ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)

Vikrant Rona Release Date: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್​ ನ್ಯೂಸ್!; ಆ. 19ಕ್ಕೆ ವಿಕ್ರಾಂತ್ ರೋಣ ಸಿನಿಮಾ ರಿಲೀಸ್

Kiccha Sudeep Vikrant Rona: ಆಗಸ್ಟ್​ 19ರಂದು ಭಾರತದಾದ್ಯಂತ 'ವಿಕ್ರಾಂತ್ ರೋಣ' ಸಿನಿಮಾ ತೆರೆ ಕಾಣಲಿದೆ ಎಂದು ನಟ ಕಿಚ್ಚ ಸುದೀಪ್ ಟ್ವಿಟ್ಟರ್​ ಮೂಲಕ ಹಂಚಿಕೊಂಡಿದ್ದಾರೆ. 'ವಿಕ್ರಾಂತ್ ರೋಣ' ಸಿನಿಮಾವನ್ನು 'ರಂಗಿತರಂಗ', 'ರಾಜರಥ' ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ.

ಅಭಿನಯ ಚಕ್ರವರ್ತಿ ಎಂದೇ ಹೆಸರಾಗಿರುವ ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ 'ವಿಕ್ರಾಂತ್ ರೋಣ' ಸಿನಿಮಾ ಕುರಿತು ಸಂತೋಷದ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಆಗಸ್ಟ್​ 19ರಂದು ಭಾರತದಾದ್ಯಂತ 'ವಿಕ್ರಾಂತ್ ರೋಣ' ಸಿನಿಮಾ ತೆರೆ ಕಾಣಲಿದೆ ಎಂದು ನಟ ಕಿಚ್ಚ ಸುದೀಪ್ ಟ್ವಿಟ್ಟರ್​ ಮೂಲಕ ಹಂಚಿಕೊಂಡಿದ್ದಾರೆ. ಬುರ್ಜಾ ಖಲೀಫಾ ಕಟ್ಟಡದ ಮೇಲೆ 'ವಿಕ್ರಾಂತ್ ರೋಣ' ಸಿನಿಮಾದ ಟೈಟಲ್ ಲಾಂಚ್ ಮಾಡಿದ್ದ ಚಿತ್ರತಂಡ ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ, ತಮಿಳು, ಮಲೆಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾವನ್ನು ತೆರೆಗೆ ಬರಲಿದೆ.


ಒಟ್ಟು 6 ಭಾಷೆಗಳಲ್ಲಿ 'ವಿಕ್ರಾಂತ್ ರೋಣ' ಸಿನಿಮಾ ತೆರೆ ಕಾಣಲಿದೆ ಎಂದು ಘೋಷಿಸಿದ್ದ ನಟ ಕಿಚ್ಚ ಸುದೀಪ್ ಇದೀಗ ಆಗಸ್ಟ್​ 19ರಂದು ಭಾರತದಾದ್ಯಂತ ಸಿನಿಮಾ ತೆರೆಗೆ ಬರಲಿದೆ ಎಂಬ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ತಮ್ಮ ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡುವುದಾಗಿ ನಿನ್ನೆಯೇ ಘೋಷಿಸಿದ್ದ ನಟ ಸುದೀಪ್ ಅದರಂತೆ ತಮ್ಮ ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ.



'ವಿಕ್ರಾಂತ್ ರೋಣ' ಸಿನಿಮಾದ ಚಿತ್ರೀಕರಣದ ಸಿದ್ಧತೆಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೆವು. ಇದೀಗ ಮತ್ತೊಂದು ರೋಮಾಂಚನಕಾರಿ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ ಬಂದಿದೆ. ಆಗಸ್ಟ್​ 19ರಂದು 'ವಿಕ್ರಾಂತ್ ರೋಣ' ಸಿನಿಮಾ ಭಾರತದಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಲು ನಮ್ಮ ತಂಡಕ್ಕೆ ಖುಷಿಯಾಗುತ್ತಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.




'ವಿಕ್ರಾಂತ್ ರೋಣ' ಸಿನಿಮಾದ ಜೊತೆಗೆ ಕೋಟಿಗೊಬ್ಬ 3 ಸಿನಿಮಾ ಕೂಡ ತೆರೆಗೆ ಬರಲು ಸಿದ್ಧವಾಗಿದೆ. 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ನಟ ಸುದೀಪ್ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದರು. ಜನವರಿ ತಿಂಗಳಲ್ಲಿ ದುಬೈನ ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿತ್ತು.




'ವಿಕ್ರಾಂತ್ ರೋಣ' ಸಿನಿಮಾವನ್ನು ರಂಗಿತರಂಗ, ರಾಜರಥ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

Published by: Sushma Chakre
First published: April 15, 2021, 12:02 PM IST