Karnataka Bandh: ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ರೈತರು ಕರೆ ನೀಡಿದ್ದ ಬಂದ್​ಗೆ ಸಾರ್ವಜನಿಕರಿಂದ ನೀರಸ  ಪ್ರತಿಕ್ರಿಯೆ

ಜಿಲ್ಲೆಯ ಹಲವಾರು ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದವು. ಜಿಲ್ಲಾ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರು ಸಹ ಪ್ರತಿಭಟನೆಗೆ ಬೆಂಬಲ ನೀಡಿದರು. ಈ ವೇಳೆ ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಲಾಯಿತು. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

news18-kannada
Updated:September 28, 2020, 3:30 PM IST
Karnataka Bandh: ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ರೈತರು ಕರೆ ನೀಡಿದ್ದ ಬಂದ್​ಗೆ ಸಾರ್ವಜನಿಕರಿಂದ ನೀರಸ  ಪ್ರತಿಕ್ರಿಯೆ
ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆ.
  • Share this:
ಶಿವಮೊಗ್ಗ (ಸೆಪ್ಟೆಂಬರ್​ 28); ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ರೈತರು ಕರೆ ನೀಡಿದ್ದ ಬಂದ್ ಗೆ ಸಾರ್ವಜನಿಕರಿಂದ ನೀರಸ  ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಆರೋಪಿ ರೈತ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಶಿವಮೊಗ್ಗ ಜಿಲ್ಲೆಯ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕರೆ ನೀಡಿದ್ದರು ಖಾಸಗಿ ಮತ್ತು ಕೆಎಸ್ ಆರ್ ಸಿಟ್ ಬಸ್ ಗಳು ಎಂದಿನಂತೆ ಸಂಚಾರ ಮಾಡಿದವು.  ಆಟೋ, ಕ್ಯಾಬ್ ಗಳು ಸಂಚಾರ ಎಂದಿನಂತೆ ಸಾಗಿದೆ. ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾ ಕಾಂಗ್ರೇಸ್ ಮತ್ತು  ಜೆಡಿಎಸ್ ಪಕ್ಷಗಳು ಕೈ  ಜೋಡಿಸಿದವು.  ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ಮಾಡುವ ಮಸೂದೆಗಳನ್ನು ಕೂಡಲೇ ಕೈ ಬಿಡಬೇಕು ಎಂದು ರೈತ ಸಂಘ ಆಗ್ರಹಿಸಿವೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಸಂಘ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ  ಕರ್ನಾಟಕ ಬಂದ್ ಗೆ ಸಿಎಂ ಯಡಿಯೂರಪ್ಪನವರ ತವರು ಜಿಲ್ಲೆ, ಬಿಜೆಪಿ ಭದ್ರಕೋಟೆ ಎಂದು ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಗೆ ಸಾರ್ವಜನಿಕರು ನೀರಸ ಪ್ರತಿಕ್ರಿಯೆ ನೀಡಿದ್ದಾರೆ. 

ಖಾಸಗಿ ಬಸ್ ಗಳು ಮತ್ತು ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆ ಸಂಚಾರ ಮಾಡಿವೆ. ಆಟೋಗಳು ಕ್ಯಾಬ್ ಗಳು ಸಹ ಯಾವುದೇ ಅಡೆತಡೆ ಇಲ್ಲದೇ ಸಂಚಾರ ನಡೆಸಿವೆ.  ಇನ್ನು ಅಂಗಡಿ ಮುಂಗಟ್ಟುಗಳು ಮಾಲೀಕರು ಸಹ ಬಾಗಿಲು ತೆರೆದು ವ್ಯಾಪಾರ ವಹಿವಾಟು ನಡೆಸಿದರು. ರೈತ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಪ್ರಧಾನಿ ಮೋದಿ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ  ಅಶೋಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದರು.

ಜಿಲ್ಲೆಯ ಹಲವಾರು ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದವು. ಜಿಲ್ಲಾ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರು ಸಹ ಪ್ರತಿಭಟನೆಗೆ ಬೆಂಬಲ ನೀಡಿದರು. ಈ ವೇಳೆ ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಲಾಯಿತು. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : Karnataka Bandh - ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು

ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಶೋಕ ವೃತ್ತದಲ್ಲಿ ಮಾನವ ಸರಪಳಿ   ನಿರ್ಮಿಸಿ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶವನ್ನು ರೈತರು ಹೊರ ಹಾಕಿದರು. ರೈತರ ಪರ ಎಂದು ಹೇಳುವ ಯಡಿಯೂರಪ್ಪ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರವು ಮೂಲಕ, ಬಂಡವಾಳ ಶಾಹಿಗಳ ಪರವಾಗಿ ನಿಂತಿದ್ದಾರೆ ಎಂದು ದೂರಿದರು.

ಇನ್ನು ತಾಲೂಕು ಕೇಂದ್ರಗಳಲ್ಲಿ ಸಹ ಕೆಲ ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಂದ್ ಗೆ ಮಾತ್ರ ಜಿಲ್ಲೆಯಲ್ಲಿ ಜನರಿಂದ ನೀರಸವಾದ ಪ್ರತಿಕ್ರಿಯೆ ವ್ಯಕ್ತವಾಯಿತು. ಶಿವಮೊಗ್ಗ.
Published by: MAshok Kumar
First published: September 28, 2020, 3:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading