- News18 Kannada
- Last Updated: April 21, 2021, 3:15 PM IST
ಮುಂಬೈ: ಮಹಾರಾಷ್ಟ್ರದ ಮಾಸಿಕ್ನಲ್ಲಿ ಡಾ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾದ ಘಟನೆ ಬುಧವಾರ ನಡೆದಿದ್ದು, ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದು ಸೋರಿಕೆ ನಿಯಂತ್ರಣ ಕಾರ್ಯಾಚರಣೆ ಮುಂದುವರೆದಿದೆ.
ಮಹಾರಾಷ್ಟ್ರದ ನಾಸಿಕ್ ಡಾ ಜಾಕೀರ್ ಹುಸೇನ್ ಆಸ್ಪತ್ರೆಯ ಆಕ್ಸಿಜನ್ ಸೋರಿಕೆ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಆಸ್ಪತ್ರೆಯಲ್ಲಿ 171 ಕೋವಿಡ್-19 ರೋಗಿಗಳಿದ್ದರು. ಅವರಲ್ಲಿ 67 ಮಂದಿ ಆಮ್ಲಜನಕದ ಬಲದಲ್ಲಿ ಇದ್ದರು.
#WATCH | An Oxygen tanker leaked while tankers were being filled at Dr Zakir Hussain Hospital in Nashik, Maharashtra. Officials are present at the spot, operation to contain the leak is underway. Details awaited. pic.twitter.com/zsxnJscmBp
ದೇಶದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮಹಾರಾಷ್ಟ್ರದಲ್ಲಿ ಅತಿ ವೇಗವಾಗಿ ಸೋಂಕು ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಜಾರಿಗೆ ತರುತ್ತಿದೆ. ಇದೀಗ ಮತ್ತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಏ.20ರಿಂದ ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳು ಬೆಳಗ್ಗೆ 7ರಿಂದ 11 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶ ನೀಡಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಕೋವಿಡ್ ಮಾನದಂಡಗಳನ್ನು ಹೆಚ್ಚಿಸಿದೆ. ಏಪ್ರಿಲ್ 20 ರಿಂದ ದಿನಸಿ ಮತ್ತು ಇತರ ಅಂಗಡಿಗಳು ಬೆಳಗ್ಗೆ 7 ರಿಂದ 11 ರವರೆಗೆ ತೆರೆದಿರಲು ಅವಕಾಶವಿರುತ್ತದೆ. ಜೊತೆಗೆ ವಾರಂತ್ಯದ ದಿನಗಳಲ್ಲಿ ಲಾಕ್ಡೌನ್ ಮುಂದುವರೆಯಲಿದೆ.
ಇದನ್ನು ಓದಿ: Vaccine Rate - ಕೋವಿಶೀಲ್ಡ್ ಲಸಿಕೆ ದರ ಪರಿಷ್ಕರಣೆ; ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಆಗಲಿದೆ ದುಬಾರಿ
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲು ಆರಂಭಿಸಿವೆ.