ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ; ಸಂತಸದಲ್ಲಿ ಪ್ರಯಾಣಿಕರು

ಹುಬ್ಬಳ್ಳಿಯಿಂದ ವಿವಿಧ ಸ್ಥಳಗಳಿಗೆ ಹೋಗುವ  ಬಸ್ಸುಗಳ ಸಮಯ ಹಾಗೂ ಮಾರ್ಗದ ವಿವರವನ್ನು ಈಗಾಗಲೇ ಪ್ರಯಾಣಿಕರಿಗೆ ಒದಗಿಸಲಾಗುತ್ತಿದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ  ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುತ್ತದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

news18-kannada
Updated:September 22, 2020, 7:22 AM IST
ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ; ಸಂತಸದಲ್ಲಿ ಪ್ರಯಾಣಿಕರು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್​​
  • Share this:
ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಹುಬ್ಬಳ್ಳಿಯಿಂದ ತೆರಳುವ ಸಾರಿಗೆ ಬಸ್  ಸಂಚಾರವನ್ನು ಮತ್ತೆ ಪ್ರಾರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ  ವಿಜಯಪುರ  ಹಾಗೂ ಚಿಕ್ಕೋಡಿ  ಮಾರ್ಗವಾಗಿ ಮಹಾರಾಷ್ಟ್ರದ  ಪ್ರಮುಖ ಸ್ಥಳಗಳಾದ ಸೋಲಾಪುರ, ಬಾರ್ಶಿ, ಪಂಡರಾಪುರ, ಔರಂಗಾಬಾದ್, ಈಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ  ಬಸ್ಸುಗಳ  ಸಂಚಾರ ಆರಂಭಿಸಲಾಗಿದೆ. ನಿಪ್ಪಾಣಿ- ಕೊಲ್ಲಾಪುರ ಮಾರ್ಗವಾಗಿ ಪುಣೆ, ಪಿಂಪ್ರಿ, ಮುಂಬೈ, ಬೊರಿವಿಲಿ, ಶಿರಡಿ ಮತ್ತಿತರ ಸ್ಥಳಗಳಿಗೆ  ಶೀಘ್ರದಲ್ಲಿ ಬಸ್ ಸೇವೆ ಪ್ರಾರಂಭಿಸಲಾಗುತ್ತದೆ ಎಂದು  ವಾ ಕ ರ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ 2 ವೋಲ್ವೋ, 4 ಎಸಿ ಸ್ಲೀಪರ್, 1 ರಾಜಹಂಸ ಹಾಗೂ 14 ವೇಗದೂತ ಸಾರಿಗೆಗಳು ಸೇರಿದಂತೆ ಒಟ್ಟು  21 ಬಸ್ಸುಗಳು ಮಹಾರಾಷ್ಟ್ರ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಇವುಗಳೊಂದಿಗೆ ಹೊರ ಜಿಲ್ಲೆಗಳಿಂದ ಹುಬ್ಬಳ್ಳಿಯ ಮಾರ್ಗವಾಗಿ ನಿತ್ಯ 57 ಬಸ್ಸುಗಳು  ಮಹಾರಾಷ್ಟ್ರ ರಾಜ್ಯಕ್ಕೆ ಸಂಚರಿಸುತ್ತಿದ್ದವು.

'ಛೋಟಾ ಮುಂಬೈ' ಖ್ಯಾತಿಯ ಹುಬ್ಬಳ್ಳಿಗರಿಗೂ ಮಹಾರಾಷ್ಟ್ರಕ್ಕೂ ಅವಿನಾಭಾವ ಸಂಬಂಧವಿದೆ.ಮುಂಬೈ, ಶಿರಡಿ, ಪಿಂಪ್ರಿ, ಪುಣೆ, ಬೊರಿವಿಲಿ, ಈಚಲಕರಂಜಿ, ಔರಂಗಾಬಾದ್, ಮೀರಜ್, ಸೋಲಾಪುರ, ಬಾರ್ಶಿ, ಪಂಡರಾಪುರ ಮತ್ತಿತರ ಸ್ಥಳಗಳಲ್ಲಿ ಬಹಳಷ್ಟು ಕನ್ನಡಿಗರಿದ್ದಾರೆ. ಈ ಸ್ಥಳಗಳ ನಡುವೆ  ಸಂಚರಿಸುವ ಬಸ್ಸುಗಳು ಬರೀ ಸಾರಿಗೆ ಸಂಚಾರಕ್ಕಷ್ಟೇ ಸೀಮಿತವಾಗದೆ ಉಭಯ ರಾಜ್ಯಗಳ ಹಲವಾರು ಜನರ  ಶಿಕ್ಷಣ, ಉದ್ಯೋಗ, ವಾಣಿಜ್ಯ, ಕೌಟುಂಬಿಕ ಹಾಗೂ ಭಾವನಾತ್ಮಕ ಸಂಬಂಧಗಳ ಸಂಪರ್ಕ ಸೇತುವಾಗಿವೆ.

ಹುಬ್ಬಳ್ಳಿಯಿಂದ ವಿವಿಧ ಸ್ಥಳಗಳಿಗೆ ಹೋಗುವ  ಬಸ್ಸುಗಳ ಸಮಯ ಹಾಗೂ ಮಾರ್ಗದ ವಿವರವನ್ನು ಈಗಾಗಲೇ ಪ್ರಯಾಣಿಕರಿಗೆ ಒದಗಿಸಲಾಗುತ್ತಿದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ  ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುತ್ತದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತ ಹೋರಾಟ; ಹೋರಾಟಗಾರರನ್ನು ಭಯೋತ್ಪಾದಕರೆಂದ ನಟಿ ಕಂಗನಾ

ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಪ್ರತಿಭಟನೆ

ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಸಂಘದಿಂದ ಪ್ರತಿಭಟನೆ ನಡೆಯಿತು. ಲಾಕ್‌ಡೌನ್ ವೇಳೆ ಕೇಂದ್ರ ಸರ್ಕಾರ ಘೋಷಿಸಿದ್ದ ಅನುದಾನ ಬಹುತೇಕ ಆಟೋ ಚಾಲಕರಿಗೆ ತಲುಪಿಲ್ಲ. ಸ್ವಸಹಾಯ ಸಂಘಗಳಲ್ಲಿ ಪಡೆದ ಸಾಲ ತೀರಿಸಲು ಆಗುತ್ತಿಲ್ಲ‌. ಸರ್ಕಾರ ಆಟೋ ಚಾಲಕರ ಸಾಲವನ್ನು ಮನ್ನಾ ಮಾಡಬೇಕು‌.
ಸ್ವಸಹಾಯ ಸಂಘಗಳಲ್ಲಿ ಪಡೆದ ಸಾಲ ತೀರಿಸಲು ಹೆಚ್ಚಿನ ಸಮಯವಕಾಶ ಸಿಗುವಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ರು. ಆಟೋ ಮಾಲಿಕರು ಮತ್ತು ಚಾಲಕರ ಸಂಘದ ನೇತ್ರತ್ವದಲ್ಲಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಮಾಡಿದ್ರು. ಆಟೋ ಚಾಲಕರ ಬೇಡಿಕೆಗಳನ್ನು ಆದಷ್ಟು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಹುಬ್ಬಳ್ಳಿ ತಹಶೀಲ್ದಾರ್ ಮುಖಾಂತರ ಸಿಎಮ್‌ಗೆ ಮನವಿ ಸಲ್ಲಿಸಿದರು.
Published by: MAshok Kumar
First published: September 22, 2020, 7:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading