ಚಿಕ್ಕಬಳ್ಳಾಪುರ ನಗರಸಭೆ ಬಿಜೆಪಿ ತೆಕ್ಕೆಗೆ : ಬಹುಮತ ಇದ್ದರೂ ಸೋತು ಮುಖಭಂಗ ಅನುಭವಿಸಿದ ಕಾಂಗ್ರೆಸ್

ಸಂಖ್ಯಾ ಬಲವನ್ನು ನೋಡಿದರೆ ಕಾಂಗ್ರೆಸ್ ಗೆ ಸುಲಭವಾಗಿ ಅಧಿಕಾರದ ಚುಕ್ಕಾಣಿ ದೊರೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಬಿಜೆಪಿ ಗೆಲುವು ಸಾಧಿಸುವಂತೆ ಸಚಿವ ಡಾ.ಕೆ.ಸುಧಾಕರ್ ಎಲ್ಲಾ ನಗರಸಭಾ ಸದಸ್ಯರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

news18-kannada
Updated:October 30, 2020, 7:15 PM IST
ಚಿಕ್ಕಬಳ್ಳಾಪುರ ನಗರಸಭೆ ಬಿಜೆಪಿ ತೆಕ್ಕೆಗೆ : ಬಹುಮತ ಇದ್ದರೂ ಸೋತು ಮುಖಭಂಗ ಅನುಭವಿಸಿದ ಕಾಂಗ್ರೆಸ್
ಬಿಜೆಪಿ
  • Share this:
ಚಿಕ್ಕಬಳ್ಳಾಪುರ(ಅಕ್ಟೋಬರ್​. 30): ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷಗಾದಿ ಆಶ್ಚರ್ಯಕರ ರೀತಿಯಲ್ಲಿ ಬಿಜೆಪಿ ಪಾಲಾಗಿದ್ದು, ಆರೋಗ್ಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಂತ್ರಕ್ಕೆ ಕಾಂಗ್ರೆಸ್ ಬೆಚ್ಚಿ ಬಿದ್ದಿದೆ. ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ತೀವ್ರ ಕುತೂಹಲ ಸೃಷ್ಟಿಸಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಆಡಳಿತವೇ ಮುಂದುವರಿಯಲಿದೆ ಎಂದು ಮೊದಲಿಗೆ ಅಂದಾಜಿಸಲಾಗಿತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಂತ್ರದಿಂದಾಗಿ ನಿರೀಕ್ಷೆ ಉಲ್ಟಾ ಆಗಿ ನಗರಸಭೆ ಬಿಜೆಪಿಗೆ ಒಲಿದಿದ್ದು, ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯ ಆನಂದರೆಡ್ಡಿ 22 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನ ಅಂಬಿಕಾ ಕೇವಲ 9 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. 16 ಸ್ಪಷ್ಟ ಬಹುಮತ ಇದ್ದರೂ ಸೋಲು ಕಾಂಗ್ರೆಸ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಸಿದೆ. ಜೆಡಿಎಸ್ ಸದಸ್ಯೆ ವೀಣಾ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 31 ಸದಸ್ಯರಿರುವ ನಗರಸಭೆಯಲ್ಲಿ, ಕಾಂಗ್ರೆಸ್ ಪಕ್ಷ 16, ಬಿಜೆಪಿ 9, ಜೆಡಿಎಸ್ 2 ಹಾಗೂ 4 ಪಕ್ಷೇತರ ಸದಸ್ಯರಿದ್ದಾರೆ.

ಸಂಖ್ಯಾ ಬಲವನ್ನು ನೋಡಿದರೆ ಕಾಂಗ್ರೆಸ್ ಗೆ ಸುಲಭವಾಗಿ ಅಧಿಕಾರದ ಚುಕ್ಕಾಣಿ ದೊರೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಬಿಜೆಪಿ ಗೆಲುವು ಸಾಧಿಸುವಂತೆ ಸಚಿವ ಡಾ.ಕೆ.ಸುಧಾಕರ್ ಎಲ್ಲಾ ನಗರಸಭಾ ಸದಸ್ಯರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿತ್ತು. ಈ ಸಂದರ್ಭದಲ್ಲಿ ಸಚಿವ ಡಾ.ಕೆ.ಸುಧಾಕರ್ ಪಕ್ಷೇತರ ಸದಸ್ಯ ಆನಂದರೆಡ್ಡಿರನ್ನ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಬಿಜೆಪಿಯಿಂದ ಬೆಂಬಲ ಕೊಡಿಸುವ ಕಾರ್ಯತಂತ್ರವನ್ನು ಹೆಣೆದರು. ಇದರ ಪರಿಣಾಮ, ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಬಿಜೆಪಿ ಮೇಲುಗೈ ಸಾಧಿಸಿದ್ದು, ಆನಂದ್ ರನ್ನ ಬಿಜೆಪಿ ತನ್ನ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡು ಮೊದಲ ಬಾರಿಗೆ ಬಿಜೆಪಿ ನಗರಸಭೆ ಚುಕ್ಕಾಣಿ ಹಿಡಿದು ಬೀಗುವಂತಾಗಿದೆ.

ಇದನ್ನೂ ಓದಿ : ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಲೆಕ್ಕಪತ್ರ ನಿರ್ವಹಣೆ ಜಿಲ್ಲಾಧಿಕಾರಿಗೆ : ಸಚಿವ ಕೆ ಎಸ್ ಈಶ್ವರಪ್ಪ

ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಇತಿಹಾಸದಲ್ಲಿ ಮೊದಲ ಬಾರಿ ಬಿಜೆಪಿ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿದಿದೆ. ನನಗೆ ಅಭಿವೃದ್ಧಿ ಮಾತ್ರ ಮುಖ್ಯ. ಈ ಚುನಾವಣೆ ಕೂಡ ಅಭಿವೃದ್ಧಿಗಾಗಿ ಮಾತ್ರ ಆಗಿದೆ. ಚಿಕ್ಕಬಳ್ಳಾಪುರವನ್ನು ಸುಂದರ, ಸುರಕ್ಷಿತ ನಗರವಾಗಿ ರೂಪುಗೊಳಿಸುವುದೇ ನಮ್ಮ ಉದ್ದೇಶ. ಅಧ್ಯಕ್ಷರಾಗಿ ಆಯ್ಕೆಯಾದ ಆನಂದರೆಡ್ಡಿ ಬಹಳ ಅನುಭವಿಗಳಾಗಿದ್ದಾರೆ. ಅವರಿಗೆ ಬದ್ಧತೆ, ದಕ್ಷತೆ ಇದೆ. ಹೊಸ ತಂಡ ಹುರುಪಿನಿಂದ, ಜನಪರವಾಗಿ ಕೆಲಸ ಮಾಡಲಿದೆ. ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ನಗರಸಭೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ 22 ಮಂದಿ ಬೆಂಬಲ ನೀಡಿದ್ದಾರೆ. ಆದರೂ ನಗರಸಭೆಯ ಎಲ್ಲ 31 ಸದಸ್ಯರು ನನ್ನವರೇ ಎಂದು ನಾನು ಕೆಲಸ ಮಾಡುತ್ತೇನೆ. ಯಾವುದೇ ಪಕ್ಷವಾದರೂ ನಾನು ದ್ವೇಷ ಇಟ್ಟುಕೊಳ್ಳದೆ ನಗರಸಭೆ ಮಾದರಿಯಾಗಲು ಕೆಲಸ ಮಾಡುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಎಂದು ಸಂತಸ ವ್ಯಕ್ತಪಡಿಸಿದರು.
Published by: G Hareeshkumar
First published: October 30, 2020, 6:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading