ಡಿ.ಕೆ ಶಿವಕುಮಾರ್​​ಗೆ ಸೋನಿಯಾ, ರಾಹುಲ್​​ ಗಾಂಧಿ ದೂರವಾಣಿ ಕರೆ - ಶೀಘ್ರ ಗುಣಮುಖರಾಗಿ ಎಂದು ಹಾರೈಕೆ

ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹಾಗೆಯೇ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

news18-kannada
Updated:August 25, 2020, 5:23 PM IST
ಡಿ.ಕೆ ಶಿವಕುಮಾರ್​​ಗೆ ಸೋನಿಯಾ, ರಾಹುಲ್​​ ಗಾಂಧಿ ದೂರವಾಣಿ ಕರೆ - ಶೀಘ್ರ ಗುಣಮುಖರಾಗಿ ಎಂದು ಹಾರೈಕೆ
ಡಿ.ಕೆ ಶಿವಕುಮಾರ್​​
  • Share this:
ಬೆಂಗಳೂರು(ಆ.25): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕೋವಿಡ್​​-19 ಪಾಸಿಟಿವ್​​ ಕಾಣಿಸಿಕೊಂಡಿದೆ. ಹೀಗಾಗಿ ಡಿ.ಕೆ ಶಿವಕುಮಾರ್​​ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ಸಿಗರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

ಡಿ.ಕೆ ಶಿವಕುಮಾರ್​ ಅವರಿಗೆ ಕೊರೋನಾ ಕಾಣಿಸಿಕೊಂಡಿದೆ ಎಂದು ಗೊತ್ತಾದ ಕೂಡಲೇ ಸೋನಿಯಾ ಗಾಂಧಿ ಮತ್ತು ರಾಹುಲ್​​ ಗಾಂಧಿ ಫೋನ್​​ ಮಾಡಿ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಹಾಗೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕೂಡ ಡಿಕೆಶಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು, ಮಾಜಿ ಸಿಎಂ ಸಿದ್ದರಾಮಯ್ಯ, ಎಚ್​​.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಡಿ.ಕೆ ಶಿವಕುಮಾರ್​ ಆದಷ್ಟು ಬೇಗ ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ. ಎಂದಿನಂತೆ ತಮ್ಮ ಕೆಲಸದಲ್ಲಿ ಸಕ್ರಿಯರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಕೊರೋನಾ; ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹಾಗೆಯೇ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಸಂಸದೆ ಸುಮಲತಾ ಅಂಬರೀಷ್, ಅನೇಕ ಶಾಸಕರು, ಸಂಸದರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.
Published by: Ganesh Nachikethu
First published: August 25, 2020, 5:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading