಮತ್ತು ಎರಡನೇ ಹಂತದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಂಚಿಕೆ ಕಾರ್ಯ ನಡೆಯುತ್ತಿದೆ. ಇದೀಗ ಮೂರನೇ ಹಂತದ ಲಸಿಕೆಯನ್ನು ರಾಜ್ಯದ ಜನರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂದು ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


ಸೋಂಕಿನ ವಿರುದ್ಧ ಹೋರಾಡಲು ಜನರಿಗೆ ಲಸಿಕೆ ಅಗತ್ಯವಾಗಿದೆ. ಈ ಲಸಿಕೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಯಾಗಿದೆ. ಸದ್ಯ ಕೋವಿಡ್​ ಬಿಕ್ಕಟ್ಟಿನಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆ ಸರ್ಕಾರ ಈ ಲಸಿಕೆಯನ್ನು ಉಚಿತವಾಗಿ ಜನರಿಗೆ ಹಂಚಬೇಕು ಎಂದು ಮಾಜಿ ಸಿಎಂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.



ಈ ಹಿಂದೆ ಪೊಲೀಯೋ ಮಾಹಾಮಾರಿಯನ್ನು ತಡೆಗಟ್ಟಲು ಸರ್ಕಾರ ಯಾವ ರೀತಿ ಒಂದೇ ಮಾದರಿಯಲ್ಲಿ ಕ್ರಮ ಕೈಗೊಂಡಿತೋ ಅದೇ ರೀತಿ ಈಗ ಕೂಡ ಕಾರ್ಯನಿರ್ವಹಿಸಬೇಕು, ಇದರಿಂದ ಬಡವ ಬಲ್ಲಿದನೆಂಬ ತಾರತಮ್ಯವಿಲ್ಲದೇ ಪ್ರತಿಯೊಬ್ಬರು ಲಸಿಕೆ ಪಡೆಯುವರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು  ಎಂದು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.




ಈಗಾಗಲೇ ಹಲವು ರಾಜ್ಯಗಳಲ್ಲಿ ಕೋವಿಡ್‌ ಲಸಿಕೆ‌ ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಿವೆ. ಜಾರ್ಖಂಡ್, ಗೋವಾ, ಛತ್ತೀಸ್​ಗಢ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಹಾಗೂ ಸಿಕ್ಕಿಂನಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ಹಂಚಿಕೆ ಮಾಡುವುದಾಗಿ ಅಲ್ಲಿನ ರಾಜ್ಯ ಸರ್ಕಾರಗಳು ಘೋಷಣೆ ಮಾಡಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲೂ ಉಚಿತವಾಗಿ ಲಸಿಕೆ ನೀಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.


ಈ ಕುರಿತು ಒತ್ತಾಯ ಹೆಚ್ಚಾದ ಈ ಬಗ್ಗೆ ಮುಖ್ಯಮಂತ್ರಿಗಳು ಸೋಮವಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ

Published by: Seema R
First published: April 24, 2021, 4:18 PM IST