Coronavirus India: ಭಾರತದಲ್ಲಿ 41 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ; ಒಂದೇ ದಿನ 90 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ

ಭಾರತದಲ್ಲಿ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಲು ಆರಂಭಿಸಿದ್ದು, ಸೆಪ್ಟೆಂಬರ್ 5ರಂದು  90,633 ಪ್ರಕರಣಗಳು ಕಂಡುಬಂದಿವೆ. ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 41,13,812ಕ್ಕೆ ಏರಿಕೆಯಾಗಿದೆ.

news18-kannada
Updated:September 6, 2020, 10:33 AM IST
Coronavirus India: ಭಾರತದಲ್ಲಿ 41 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ; ಒಂದೇ ದಿನ 90 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಸೆ. 6): ದೇಶದಲ್ಲಿ ಕೊರೋನಾ ಸೋಂಕು ಹರಡುವಿಕೆ ಸುನಾಮಿ ಸ್ವರೂಪ ಪಡೆದುಕೊಂಡಿದ್ದು, ಪ್ರತಿದಿನ 90 ಸಾವಿರಕ್ಕೂ ಹೆಚ್ಚು‌ ಸೋಂಕು ಪೀಡಿತ ಪ್ರಕರಣಗಳು ಪತ್ತೆಯಾಗತೊಡಗಿವೆ. ಪರಿಣಾಮವಾಗಿ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 41 ಲಕ್ಷ‌ದ ಗಡಿಯನ್ನೂ ದಾಟಿದೆ. ಭಾರತದಲ್ಲಿ ಆಗಸ್ಟ್ 6ರ ನಂತರ ಪ್ರತಿದಿನ 60 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಆಗಸ್ಟ್ 26ರಿಂದ 75 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.‌ ಈಗ ಸೆಪ್ಟೆಂಬರ್ 2ರಿಂದ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಸೆಪ್ಟೆಂಬರ್ 2ರಂದು ದಾಖಲೆಯ 83,883 ಪ್ರಕರಣಗಳು, ಸೆಪ್ಟೆಂಬರ್ 3ರಂದು 83,341 ಪ್ರಕರಣಗಳು ಹಾಗೂ ಸೆಪ್ಟೆಂಬರ್ 4ರಂದು 86,432 ಪ್ರಕರಣಗಳು ಪತ್ತೆಯಾಗಿದ್ದವು. ಈಗ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಲು ಆರಂಭಿಸಿದ್ದು, ಸೆಪ್ಟೆಂಬರ್ 5ರಂದು  90,633 ಪ್ರಕರಣಗಳು ಕಂಡುಬಂದಿವೆ. ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 41,13,812ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: Sushant Singh Death: ಸುಶಾಂತ್ ಸಿಂಗ್ ಸಾವಿನ ಕೇಸ್; ರಿಯಾ ಚಕ್ರವರ್ತಿಗೆ ಎನ್​ಸಿಬಿಯಿಂದ ಸಮನ್ಸ್​ ಜಾರಿ

ಇದಲ್ಲದೆ ಶನಿವಾರ 1,065 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 70ಸಾವಿರದ ಗಡಿ‌ ದಾಟಿದ್ದು 70,626ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 31,80,866 ಜನ ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 8,62,320 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಆಗಸ್ಟ್ 1ರಂದು 54,736, ಆಗಸ್ಟ್ 2ರಂದು 52,972, ಆಗಸ್ಟ್ 3ರಂದು 52,050, ಆಗಸ್ಟ್ 4ರಂದು 52,509, ಆಗಸ್ಟ್ 5ರಂದು 56,282, ಆಗಸ್ಟ್ 6ರಂದು 62,538, ಆಗಸ್ಟ್ 7ರಂದು 61,537, ಆಗಸ್ಟ್ 8ರಂದು 64,399, ಆಗಸ್ಟ್ 9ರಂದು 62,064, ಆಗಸ್ಟ್ 10ರಂದು  53,601, ಆಗಸ್ಟ್ 11ರಂದು 60,963, ಆಗಸ್ಟ್ 12ರಂದು 66,999, ಆಗಸ್ಟ್ 13ರಂದು 64,553, ಆಗಸ್ಟ್ 14ರಂದು 65,002, ಆಗಸ್ಟ್ 15ರಂದು 63,489, ಆಗಸ್ಟ್ 16ರಂದು 57,982, ಆಗಸ್ಟ್ 17ರಂದು 55,079, ಆಗಸ್ಟ್ 18ರಂದು 64,531, ಆಗಸ್ಟ್ 19ರಂದು 69,652, ಆಗಸ್ಟ್ 20ರಂದು 68,898, ಆಗಸ್ಟ್ 21ರಂದು 69,878, ಆಗಸ್ಟ್ 22ರಂದು 69,239, ಆಗಸ್ಟ್ 23ರಂದು 61,408, ಆಗಸ್ಟ್‌ 24ರಂದು 60,975, ಆಗಸ್ಟ್ 25ರಂದು 67,151, ಆಗಸ್ಟ್ 26ರಂದು 75,760, ಆಗಸ್ಟ್ 27ರಂದು 77,266, ಆಗಸ್ಟ್ 28ರಂದು 76,472, ಆಗಸ್ಟ್ 29ರಂದು 78,761, ಆಗಸ್ಟ್ 30ರಂದು 78,512, ಆಗಸ್ಟ್ 31ರಂದು 69,921, ಸೆಪ್ಟೆಂಬರ್ 1ರಂದು 78,357, ಸೆಪ್ಟೆಂಬರ್ 2ರಂದು 83,883, ಸೆಪ್ಟೆಂಬರ್ 4ರಂದು 86,432 ಹಾಗೂ ಸೆಪ್ಟೆಂಬರ್ 5ರಂದು 90,633 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Sushma Chakre
First published: September 6, 2020, 10:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading