Coronavirus Updates: ಕರ್ನಾಟಕದಲ್ಲಿ ಕೋವಿಡ್​-19 ಆರ್ಭಟ: ಇಂದು ಒಂದೇ ದಿನ 9,746 ಕೇಸ್​​; 3,89,232 ಸೋಂಕಿತರು

ಇನ್ನು, ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿದಿದೆ. ಹೀಗಾಗಿ ಇಂದು 128 ಮಂದಿ ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಇದುವರೆಗೂ ಕರ್ನಾಟಕದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6298ಕ್ಕೆ ಏರಿಕೆಯಾಗಿದೆ.

news18-kannada
Updated:September 5, 2020, 8:46 PM IST
Coronavirus Updates: ಕರ್ನಾಟಕದಲ್ಲಿ ಕೋವಿಡ್​-19 ಆರ್ಭಟ: ಇಂದು ಒಂದೇ ದಿನ 9,746 ಕೇಸ್​​; 3,89,232 ಸೋಂಕಿತರು
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಸೆ.05): ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್​ ಹಾವಳಿ ಮುಂದುವರಿದಿದೆ. ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಎಷ್ಟೇ ಕ್ರಮಗಳು ಕೈಗೊಂಡರೂ ಕೊರೋನಾ ಪಾಸಿಟಿವ್​​ ಕೇಸುಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಎಂದಿನಂತೆಯೇ ಇಂದು ಕೂಡ ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದ ಪರಿಣಾಮ ಶನಿವಾರ ಬರೋಬ್ಬರಿ 9,746 ಪಾಸಿಟಿವ್​​ ಕೇಸ್​ ಬಂದಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್​​​ ಬುಲೆಟಿನ್​​ನಿಂದ ತಿಳಿದು ಬಂದಿದೆ.

ಇನ್ನು, ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿದಿದೆ. ಹೀಗಾಗಿ ಇಂದು 128 ಮಂದಿ ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಇದುವರೆಗೂ ಕರ್ನಾಟಕದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6298ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 34 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಜತೆಗೆ ರಾಜಧಾನಿ ಬೆಂಗಳೂರು ನಗರವೊಂದರಲ್ಲೆ ಅತೀಹೆಚ್ಚು ಕೇಸ್​​ 3093 ಹೊಸ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕ ಶಿಕ್ಷಣ ಇಲಾಖೆ ಮೇಲೆ ವಿಪಕ್ಷಗಳ ಗಂಭೀರ ಆರೋಪ - ಇಲ್ಲಿದೆ ಸಚಿವ ಸುರೇಶ್​​ ಕುಮಾರ್​​​​​ ಉತ್ತರ

ಶನಿವಾರ ಒಂದೇ ರಾಜ್ಯದಲ್ಲಿ 9102 ಮಂದಿ ಆಸ್ಪತ್ಪೆಯಿಂದ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಗುಣಮುಖರಾದವರ ಸಂಖ್ಯೆ 2,83,298 ಆಗಿದೆ. ಹಾಗೆಯೇ 99,617 ಮಂದಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಪೈಕಿ 769 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Published by: Ganesh Nachikethu
First published: September 5, 2020, 8:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading