ಮಣಿಪಾಲದಲ್ಲಿ ಭೂ ಕುಸಿತ; ಕುಸಿತದ ಭೀತಿಯಿಂದಾಗಿ ಪ್ರೀಮಿಯರ್ ಕಟ್ಟಡದ ಜನ ಶಿಫ್ಟ್

ಮಣಿಪಾಲ ನಗರದ ಎಲ್ಲಾ ಮಳೆನೀರು ಈ ಕಟ್ಟಡದ ಹಿಂಭಾಗಕ್ಕೆ ಧಾರಾಕಾರವಾಗಿ ಹರಿದು ಹೋಗುವುದರಿಂದ ಭೂಕುಸಿತ ಉಂಟಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆದರೆ ಕಟ್ಟಡದ ಹಿಂಭಾಗಕ್ಕೆ ಮಳೆನೀರು ಹರಿಯದಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. 

news18-kannada
Updated:September 22, 2020, 7:16 AM IST
ಮಣಿಪಾಲದಲ್ಲಿ ಭೂ ಕುಸಿತ; ಕುಸಿತದ ಭೀತಿಯಿಂದಾಗಿ ಪ್ರೀಮಿಯರ್ ಕಟ್ಟಡದ ಜನ ಶಿಫ್ಟ್
ಕುಸಿತದ ಭೀತಿಯಲ್ಲಿರುವ ಮಣಿಪಾಲದ ಪ್ರೀಮಿಯರ್​ ಕಟ್ಟಡ.
  • Share this:
ಉಡುಪಿ; ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡ ಹಿಂಭಾಗ ದಲ್ಲಿ ಮಳೆ ನೀರಿನ ರಭಸಕ್ಕೆ ಅಪಾರ್ಟ್ಮೆಂಟ್ ನ  ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ  ಜೊತೆ ವಸತಿ ಸಮುಚ್ಚಯ ಇರೋದ್ರಿಂದ ಅಲ್ಲಿರುವ ಎಲ್ಲ ಜನರನ್ನು ಬೇರೆಡೆ ಕಳುಹಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕಟ್ಟಡದಲ್ಲಿ ವಾಸವಿದ್ದು ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ . 35 ಮನೆಗಳು ಕಟ್ಟಡದಲ್ಲಿದ್ದ ಮನೆಯಲ್ಲಿದ್ದ ಎಲ್ಲರನ್ನೂ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಡೊಮಿನೊಸ್ ಪಿಜ್ಜಾ ಇಂದು ಅಂಗಡಿಯನ್ನ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಬಹುಮಹಡಿ ಕಟ್ಟಡ ಇರುವುದರಿಂದ ಪೊಲೀಸರು ಈ ಭಾಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾಡಿದ್ದಾರೆ. ಉಡುಪಿ-ಮಣಿಪಾಲ ರಸ್ತೆಯ ಒಂದು ಬದಿ ಓಡಾಟವನ್ನು ಮಾಡಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ. ಮಣಿಪಾಲ ನಗರದ ಎಲ್ಲಾ ಮಳೆನೀರು ಈ ಕಟ್ಟಡದ ಹಿಂಭಾಗಕ್ಕೆ ಧಾರಾಕಾರವಾಗಿ ಹರಿದು ಹೋಗುವುದರಿಂದ ಭೂಕುಸಿತ ಉಂಟಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆದರೆ ಕಟ್ಟಡದ ಹಿಂಭಾಗಕ್ಕೆ ಮಳೆನೀರು ಹರಿಯದಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತ ಹೋರಾಟ; ಹೋರಾಟಗಾರರನ್ನು ಭಯೋತ್ಪಾದಕರೆಂದ ನಟಿ ಕಂಗನಾ

ಹಿಂದೆ ಮಣಿಪಾಲ್ ಐನಾಕ್ಸ್ ಕಟ್ಟಡದ ಸಮೀಪ ಭೂಕುಸಿತ ಆಗಿದ್ದು ಆತಂಕ ಸೃಷ್ಟಿಯಾಗಿತ್ತು. ಉಡುಪಿ ನಗರಸಭೆಯ ಕಮಿಷನರ್ ಆನಂದ ಕಲ್ಲೋಳಿಕರ್ ಮಾತನಾಡಿ, "ಈಗಾಗಲೇ ಕಟ್ಟಡದಲ್ಲಿದ್ದ ಎಲ್ಲರನ್ನೂ ಬೇರೆ ಕಡೆಗೆ ಶಿಫ್ಟ್ ಮಾಡಿಸಿದ್ದೇವೆ. ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ್ದೇವೆ.  ಕಟ್ಟಡ ನಿರ್ಮಾಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸುತ್ತೇವೆ.

ಬಹುಮಹಡಿ ಕಟ್ಟಡದ ನಿರ್ಮಾಣ ದ ಬಗ್ಗೆಯೂ ಸಂಪೂರ್ಣ ತನಿಖೆ ಮಾಡುತ್ತೇವೆ ಮೇಲ್ನೋಟಕ್ಕೆ ಅಪಾಯಕಾರಿ ಯಂತೆ ಕಾಣಿಸುತ್ತಿದೆ. ಯಾವುದೇ ಅನಾಹುತಗಳು ಆಗದಿರಲಿ ಎಂಬ ಉದ್ದೇಶದಿಂದ ಜನರನ್ನ ಶಿಫ್ಟ್ ಮಾಡಿಸಲಾಗಿದೆ" ಎಂದು ಹೇಳಿದರು. ಸ್ಥಳಕ್ಕೆ ತಹಶೀಲ್ದಾರ್, ಎಸಿ, ಬಂದು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ. ತಳದಿಂದ ಜನರು ಕೊಂಚ ದೂರ ಇರುವಂತೆ ಪೊಲೀಸರು ನೋಡಿಕೊಂಡಿದ್ದಾರೆ.
Published by: MAshok Kumar
First published: September 22, 2020, 7:16 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading