ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)
HOME » NEWS »NATIONAL-INTERNATIONAL » GUJARAT FIRE ACCIDENT 16 COVID 19 PATIENTS CRITICAL AFTER FIRE ACCIDENT IN GUJARAT SURAT HOSPITAL ICU SCT

Gujarat Fire Accident: ಗುಜರಾತ್​​ನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 16 ಕೊರೋನಾ ರೋಗಿಗಳ ಸ್ಥಿತಿ ಗಂಭೀರ

Surat Fire Accident: ಗುಜರಾತ್​ನ ಸೂರತ್​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಐಸಿಯುನಲ್ಲಿದ್ದ16 ಕೊರೋನಾ ರೋಗಿಗಳ ಪರಿಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂರತ್ (ಏ. 26): 3 ದಿನಗಳ ಹಿಂದಷ್ಟೇ ಮಹಾರಾಷ್ಟ್ರದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 13 ಕೊರೋನಾ ರೋಗಿಗಳು ಸಜೀವ ದಹನವಾಗಿದ್ದರು. ಅದರ ಬೆನ್ನಲ್ಲೇ ಗುಜರಾತ್​ನಲ್ಲಿ ಕೂಡ ಅದೇ ರೀತಿಯ ಘಟನೆ ನಿನ್ನೆ ರಾತ್ರಿ ನಡೆದಿದೆ. ಗುಜರಾತ್​ನ ಸೂರತ್​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ 16 ಕೊರೋನಾ ರೋಗಿಗಳ ಪರಿಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸೂರತ್​ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅನಾಹುತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸೂರತ್​ನ ಆಯುಷ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ 11.45ರ ಸುಮಾರಿಗೆ ಬೆಂಕಿ ಅವಘಡ ನಡೆದಿದ್ದು, ತಕ್ಷಣ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಇಲ್ಲಿನ ಐಸಿಯುನಲ್ಲಿ 16 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಗಂಭೀರವಾಗಿದೆ.


ನಿನ್ನೆ ರಾತ್ರಿ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಐಸಿಯುನಲ್ಲಿದ್ದ ಕೊರೋನಾ ರೋಗಿಗಳನ್ನು ರಕ್ಷಿಸಿದ್ದಾರೆ. ಐಸಿಯುನಲ್ಲಿ ಎಸಿ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Published by: Sushma Chakre
First published: April 26, 2021, 10:34 AM IST