ಸಾಮಾಜಿಕ ಕ್ಲಬ್​​ ಗಳಲ್ಲಿ ಕ್ರೀಡಾ ಚಟುವಟಿಕೆಗೆ ಅವಕಾಶ ; ರಾಜಕೀಯ, ಮನೋರಂಜನೆ, ಶೈಕ್ಷಣಿಕ ಕಾರ್ಯಗಳಿಗೆ ನಿರ್ಬಂಧ ಮುಂದುವರಿಕೆ

ಸಿನಿಮಾ ಮಂದಿರಗಳು, ಈಜುಕೊಳಗಳು, ಮನರಂಜನಾ ಸ್ಥಳಗಳು, ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್‌ಗಳು, ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ.

news18-kannada
Updated:August 25, 2020, 7:17 AM IST
ಸಾಮಾಜಿಕ ಕ್ಲಬ್​​ ಗಳಲ್ಲಿ ಕ್ರೀಡಾ ಚಟುವಟಿಕೆಗೆ ಅವಕಾಶ ; ರಾಜಕೀಯ, ಮನೋರಂಜನೆ, ಶೈಕ್ಷಣಿಕ ಕಾರ್ಯಗಳಿಗೆ ನಿರ್ಬಂಧ ಮುಂದುವರಿಕೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಆಗಸ್ಟ್​. 25): ಕೊರೋನಾ ಲಾಕ್ ಡೌನ್ ನಿಂದ ಬಂದ್​ ಆಗಿದ್ದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂಗಳು ಪುನರಾರಂಭವಾಗಿವೆ. ಪ್ರೇಕ್ಷಕರಿಲ್ಲದೇ ಬರೀ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟು ಸರ್ಕಾರ ಆದೇಶ ಹೊರಡಿಸಿದೆ. ಸಾಮಾಜಿಕ ಕ್ಲಬ್ ಗಳಲ್ಲಿ ಕ್ರೀಡಾ ಚಟುವಟಿಕೆ ಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಕ್ಲಬ್ ಗಳಲ್ಲಿ ಮೇಜಿನ ಮೇಲೆ ಆಹಾರ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡಲಾಗಿದೆ.

ಇನ್ನೂ ಸಾಮಾಜಿಕ ಕ್ಲಬ್ ಗಳಲ್ಲಿ ಮದ್ಯ ಮಾರಾಟ ಸರಬರಾಜನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಇಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸೂಚನೆ ಕೂಡ ನೀಡಲಾಗಿದೆ. ಇನ್ನೂ ಸಿನಿಮಾ ಮಂದಿರಗಳು, ಈಜುಕೊಳಗಳು, ಮನರಂಜನಾ ಸ್ಥಳಗಳು, ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್‌ಗಳು, ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ.



ಸಾಮಾಜಿಕ / ರಾಜಕೀಯ / ಕ್ರೀಡೆ / ಮನೋರಂಜನ / ಶೈಕ್ಷಣಿಕ / ಸಾಂಸ್ಕೃತಿಕ / ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ ನಿರ್ಬಂಧ ಮುಂದುವರಿಕೆ ಮಾಡಲಾಗಿದೆ.  65 ವರ್ಷ ಮೇಲ್ಪಟ್ಟ ವ್ಯಕ್ತಿಗಳು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಅಗತ್ಯ ಮತ್ತು ಆರೋಗ್ಯದ ಆದೇಶಗಳನ್ನು ಹೊರತುಪಡಿಸಿ ಮನೆಯಲ್ಲಿಯೇ ಇರಲು ಸಲಹೆ ನೀಡಲಾಗಿದೆ. ಈ ಕುರಿತು ಇಂದು ಸರ್ಕಾರ ಆದೇಶ ಹೊರಡಿಸಿದೆ, ಈ ನಿಯಮಗಳನ್ನು ಕಡ್ಡಾಯವಾಗಿ ಜನರು ಪಾಲಿಸುವಂತೆ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ : Coronavirus Karnataka Update : ರಾಜ್ಯದಲ್ಲಿ ಇಂದು ಒಂದೇ ದಿನ 5851 ಕೊರೋನಾ ಕೇಸ್​ ಪತ್ತೆ, 130 ಮಂದಿ ಸಾವು

ಮೊದಲು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣ ಮಾಡುವವರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಬೇಕಿತ್ತು. ಇದೀಗ ಸರ್ಕಾರ ಆ ನಿಯಮವನ್ನು ಬದಲಿದ್ದು, ಕ್ವಾರಂಟೈನ್​ ನಿಯಮ ತೆಗೆದು ಹಾಕಿದೆ.
ಕೋವಿಡ್ ಸಂಬಂಧಿತವಾಗಿ ರಾಜ್ಯ ಸರ್ಕಾರ ಹೇರಿದ್ದ ಎಲ್ಲಾ ನಿಯಮಗಳು ರದ್ದು ಮಾಡಿದೆ. ಈ ಮೊದಲು ಸೇವಾ ಸಿಂಧು ಪೋರ್ಟಲ್​ನಲ್ಲಿ ಅಂತಾರಾಜ್ಯ ಪ್ರಯಾಣಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕಿತ್ತು. ಗಡಿಯಲ್ಲಿ ಆರೋಗ್ಯ ತಪಾಸಣೆ, ಕ್ವಾರಂಟೈನ್ ನಿಯಮಗಳನ್ನು ಹೇರಲಾಗಿತ್ತು. ಇದೀಗ ಆ ಯಾವ ನಿಯಮ ಇರುವುದಿಲ್ಲ.
Published by: G Hareeshkumar
First published: August 25, 2020, 7:17 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading