ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ತಪಾಸಣೆ ಪ್ರಮಾಣ ಹೆಚ್ಚಳಕ್ಕೆ ಕ್ರಮ; ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಹೋಂ ಕ್ವಾರೆಂಟೈನ್ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ. ಪ್ರಾಯೋಗಿಕವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹೋಂ ಕ್ವಾರೆಂಟೈನ್ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಹೋಂ ಕ್ವಾರೆಂಟೈನ್‍ನಲ್ಲಿರುವವರಿಗೆ ಅಗತ್ಯವಿರುವ ಸಾಧನಗಳನ್ನು ಖಾತ್ರಿಪಡಿಸಿ, ಅವರ ನಿರಂತರ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್‌ ತಿಳಿಸಿದ್ದಾರೆ.

news18-kannada
Updated:August 21, 2020, 7:10 AM IST
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ತಪಾಸಣೆ ಪ್ರಮಾಣ ಹೆಚ್ಚಳಕ್ಕೆ ಕ್ರಮ; ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಪ್ರಾತಿನಿಧಿಕ ಚಿತ್ರ.
  • Share this:
ಶಿವಮೊಗ್ಗ; ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ಹೆಚ್ಚುತ್ತಿದ್ದು, ಇದನ್ನು ಪತ್ತೆ ಹಚ್ಚಲು ತಪಾಸಣೆ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆ ನಡೆಸಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾಧಿಕಾರಿ ಶಿವಕುಮಾರ್‌, "ಪ್ರಸ್ತುತ ಗಂಟಲ ದ್ರವ ಸಂಗ್ರಹಿಸುವ ಕಾರ್ಯಕ್ಕೆ 19 ಸಂಚಾರಿ ತಂಡಗಳಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ 63 ತಪಾಸಣಾ ತಂಡಗಳಿವೆ. ಶಿವಮೊಗ್ಗ ನಗರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಗಂಟಲ ದ್ರವ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಬೇಕು. ಇದಕ್ಕಾಗಿ ಐದು ಸಂಚಾರಿ ತಂಡಗಳನ್ನು ಸಜ್ಜುಗೊಳಿಸುವಂತೆ" ತಿಳಿಸಿದ್ದಾರೆ.

"ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ಆರ್‌ಟಿಪಿಸಿಆರ್ ಮೂಲಕ ಪ್ರತಿದಿನ 1,200 ಸ್ಯಾಂಪಲ್ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು ಇನ್ನು ಮುಂದೆ 1,500 ಕ್ಕೆ ಹೆಚ್ಚಿಸಬೇಕು. ಇದೇ ರೀತಿ ಆರ್‌ಎಟಿ ಮೂಲಕ 600 ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1200 ಕ್ಕೆ ಹೆಚ್ಚಿಸಬೇಕು. ಪ್ರತಿದಿನ ಮೆಗ್ಗಾನ್ ಆಸ್ಪತ್ರೆಯಲ್ಲಿ 500, ವಿಡಿಆರ್‌ಎಲ್‌ನಲ್ಲಿ 500 ಪರೀಕ್ಷೆ ಗುರಿಯನ್ನು ಸಾಧಿಸಬೇಕು. ಒಂದೆರಡು ದಿನಗಳಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಗಂಟಲ ದ್ರವ ಪರೀಕ್ಷೆ ಆರಂಭವಾಗಲಿದ್ದು, ಅಲ್ಲಿಯೂ ಪ್ರತಿ ದಿನ 500 ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು" ಎಂದು ಡಿಸಿ  ಸ್ಪಷ್ಟಪಡಿಸಿದರು.

"ಹೋಂ ಕ್ವಾರೆಂಟೈನ್ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ. ಪ್ರಾಯೋಗಿಕವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹೋಂ ಕ್ವಾರೆಂಟೈನ್ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಹೋಂ ಕ್ವಾರೆಂಟೈನ್‍ನಲ್ಲಿರುವವರಿಗೆ ಅಗತ್ಯವಿರುವ ಸಾಧನಗಳನ್ನು ಖಾತ್ರಿಪಡಿಸಿ, ಅವರ ನಿರಂತರ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು.

ಇದನ್ನೂ ಓದಿ : ಆರೋಗ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ 30 ಲಕ್ಷ ಪರಿಹಾರ, ತನಿಖೆಗೆ ಆದೇಶ; ಸಚಿವ ಸುಧಾಕರ್‌ ಆಶ್ವಾಸನೆ

ಗ್ರಾಮೀಣ ಪ್ರದೇಶದಲ್ಲಿ ಕನಿಷ್ಟ 6 ಮಂದಿ ಹಾಗೂ ನಗರ ಪ್ರದೇಶದಲ್ಲಿ ಕನಿಷ್ಟ 10 ಮಂದಿ ಪ್ರಾಥಮಿಕ ಸೋಂಕಿತರನ್ನು ಗುರುತಿಸಿ ಅವರ ಮೇಲೆ ನಿಗಾ ಇರಿಸಬೇಕು. ಕೋವಿಡ್ ಕೇರ್ ಸೆಂಟರ್‍ನಲ್ಲಿ ನಿಯೋಜಿಸಲಾಗಿರುವ ಆಯುರ್ವೇದಿಕ್ (ಆಯುಷ್) ವೈದ್ಯರು ಕರ್ತವ್ಯಕ್ಕೆ ತೆರಳಲು ಹಿಂದೇಟು ಹಾಕಿದರೆ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಶಿವಕುಮಾರ್ ನೀಡಿದ್ದಾರೆ. ಇದಲ್ಲದೆ, "ಅನಧಿಕೃತವಾಗಿ ರಜೆ ಹಾಕಿರುವ ವೈದ್ಯರಿಗೆ ನೊಟೀಸು ಜಾರಿಗೊಳಿಸುವಂತೆಯೂ" ಅವರು ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Published by: MAshok Kumar
First published: August 21, 2020, 7:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading