ಗುಣಮುಖರಾದವರಿಗೆ ಮತ್ತೆ ಕೊರೋನಾ ಸೋಂಕು; ಕ್ಲಿನಿಕಲ್ ಸ್ಟಡಿ‌ ನಡೆಸಲು ಸಚಿವ ಕೆ. ಸುಧಾಕರ್ ಸೂಚನೆ

ಮತ್ತೊಮ್ಮೆ ಕೊರೋನಾ ಬರಲು ಕಾರಣ ಏನೆಂಬುದರ ಬಗ್ಗೆ ನಿಖರತೆ ಬೇಕು. ಜೊತೆಗೆ ಇತರೆ ರಾಜ್ಯಗಳಲ್ಲಿ ಇಂತಹ ವಿಶೇಷ ಪ್ರಕರಣಗಳಲ್ಲಿ ತೆಗೆದುಕೊಳ್ಳುತ್ತಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವಂತೆ ಸಚಿವ ಡಾ. ಕೆ. ಸುಧಾಕರ್ ಸೂಚಿಸಿದರು.

news18-kannada
Updated:September 8, 2020, 10:30 AM IST
ಗುಣಮುಖರಾದವರಿಗೆ ಮತ್ತೆ ಕೊರೋನಾ ಸೋಂಕು; ಕ್ಲಿನಿಕಲ್ ಸ್ಟಡಿ‌ ನಡೆಸಲು ಸಚಿವ ಕೆ. ಸುಧಾಕರ್ ಸೂಚನೆ
ಸಚಿವ ಡಾ| ಕೆ. ಸುಧಾಕರ್
  • Share this:
ಬೆಂಗಳೂರು: ಕೊರೋನಾದಿಂದ ಗುಣಮುಖರಾದವರಿಗೆ ಮತ್ತೊಮ್ಮೆ ಕೊರೋನಾ ಕಾಣಿಸಿಕೊಳ್ಳುತ್ತಿರುವ ಪ್ರಕರಣದ ಬಗ್ಗೆ "ಕ್ಲಿನಿಕಲ್ ಸ್ಟಡಿ" ನಡೆಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಕೊಠಡಿಯಲ್ಲಿ ಕೋವಿಡ್-19 ಟೆಸ್ಟಿಂಗ್ ಕುರಿತು ಟಾಸ್ಕ್‌ ಫೋರ್ಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಫೋರ್ಟಿಸ್‌ನಲ್ಲಿ ಕೋರೋನಾದಿಂದ ಗುಣಮುಖರಾದ‌ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಪ್ರಸ್ತಾಪಿಸಿದ ಸುಧಾಕರ್, ಇತರೆ ರಾಷ್ಟ್ರಗಳಲ್ಲಿ ಈ ರೀತಿಯ ಪ್ರಕರಣಗಳು ಕಂಡು ಬಂದಿವೆ. ಇದಕ್ಕೆ ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿಬಂದಿವೆ ಎಂದಿದ್ದಾರೆ. 

ಬೆಂಗಳೂರಿನಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕದ ವಿಷಯ. ಆದರೆ, ಇದನ್ನು ಸೂಕ್ಷ್ಮ ರೀತಿಯಲ್ಲಿ ನಿರ್ವಹಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಕೊರೋನಾ ಬಾಧಿಸುವ ಆತಂಕವನ್ನು ದೂರ ಮಾಡಬೇಕು . ಕೋವಿಡ್‌ ಬಂದ ವ್ಯಕ್ತಿಯು ಗುಣಮುಖನಾದ ಮೇಲೆ  ದೇಹದಲ್ಲಿ ಬಿಳಿ ರಕ್ತಕಣಗಳ ಮರು ಉತ್ಪಾದನೆಗೆ ಕನಿಷ್ಠ 15 ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಈ ಕಾರಣದಿಂದ ಕೆಲವರಿಗೆ ಕೊರೋನಾ ಮತ್ತೊಮ್ಮೆ ಬಾಧಿಸುವ ಸಾಧ್ಯತೆಗಳಿವೆ. ಆದರೆ, ಇದೇ ಕಾರಣ ಎಂದು ಸ್ಪಷ್ಟವಾಗಿ ಹೇಳಲಾಗದು‌ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಧಾರಾಕಾರ ಮಳೆ; ಮಲೆನಾಡು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮತ್ತೊಮ್ಮೆ ಕೊರೋನಾ ಬರಲು ಕಾರಣ ಏನೆಂಬುದರ ಬಗ್ಗೆ ನಿಖರತೆ ಬೇಕು. ಜೊತೆಗೆ ಇತರೆ ರಾಜ್ಯಗಳಲ್ಲಿ ಇಂತಹ ವಿಶೇಷ ಪ್ರಕರಣಗಳಲ್ಲಿ ತೆಗೆದುಕೊಳ್ಳುತ್ತಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಿದರು.
ಅಷ್ಟೇ ಅಲ್ಲದೆ, ಕೋವಿಡ್‌ನಿಂದ ಗುಣಮುಖರಾದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ?  ಅವರು ತೆಗೆದುಕೊಳ್ಳಬೇಕಾದ ಎಚ್ಚರಿಕೆ, ಅನುಸರಿಸಬೇಕಾದ ಜೀವನ ಕ್ರಮದ ಬಗ್ಗೆ ಯಾವ ರೀತಿ ಅರಿವು ಮೂಡಿಸಲಾಗಿದೆ? ಎಂದು ಪ್ರಶ್ನಿಸಿದರು.
ಕೋವಿಡ್ ನಿಯಂತ್ರಣ ಬೂತ್‌ಮಟ್ಟದಿಂದ‌ ಮಾತ್ರ ಸಾಧ್ಯ ಎಂಬುದನ್ನು‌ ಮೊದಲಿಂದ ಪ್ರತಿಪಾದಿಸಿದ್ದೇನೆ. ಬೂತ್ ಮಟ್ಟದಲ್ಲಿ‌ ಸಮಿತಿ ರಚಿಸಿ, ಜಾಗೃತಿ ಮೂಡಿಸುವುದು ಹಾಗೂ ಕೊರೋನಾ ಪರೀಕ್ಷೆ ನಡೆಸುವುದರಿಂದ ಸುಲಭ ರೀತಿಯಲ್ಲಿ ನಿಯಂತ್ರಣ ಸಾಧ್ಯ. ಈ ಜವಾಬ್ದಾರಿಯನ್ನು ನಗರಾಭಿವೃದ್ಧಿ ಸಚಿವರಿಗೆ ವಹಿಸಿದರೆ ಇದರ ನಿರ್ವಹಣೆ ಸುಲಭ ಎಂದು ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Published by: Sushma Chakre
First published: September 8, 2020, 10:30 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading