Coronavirus India: ಭಾರತದಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ; ಒಂದೇ ದಿನ 75,809 ಸೋಂಕಿತರು ಪತ್ತೆ

Coronavirus India Updates: ಅತಿಹೆಚ್ಚು ಕೊರೋನಾ ಸೋಂಕು ಪೀಡಿತರಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಬ್ರೆಜಿಲ್ ಅನ್ನು ಹಿಂದಿಕ್ಕಿ ಎರಡನೇ ಸ್ಥಾನ ತಲುಪಿತ್ತು‌‌. ಈಗ ತುಸು ಕಡಿಮೆಯಾಗಿ 75 ಸಾವಿರದ ಬಳಿ ಬಂದಿದೆ.

news18-kannada
Updated:September 8, 2020, 11:47 AM IST
Coronavirus India: ಭಾರತದಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ; ಒಂದೇ ದಿನ 75,809 ಸೋಂಕಿತರು ಪತ್ತೆ
ಕೊರೋನಾ ವೈರಸ್
  • Share this:
ನವದೆಹಲಿ (ಸೆ. 8): ದೇಶದಲ್ಲಿ ಕೊರೋನಾ ಸೋಂಕು ಹರಡುವಿಕೆ ಸುನಾಮಿ ಸ್ವರೂಪ ಪಡೆದುಕೊಂಡಿದ್ದು, ಪ್ರತಿದಿನ 90 ಸಾವಿರಕ್ಕೂ ಹೆಚ್ಚು‌ ಸೋಂಕು ಪೀಡಿತ ಪ್ರಕರಣಗಳು ಪತ್ತೆಯಾಗತೊಡಗಿದ್ದವು. ಪರಿಣಾಮವಾಗಿ ಅತಿಹೆಚ್ಚು ಕೊರೋನಾ ಸೋಂಕು ಪೀಡಿತರಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಬ್ರೆಜಿಲ್ ಅನ್ನು ಹಿಂದಿಕ್ಕಿ ಎರಡನೇ ಸ್ಥಾನ ತಲುಪಿತ್ತು‌‌. ಈಗ ತುಸು ಕಡಿಮೆಯಾಗಿ 75 ಸಾವಿರದ ಬಳಿ ಬಂದಿದೆ. ಭಾರತದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು 70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಆಗಸ್ಟ್ 26ರಿಂದ 75 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.‌ ಈಗ ಸೆಪ್ಟೆಂಬರ್ 2ರಿಂದ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಸೆಪ್ಟೆಂಬರ್ 2ರಂದು ದಾಖಲೆಯ 83,883 ಪ್ರಕರಣಗಳು, ಸೆಪ್ಟೆಂಬರ್ 3ರಂದು 83,341 ಪ್ರಕರಣಗಳು ಹಾಗೂ ಸೆಪ್ಟೆಂಬರ್ 4ರಂದು 86,432 ಪ್ರಕರಣಗಳು ಪತ್ತೆಯಾಗಿದ್ದವು.

ಸೆಪ್ಟೆಂಬರ್ 5ರಿಂದ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಲು ಆರಂಭಿಸಿವೆ. ಸೆಪ್ಟೆಂಬರ್ 5ರಂದು  90,633 ಪ್ರಕರಣಗಳು ಹಾಗೂ ಸೆಪ್ಟೆಂಬರ್ 6ರಂದು 90,802 ಪ್ರಕರಣಗಳು ಪತ್ತೆಯಾಗಿದ್ದವು. ಈಗ ಸ್ವಲ್ಪ ಕಡಿಮೆಯಾಗಿದೆ. ಸೆಪ್ಟೆಂಬರ್ 7ರಂದು 75,809 ಪ್ರಕರಣಗಳು ವರದಿಯಾಗಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಗುಣಮುಖರಾದವರಿಗೆ ಮತ್ತೆ ಕೊರೋನಾ ಸೋಂಕು; ಕ್ಲಿನಿಕಲ್ ಸ್ಟಡಿ‌ ನಡೆಸಲು ಸಚಿವ ಕೆ. ಸುಧಾಕರ್ ಸೂಚನೆ

ಇದಲ್ಲದೆ ಭಾನುವಾರ 1,113 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 72 ಸಾವಿರದ ಗಡಿ‌ ದಾಟಿದ್ದು 72,775ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 33,23,951 ಜನ ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 8,83,697 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಆಗಸ್ಟ್ 15ರಂದು 63,489, ಆಗಸ್ಟ್ 16ರಂದು 57,982, ಆಗಸ್ಟ್ 17ರಂದು 55,079, ಆಗಸ್ಟ್ 18ರಂದು 64,531, ಆಗಸ್ಟ್ 19ರಂದು 69,652, ಆಗಸ್ಟ್ 20ರಂದು 68,898, ಆಗಸ್ಟ್ 21ರಂದು 69,878, ಆಗಸ್ಟ್ 22ರಂದು 69,239, ಆಗಸ್ಟ್ 23ರಂದು 61,408, ಆಗಸ್ಟ್‌ 24ರಂದು 60,975, ಆಗಸ್ಟ್ 25ರಂದು 67,151, ಆಗಸ್ಟ್ 26ರಂದು 75,760, ಆಗಸ್ಟ್ 27ರಂದು 77,266, ಆಗಸ್ಟ್ 28ರಂದು 76,472, ಆಗಸ್ಟ್ 29ರಂದು 78,761, ಆಗಸ್ಟ್ 30ರಂದು 78,512, ಆಗಸ್ಟ್ 31ರಂದು 69,921, ಸೆಪ್ಟೆಂಬರ್ 1ರಂದು 78,357, ಸೆಪ್ಟೆಂಬರ್ 2ರಂದು 83,883, ಸೆಪ್ಟೆಂಬರ್ 4ರಂದು 86,432, ಸೆಪ್ಟೆಂಬರ್ 5ರಂದು 90,633, ಸೆಪ್ಟೆಂಬರ್ 6ರಂದು 90,802 ಹಾಗೂ ಸೆಪ್ಟೆಂಬರ್ 7ರಂದು 75,809 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Sushma Chakre
First published: September 8, 2020, 11:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading