ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ, ಯಡಿಯೂರಪ್ಪನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ; ಪ್ರಲ್ಹಾದ್ ಜೋಶಿ

ಒಂದು ಕ್ಷೇತ್ರದ ಶಾಸಕರನ್ನು ಕರೆದುಕೊಂಡು ನಾಯಕತ್ವ ಬದಲಾವಣೆ ಆಗಲ್ಲಾ. ಯತ್ನಾಳ್ ಹೇಳಿಕೆ ಬಗ್ಗೆ ನಾನು ಏನೂ ಮಾತಾಡಲ್ಲಾ. ಸದ್ಯಕ್ಕೆ ಯಾವುದೇ ರೀತಿಯ ನಾಯಕತ್ವ ಬದಲಾವಣೆಯ ಪ್ರಸ್ತಾವಣೆಯಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

news18-kannada
Updated:October 29, 2020, 2:06 PM IST
ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ, ಯಡಿಯೂರಪ್ಪನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ; ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
  • Share this:
ಹುಬ್ಬಳ್ಳಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತದಾನ ಮಾಡಿದರು. ಕೇಶ್ವಾಪುರದ ಫಾತಿಮಾ ಹೈಸ್ಕೂಲ್ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ ನಂತರ ಮಾತನಾಡಿದ ಅವರು, ಹುಬ್ಬಳ್ಳಿಯ ಖಾಸಗಿ ಹೊಟೆಲ್‌ನಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯ ಬಗ್ಗೆ ಮಾಹಿತಿ ನೀಡಿದರು. "ಬೆಳಗಾವಿ ಡಿಸಿಸಿ ಬ್ಯಾಂಕ್ ಮತ್ತು ಮಸ್ಕಿ ಚುನಾವಣೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಪಕ್ಷದ ನಾಯಕರ ನಡುವೆ ಭಿನ್ನಾಭಿಪ್ರಾಯಗಳಿತ್ತು. ನಳಿನ್‌ಕುಮಾರ್ ಕಟೀಲ್ ಸ್ಥಳೀಯ ನಾಯಕರ ಅಹವಾಲು ಕೇಳಿದ್ದಾರೆ. ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದ್ದೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ನಾವು ಇನ್ನೂ ಚರ್ಚೆ ಪ್ರಾರಂಭಿಸಿಲ್ಲ. ರಮೇಶ್ ಜಾರಕಿಹೋಳಿಯವರಿಗೆ ನಿನ್ನೆಯ ಸಭೆಗೆ ಆಹ್ವಾನ ಇರಲಿಲ್ಲ. ನಾಯಕತ್ವ ಬದಲಾವಣೆಯ ಚರ್ಚೆ ಆಗಿಲ್ಲ" ಎಂದು ಮಾಹಿತಿ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಯತ್ನಾಳ್ ಕುರಿತು ಮಾತನಾಡಿರುವ ಅವರು, "ಒಂದು ಕ್ಷೇತ್ರದ ಶಾಸಕರನ್ನು ಕರೆದುಕೊಂಡು ನಾಯಕತ್ವ ಬದಲಾವಣೆ ಆಗಲ್ಲಾ. ಯತ್ನಾಳ್ ಹೇಳಿಕೆ ಬಗ್ಗೆ ನಾನು ಏನೂ ಮಾತಾಡಲ್ಲಾ. ಸದ್ಯಕ್ಕೆ ಯಾವುದೇ ರೀತಿಯ ನಾಯಕತ್ವ ಬದಲಾವಣೆಯ ಪ್ರಸ್ತಾವಣೆಯಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರು ಉತ್ತಮ ಕೆಲಸ ಮಾಡಲಿ ಎಂದು ಶುಭ ಕೋರೋಣ. ಸಿಎಮ್ ಹುದ್ದೆ ಸದ್ಯಕ್ಕೆ  ಖಾಲಿ ಇಲ್ಲ. ಖಾಲಿ ಆದಾಗ ಉತ್ತರ ಕರ್ನಾಟಕದವರು ಸಿಎಮ್ ಆಗಬೇಕೆನ್ನುವ ಬಗ್ಗೆ ಚರ್ಚಿಸೋಣ ಎಂದು ಜಾರಿಕೊಂಡರು.

ಇದನ್ನೂ ಓದಿ : ಕರ್ನಾಟಕ ಪೊಲೀಸ್​ ಇಲಾಖೆಯಲ್ಲಿ ಮತ್ತೆ ಬಿಕ್ಕಟ್ಟು; ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಡಿಜಿಪಿ ರವೀಂದ್ರನಾಥ್

ವಿಧಾನ ಪರಿಷತ್ - ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆ‌ ಫಲಿತಾಂಶದ ನಂತರ ಮಹತ್ವದ ರಾಜಕೀಯ ಬದಲಾವಣೆಗಳು ಆಗಲಿವೆ: ಬಸವರಾಜ್ ಹೊರಟ್ಟಿ

ಬಿಜೆಪಿ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು. ಯಡಿಯೂರಪ್ಪ ಬಹಳ ದಿನ ಸಿಎಮ್ ಆಗಿ ಇರುವುದಿಲ್ಲ ಎಂದು ಮಾಜಿ ಸಚಿವ ಬಸವರಾಜ್ ಹೊರಟ್ಟಿ ಬಾಂಬ್ ಸಿಡಿಸಿದ್ದಾರೆ‌. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, "ಯತ್ನಾಳ್ ಸಿಎಮ್ ಬದಲಾವಣೆ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಶಿಸ್ತಿನ ಪಕ್ಷ ಅಂತಾ ಹೇಳ್ಕೊಳ್ಳೋ ಬಿಜೆಪಿಯವ್ರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ. ಇದನ್ನ ನೋಡಿದ್ರೆ ಬಹಳಷ್ಟು ಬಿಜೆಪಿ ನಾಯಕರ ಬೆಂಬಲ ಯತ್ನಾಳ್ ಅವರಿಗಿದೆ ಅನ್ನೋದು ಸ್ಪಷ್ಟ.

ಪಕ್ಷದೊಳಗಿನ ಬೆಂಕಿ ಯಾವ ಸಂದರ್ಭದಲ್ಲಾದರೂ ಹೊತ್ತಿ ಉರಿಯಬಹುದು. ಯಾವುದೇ ಪಕ್ಷದ ಶಾಸಕರು ಮತ್ತೆ ಚುನಾವಣೆಗೆ ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಬಿದ್ದರೆ ಏನು ಬೇಕಾದರೂ ಬೆಳವಣಿಗೆ ಆಗಬಹುದು. ಪರಿಷತ್ ಮತ್ತು ಉಪ ಚುನಾವಣೆ‌ ಫಲಿತಾಂಶದ ನಂತರ ರಾಜಕೀಯ ಬದಲಾವಣೆಗಳು ಆಗಲಿವೆ" ಎಂದು ಭವಿಷ್ಯ ನುಡಿದಿದ್ದಾರೆ.
Published by: MAshok Kumar
First published: October 29, 2020, 2:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading