news18-kannada Updated:April 26, 2021, 2:29 PM IST
ನವೀನ್ ಪಟ್ನಾಯಕ್.
ಒರಿಸ್ಸಾ (ಏಪ್ರಿಲ್ 26); ಭಾರತದ ಸರ್ಕಾರ ಕಳೆದ ಮೂರು ತಿಂಗಳಿನಿಂದ ಜನರಿಗೆ ಕೊರೋನಾ ಲಸಿಕೆ ನೀಡುವ ಕೆಲಸ ಮಾಡುತ್ತಿದೆ. ಈ ನಡುವೆ ಕೊರೋನಾ ಎರಡನೇ ಅಲೆ ವಿಪರೀತವಾದ ಬೆನ್ನಿಗೆ ಮೇ.1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಯೋಜನೆಯನ್ನು ಆರಂಭಿಸಿತ್ತು. ಅಲ್ಲದೆ, ಎಲ್ಲಾ ರಾಜ್ಯಗಳೂ ಸ್ವತಃ ತಾವೇ ಲಸಿಕೆಯನ್ನು ಖರೀದಿಸಿ ಜನರಿಗೆ ನೀಡುವಂತೆಯೂ ಸೂಚನೆ ನೀಡಿತ್ತು. ಕೇಂದ್ರದ ಸೂಚನೆ ಬೆನ್ನಿಗೆ ಕೇರಳ ಸರ್ಕಾರ ಮೊದಲ ಬಾರಿಗೆ ಜನರಿಗೆ ಉಚಿತ ಲಸಿಕೆ ನೀಡುವ ಆಶ್ವಾನೆಯನ್ನು ನೀಡಿತ್ತು. ಕೇರಳ ಬೆನ್ನಿಗೆ ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು 18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಘೋಷಿಸುತ್ತಿವೆ. ಇದೀಗ ಈ ಪಟ್ಟಿಯಲ್ಲಿ ಒರಿಸ್ಸಾ ಕೂಡಾ ಸೇರಿಕೊಂಡಿದೆ. ಒರಿಸ್ಸಾ ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈ ಘೋಷಣೆಯನ್ನು ಮಾಡಿದ್ದು, ಎಲ್ಲಾ ಜನರ ಚುಚ್ಚುಮದ್ದಿನ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. 18 ರಿಂದ 45 ವರ್ಷದ ಜನರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗಲಿದೆ.
ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ. ಇಂದು ನಡೆದ ಕ್ಯಾಬಿನೆಟ್ ಮೀಟಿಂಗ್ ನಂತರ ಕರ್ನಾಟಕ ಸರ್ಕಾರ ಸಹ ಉಚಿತ ಲಸಿಕೆ ನೀಡುವ ಭರವಸೆ ನೀಡಿದೆ.
3.87 ಕೋಟಿ ಡೋಸ್ ಲಸಿಕೆಗಳನ್ನು ಸರ್ಕಾರ ಭಾನುವಾರ ಆದೇಶಿಸಿದೆ. ಭಾರತ್ ಬಯೋಟೆಕ್‌ನಿಂದ 10.34 ಲಕ್ಷ ಡೋಸ್ ಕೋವಾಕ್ಸಿನ್ ಅನ್ನು ಆದೇಶಿಸಲಾಗಿದ್ದು, 377 ಲಕ್ಷ ಡೋಸ್ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪಡೆಯಲಾಗುತ್ತದೆ. ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯ ಜನರಿಗೆ ಕೋವಾಕ್ಸಿನ್ ಹಾಗೂ ಉಳಿದಂತೆ ಒಡಿಶಾದಾದ್ಯಂತ ಕೋವಿಶೀಲ್ಡ್ ಅನ್ನು ನೀಡಲಾಗುವುದು ಎಂದು ತಿಳಿದು ಬಂದಿದೆ.
ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, "ಸುಮಾರು ಎರಡು ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಲಸಿಕೆಗಳನ್ನು ಖರೀದಿಸಲು ರಾಜ್ಯ ಸರ್ಕಾರ 2,000 ಕೋಟಿ ರೂ. ಖರ್ಚು ಮಾಡುತ್ತದೆ. ವ್ಯಾಕ್ಸಿನೇಷನ್ಗಾಗಿ ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ. ಇದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ.
ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಚತ್ತೀಸ್‌ಗಡದಂತಹ ರಾಜ್ಯಗಳಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಮಾರಣಾಂತಿಕ ವೈರಸ್‌ಗೆ ಬಲಿಯಾಗುವವರ ಅಂತ್ಯ ಸಂಸ್ಕಾರ ಮಾಡಲು ಕೂಡಾ ಸ್ಥಳವಿಲ್ಲದ ಪರಿಸ್ಥಿತಿ ಏರ್ಪಟ್ಟಿದೆ. ದೇಶವು ತನ್ನ ಇತಿಹಾಸದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದು ಮುಖ್ಯಮಂತ್ರಿ ಪಟ್ನಾಯಕ್ ಹೇಳಿದ್ದಾರೆ.
ಒರಿಸ್ಸಾದಲ್ಲಿ ಇದುವರೆಗೂ 4 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1981 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 3.59 ಲಕ್ಷ ಜನರು ಇರುವರೆಗೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಇದನ್ನೂ ಓದಿ: Krnataka Lockdown: ಕರ್ನಾಟಕದಲ್ಲಿ 14 ದಿನಗಳ ಕಾಲ ಲಾಕ್ಡೌನ್; ಯಾವುದಕ್ಕೆಲ್ಲಾ ನಿರ್ಬಂಧ? ಯಾವುದಕ್ಕೆ ಅನುಮತಿ? ಕರ್ನಾಟಕ ಲಾಕ್ಡೌನ್:
ರಾಜ್ಯ ಕೊರೋನಾ 2ನೇ ಅಲೆ ಭೀಕರತೆಗೆ ಕಡಿವಾಣ ಹಾಕಲು ಸರ್ಕಾರ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ವೀಕೆಂಡ್ ಕರ್ಫ್ಯೂ ಯಶಸ್ಸಿನ ಬೆನ್ನಲ್ಲೇ 14 ದಿನಗಳ ಕಾಲ ಲಾಕ್ಡೌನ್ ಹೇರಲು ಸರ್ಕಾರ ನಿರ್ಧರಿಸಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ 14 ದಿನಗಳ ಕಾಲ ರಾಜ್ಯದಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. 2 ವಾರಗಳ ಕಾಲ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು. 2 ವಾರದಲ್ಲಿ ಕೊರೋನಾ ಹತೋಟಿಗೆ ಬರದಿದ್ದರೆ ಮತ್ತೆ ಲಾಕ್ಡೌನ್ ಮುಂದುವರೆಯುವ ಸುಳಿವನ್ನು ಸಿಎಂ ಯಡಿಯೂರಪ್ಪ ಕೊಟ್ಟಿದ್ದಾರೆ.
Published by:
MAshok Kumar
First published:
April 26, 2021, 2:29 PM IST