ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ: ಬಸವರಾಜ್ ಹೊರಟ್ಟಿ

ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಕೋವಿಡ್ ಸಮಯದಲ್ಲಿ ಚುನಾವಣೆಗಳನ್ನ ಮಾಡುವುದು ಸರಿಯಾದ ಕ್ರಮವಲ್ಲ. ರಾಜಕೀಯ ಗಿಮಿಕ್ ಗೆ ಕೊರೋನಾ ಲಸಿಕೆ ರಾಜಕಾರಣ ಸರಿಯಲ್ಲ

news18-kannada
Updated:October 24, 2020, 11:17 PM IST
ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ: ಬಸವರಾಜ್ ಹೊರಟ್ಟಿ
ಬಸವರಾಜ್ ಹೊರಟ್ಟಿ
  • Share this:
ಚಿಕ್ಕಬಳ್ಳಾಪುರ(ಅಕ್ಟೋಬರ್​. 24): ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರೊಂದಿಗೆ ಹೊಂದಾಣಿಕೆ ಇಲ್ಲ. ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಖಾಸಗಿ ಶಾಲಾ ಶಿಕ್ಷಕರು ಬೀದಿ ಪಾಲಾಗಿದ್ದಾರೆ, ಶಿಕ್ಷಕರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ವಿಧಾನ ಪರಿಷತ್​ ಸದಸ್ಯ ಬಸವರಾಜ್​​​ ಹೊರಟ್ಟಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ನವೆಂಬರ್ 17 ರಂದು ಶಾಲಾ ಕಾಲೇಜು ಪ್ರಾರಂಭ ಮಾಡುತ್ತಿರುವುದು ಸ್ವಾಗತಾರ್ಹ. ಕೋವಿಡ್ ನಿಯಮಾವಳಿಗಳನ್ನ ಕಟ್ಟುನಿಂದ ಜಾರಿಗೆ ಕಾಲೇಜು ಪ್ರಾರಂಭಿಸಬೇಕು, ಶಿಕ್ಷಕರ ಸಮಸ್ಯೆಗಳನ್ನ ನಿವಾರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದ 2 ಸಾವಿರಕ್ಕೂ ಅಧಿಕ ಮಂದಿ‌ ಶಿಕ್ಷಣ ಇಲಾಖೆ ಸಿಬ್ಬಂದಿ ಬಳಲುತ್ತಿದ್ದು 24 ಕ್ಕೂ ಹೆಚ್ಚು ಶಿಕ್ಷಕರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. 

ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನ ಬೆಂಬಲಿಸಿ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸುವ ಅಭ್ಯರ್ಥಿ ಬಗ್ಗೆ ಶಿಕ್ಷಕರು ಗಮನ ಹರಿಸಬೇಕು. ಪಶ್ಚಿಮ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೌಟುಂಬಿಕ ಸಮಸ್ಯೆಯಿಂದ ಬಳುತ್ತಿದ್ದಾರೆ. ಚುನಾವಣೆ ಎದುರಿಸಲು ಸಾಧ್ಯವಾಗುತ್ತಿಲ್ಲ, ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕಾರ್ ಗೆ ಬೆಂಬಲ ಕೊಡಲಾಗಿದ್ದು ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಕೋವಿಡ್ ಸಮಯದಲ್ಲಿ ಚುನಾವಣೆಗಳನ್ನ ಮಾಡುವುದು ಸರಿಯಾದ ಕ್ರಮವಲ್ಲ. ರಾಜಕೀಯ ಗಿಮಿಕ್ ಗೆ ಕೊರೋನಾ ಲಸಿಕೆ ರಾಜಕಾರಣ ಸರಿಯಲ್ಲ ಎಂದರು.

ಇದನ್ನೂ ಓದಿ : ನ್ಯೂಸ್ 18 ಇಂಪ್ಯಾಕ್ಟ್ : ಬೆಳಗಾವಿ ಜಿಲ್ಲಾಡಳಿತದಿಂದ ಕಬ್ಬಿಗೆ ಎಫ್​​ಆರ್​ಪಿ ದರ ನಿಗದಿ ಮಾಡಿ ಆದೇಶ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ಪಾರ್ಟಿಯಲ್ಲಿ ಯಾರಿಗೂ ಧಮ್ ಇಲ್ಲ. ಯತ್ನಾಳ್ ಗೆ ಕೇಂದ್ರ ನಾಯಕರ ಬೆಂಬಲದಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ಪ್ರಸ್ತಾಪ ನಡೆಯುತ್ತಿದೆ. ಶೀಘ್ರವೆ ರಾಜ್ಯದಲ್ಲಿ ಯಡಿಯೂರಪ್ಪ ಯುಗ ಅಂತ್ಯ ಆಗಲಿದೆ. ಬದಲಿ ಮುಖ್ಯಮಂತ್ರಿಗಾಗಿ ಹುಡುಕಾಟ ನಡೆಸುತ್ತಿರುವ ಕೇಂದ್ರ ನಾಯಕರಿಗೆ ಇದು ನುಂಗಲಾರದ ತುತ್ತಾಗಿದೆ‌. ಅವರದ್ದೆ ಸಂಕಷ್ಟ ಗಳಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವ ಅಭ್ಯರ್ಥಿ ಗೆಲುವಿಗೆ ಪ್ರಬುದ್ಧ ಶಿಕ್ಷಕರು ಮತದಾರರು ಒಲವು ತೋರುತ್ತಿದ್ದಾರೆ ಎಂದು ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೇಲೆ ನಡೆಯುತ್ತಿರುವ ಗದಪ್ರಹಾರ ನೋಡಿದರೆ ಸರ್ಕಾರ ಮುಂದುವರೆಯುವ ಲಕ್ಷಣ ಕಾಣಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
Published by: G Hareeshkumar
First published: October 24, 2020, 6:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading