ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಭಿನ್ನ ಲೆಕ್ಕಾಚಾರ; ಸಚಿವ ಜಗದೀಶ್ ಶೆಟ್ಟರ್ ಹೆಸರು?
ಬಿಜೆಪಿ ವರಿಷ್ಠರ ಲೆಕ್ಕಾಚಾರ ಎನಿದೆ ಎಂಬುದು ಮಾತ್ರ ಇನ್ನೂ ನಿಗೂಢ. ಈ ನಡುವೆ ಸಚಿವ ಹಾಗೂ ಸುರೇಶ್ ಅಂಗಡಿ ಬಿಗರು ಆಗಿರುವ ಜಗದೀಶ್ ಶೆಟ್ಟರ್ ಹೆಸರು ಕೇಳಿ ಬಂದಿದೆ. ಶೆಟ್ಟರ್ ಅವರನ್ನು ರಾಷ್ಟ್ರ ರಾಜಕಾರಣದತ್ತ ಚಿತ್ತ ಹರಿಸಲು ಉಪ ಚುನಾವಣೆ ವೇದಿಕೆ ಆಗಲಿದೆ ಎಂಬ ಮಾತು ಕೇಳಿ ಬರುತ್ತಿವೆ.
news18-kannada Updated:November 24, 2020, 6:58 PM IST

ಬೆಳಗಾವಿ ಲೋಕಸಭಾ ಕ್ಷೇತ್ರ
- News18 Kannada
- Last Updated: November 24, 2020, 6:58 PM IST
ಬೆಳಗಾವಿ(ನವೆಂಬರ್, 24): ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭಾ ಸ್ಥಾನ ತೆರವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗ ಚುನಾವಣೆಗೆ ಸಿದ್ಧತೆಯನ್ನು ನಡೆಸುತ್ತಿದೆ. ಮತ್ತೊಂದು ಕಡೆ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆಯತ್ತ ಗಮನ ಹರಿಸಿವೆ. ಬಿಜೆಪಿಯಲ್ಲಿ 10 ಕ್ಕೂ ಹೆಚ್ಚು ಜನ ಆಕಾಂಕ್ಷಿಗಳು ತೆರೆ ಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ. ಈ ನಡುವೆ ಮಾಜಿ ಸಿಎಂ ಹಾಗೂ ಹಾಲಿ ಸಚಿವರ ಹೆಸರು ಜೋರಾಗಿ ಕೇಳಿ ಬಂದಿದೆ. ತೆರೆ ಮರೆಯಲ್ಲಿ ಈ ಬಗ್ಗೆ ಕಸರತ್ತುಗಳು ನಡೆಯುತ್ತಿವೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಂಗಡಿ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡಬೇಕು ಎನ್ನುವ ಮಾತು ಇದೆ. ದಿ.ಸುರೇಶ್ ಅಂಗಡಿ ಹೆಂಡತಿ ಮಂಗಳ, ಮಕ್ಕಳಾದ ಸ್ಪೂರ್ತಿ, ಶ್ರದ್ಧಾ ಹೆಸರುಗಳ ಇವೆ. ಈ ನಡುವೆ ಬೆಳಗಾವಿ ಜಿಲ್ಲೆಯ ಅನೇಕ ಮಾಜಿ ಶಾಸಕರು, ಪಕ್ಷದ ಮುಖಂಡರು ಟಿಕೆಟ್ ಪಡೆಯಲು ಬೆಂಗಳೂರು, ದೆಹಲಿ ಮಟ್ಟದಲ್ಲಿ ಲಾಭಿ ನಡೆಸುತ್ತಿದ್ದಾರೆ.
ಆದರೆ, ಬಿಜೆಪಿ ವರಿಷ್ಠರ ಲೆಕ್ಕಾಚಾರ ಎನಿದೆ ಎಂಬುದು ಮಾತ್ರ ಇನ್ನೂ ನಿಗೂಢ. ಈ ನಡುವೆ ಮಾಜಿ ಸಿಎಂ ಹಾಲಿ ಸಚಿವ ಹಾಗೂ ಸುರೇಶ್ ಅಂಗಡಿ ಬಿಗರು ಆಗಿರುವ ಜಗದೀಶ್ ಶೆಟ್ಟರ್ ಹೆಸರು ಕೇಳಿ ಬಂದಿದೆ. ಶೆಟ್ಟರ್ ಅವರನ್ನು ರಾಷ್ಟ್ರ ರಾಜಕಾರಣದತ್ತ ಚಿತ್ತ ಹರಿಸಲು ಉಪ ಚುನಾವಣೆ ವೇದಿಕೆ ಆಗಲಿದೆ ಎಂಬ ಮಾತು ಕೇಳಿ ಬರುತ್ತಿವೆ. ಸಚಿವ ಜಗದೀಶ್ ಶೆಟ್ಟರ್ ಹೆಸರು ರಾಜ್ಯಪಾಲ ಹುದ್ದೆಗೆ ಈ ಹಿಂದೆ ಕೇಳಿ ಬಂದಿತ್ತು. ಸಿಎಂ ಆಗಿ ಕೆಲಸ ನಿರ್ವಹಣೆ ಮಾಡಿದ್ದ ಶೆಟ್ಟರ್ ಮತ್ತೆ ಸಚಿವರಾಗುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆಗಿತ್ತು. ಆದರೆ, ಈ ಸಿಎಂ ಬದಲಾವಣೆ ಕೂಗು ಕೇಳಿ ಬಂದಿದೆ. ಸಿಎಂ ಬಿ ಎಸ್ ಯಡಿಯೂರಪ್ಪ ಹಿರಿಯರಾಗಿದ್ದು, ಅವರ ಜತೆಗೆ ಶೆಟ್ಟರ್ ಕೆಲಸ ಮಾಡುತ್ತಿದ್ದಾರೆ. ಮುಂದೆ ಸಿಎಂ ಬದಲಾವಣೆ ಆದರೆ ಹೇಗೆ ಸಚಿವರಾಗಿ ಕೆಲಸ ಮಾಡಲು ಸಾಧ್ಯ. ಹೀಗಾಗಿ ಸಚಿವ ಶೆಟ್ಟರ್ ಅವರನ್ನು ದೆಹಲಿಗೆ ಕಳುಹಿಸಿ, ಕೇಂದ್ರ ಸಚಿವ ಅಥವಾ ಬೇರೆ ಜವಾಬ್ದಾರಿ ನೀಡಬಹುದು ಎಂದು ಹೇಳಲಾಗಿದೆ.
ಇದನ್ನೂ ಓದಿ : ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್ ಸಿಎಂ ಅಭಿಯಾನ: ಚಾಮರಾಜನಗರಕ್ಕೆ ಭೇಟಿ ನೀಡದ ಬಗ್ಗೆ ಆಕ್ರೋಶ
ಡಿಸೆಂಬರ್ 5 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕಾರಿಣಿಯಲ್ಲಿ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಯಲಿದೆ. ಸ್ಥಳೀಯ ಮುಖಂಡರು, ಸಚಿವರು ಹಾಗೂ ಶಾಸಕರ ಅಭಿಪ್ರಾಯವನ್ನು ಪಕ್ಷದ ವರಿಷ್ಠರು ಪಡೆಯಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ಮುಂದೆ ಬಂದಿದ್ದಾರೆ. ಈ ಪೈಕಿ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ವಿಶ್ವನಾಥ್ ಪಾಟೀಲ್, ಜಗದೀಶ್ ಮೆಟಗುಡ್ಡ, ಎಂ ಎಲ್ ಸಿ ಮಹಾಂತೇಶ್ ಕವಠಗಿಮಠ, ಮಾಜಿ ಸಂಸದ ಪ್ರಭಾಕರ್ ಕೋರೆ, ರಾಜು ಚಿಕ್ಕನಗೌಡರ್, ವಿರೇಶ್ ಕಿವಡಸಣ್ಣವರ್ ಸೇರಿ ಅನೇಕರು ಇದ್ದಾರೆ. ಪಕ್ಷ ಯಾರಿಗೆ ಮಣೆ ಹಾಕಿಲಿದೆ ಎಂಬುದು ಇನ್ನೂ ಕುತೂಹಲ.
ಆದರೆ, ಬಿಜೆಪಿ ವರಿಷ್ಠರ ಲೆಕ್ಕಾಚಾರ ಎನಿದೆ ಎಂಬುದು ಮಾತ್ರ ಇನ್ನೂ ನಿಗೂಢ. ಈ ನಡುವೆ ಮಾಜಿ ಸಿಎಂ ಹಾಲಿ ಸಚಿವ ಹಾಗೂ ಸುರೇಶ್ ಅಂಗಡಿ ಬಿಗರು ಆಗಿರುವ ಜಗದೀಶ್ ಶೆಟ್ಟರ್ ಹೆಸರು ಕೇಳಿ ಬಂದಿದೆ. ಶೆಟ್ಟರ್ ಅವರನ್ನು ರಾಷ್ಟ್ರ ರಾಜಕಾರಣದತ್ತ ಚಿತ್ತ ಹರಿಸಲು ಉಪ ಚುನಾವಣೆ ವೇದಿಕೆ ಆಗಲಿದೆ ಎಂಬ ಮಾತು ಕೇಳಿ ಬರುತ್ತಿವೆ.