ದೆಹಲಿಯಲ್ಲಿ ಇಂದು 1215 ಕೊರೋನಾ ಪ್ರಕರಣಗಳು ಪತ್ತೆ ; 22 ಮಂದಿ ಸಾವು

ದೆಹಲಿಯಲ್ಲಿ ಮಹಾಮಾರಿ ಕೊರೋನಾ ಸೋಂಕಿಗೆ ಗುರುವಾರ 22 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ದೆಹಲಿಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4,257 ಕ್ಕೆ ಏರಿಕೆಯಾಗಿದೆ.

news18-kannada
Updated:August 20, 2020, 7:05 PM IST
ದೆಹಲಿಯಲ್ಲಿ ಇಂದು 1215 ಕೊರೋನಾ ಪ್ರಕರಣಗಳು ಪತ್ತೆ ; 22 ಮಂದಿ ಸಾವು
coronavirus delhi update 956 corona virus cases report today in delhi
  • Share this:
ನವದೆಹಲಿ(ಆಗಸ್ಟ್​​. 20): ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಗುರುವಾರ 1,215 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ‌.

ಪ್ರತಿದಿನ ಸಂಜೆ ಕಳೆದ 24 ಗಂಟೆಯಲ್ಲಿ ಹೊಸದಾಗಿ ಕಂಡುಬರುವ ಕೊರೋನಾ ಪ್ರಕರಣಗಳನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡುತ್ತಿದೆ‌. ಅದೇ ರೀತಿ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಹೊಸದಾಗಿ 1,215 ಕೊರೋನಾ ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಇದರಿಂದ ದೆಹಲಿಯ ಕೊರೋನಾ ಪೀಡಿತರ ಸಂಖ್ಯೆ 1,57,354ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಮಹಾಮಾರಿ ಕೊರೋನಾ ಸೋಂಕಿಗೆ ಗುರುವಾರ 22 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ದೆಹಲಿಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4,257 ಕ್ಕೆ ಏರಿಕೆಯಾಗಿದೆ. ಜುಲೈ ತಿಂಗಳ ಆರಂಭದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿತ ಪ್ರಕರಣಗಳು ಕಂಡುಬರುತ್ತಿದ್ದವು. ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಸುಮಾರು 1 ಸಾವಿರ ಪ್ರಕರಣಗಳು ಪತ್ತೆಯಾಗ ತೊಡಗಿವೆ. ಗುರುವಾರ 1,059 ಜನ ಸೇರಿದಂತೆ ಈವರೆಗೆ 1,41,826 ಜನರು ಗುಣಮುಖರಾಗಿದ್ದಾರೆ. 11,271 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ‌.

ಇದನ್ನೂ ಓದಿ : ದಿಲ್ಲಿ ಪೋಸ್ಟ್ | ಈ ಬಾರಿ ಗಾಂಧಿ ಕುಟುಂಬಕ್ಕೆ ಹೊರತಾದ ವ್ಯಕ್ತಿ ಎಐಸಿಸಿ ಅಧ್ಯಕ್ಷರಾಗುವರೇ?

ಇದಲ್ಲದೆ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಾ 28 ಲಕ್ಷ ದಾಟಿದೆ. ಆಗಸ್ಟ್‌ 19 ರಂದು 69,652 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ. 977ಮಂದಿ ಕೊರೋನಾದಿಂದ ಮೃತಪಟ್ಟಿದ್ದು ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 53,866ಕ್ಕೆ ಏರಿಕೆಯಾಗಿದೆ.

ಈವರೆಗೆ ಕೊರೋನಾದಿಂದ ಗುಣಮುಖರಾದವರು 20,96,665 ಜನ ಮಾತ್ರ. ದೇಶದಲ್ಲಿ ಇನ್ನೂ 6,86,395 ಜನರಲ್ಲಿ ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.
Published by: G Hareeshkumar
First published: August 20, 2020, 7:00 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading