ಜಾತಿ ಪ್ರಮಾಣಪತ್ರ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ

ಲಿಂಗಾಯತ ಸಮಾಜದವರಿಗೆ ನೀಡಲಾಗುತ್ತಿರುವ ಜಾತಿ ಪ್ರಮಾಣಪತ್ರದಲ್ಲಿ ವೀರಶೈವ ಲಿಂಗಾಯತ ಎಂದು ನಮೂದಿಸಲಾಗುತ್ತಿದೆ ಎಂದು ಖಂಡಿಸಿ ಲಿಂಗಾಯತ ಸಂಘಟನೆಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿವೆ.

news18-kannada
Updated:September 19, 2020, 7:52 AM IST
ಜಾತಿ ಪ್ರಮಾಣಪತ್ರ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ
ಲಿಂಗಾಯತರ ಪ್ರತಿಭಟನೆ
  • Share this:
ಹುಬ್ಬಳ್ಳಿ: ಲಿಂಗಾಯತ ಸಮಾಜದವರಿಗೆ ನೀಡುತ್ತಿರುವ ಜಾತಿ ಪ್ರಮಾಣ ಪತ್ರದಲ್ಲಿ ದೋಷ ಕಂಡು ಬಂದಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಬಸವ ದಳ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಬಸವ ಜ್ಞಾನ ಪೀಠದ ಚನ್ನಬಸವೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಕೊಡುವಾಗ ವೀರಶೈವ ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ಲಿಂಗಾಯತ ಧರ್ಮ ಅಂತ ಬರೆಸಿದರೂ ಸಹಿತ ಎಸ್.ಎ.ಟಿ.ಎಸ್ ತಂತ್ರಾಂಶದಲ್ಲಿ ಲಿಂಗಾಯತ ಬದಲಿಗೆ ವೀರಶೈವ ಲಿಂಗಾಯತ ಅಂತಾ ಬರುತ್ತಿದೆ. ಇದು ಸಮಾಜದ ಜನರಲ್ಲಿ ಗೊಂದಲಕ್ಕೆ ಕಾರಣವಾಗಿದೆ.‌ ಕೂಡಲೇ ಸರ್ಕಾರ ಪ್ರಮಾಣದ ಪತ್ರದ ಲೋಪದೋಷಗಳನ್ನು ಸರಿಪಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಕಲಬುರ್ಗಿಯ ಕುಖ್ಯಾತ ರೌಡಿ ಶೀಟರ್ ಕೆಂಚ್ಯಾಶಾಣ್ಯ ಹಡಗಿಲ್ ಚಾಮರಾಜನಗರಕ್ಕೆ ಗಡಿಪಾರು

ಎಸ್​ಎಸ್​ಕೆ ಸಮಾಜದವರಿಂದ ಪ್ರತಿಭಟನೆ:

ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ (ಎಸ್​ಎಸ್​ಕೆ) ಸಮಾಜಕ್ಕೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಎಸ್‌ಎಸ್‌ಕೆ ಸಮಾಜದ ಯುವಕರ ಸಂಘದಿಂದ ಪ್ರತಿಭಟನೆ ನಡೆಯಿತು. ಎಸ್‌ಎಸ್‌ಕೆ ಸಮಾಜ ಹಿಂದುಳಿದ ಸಮಾಜವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಯೋಜನೆಗಳು ಸಮಾಜದ ಜನರಿಗೆ ತಲುಪದೇ ಕೈತಪ್ಪಿ ಹೋಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಿನಿ ವಿಧಾನಸೌಧದ ಎದುರು ಘೋಷಣೆಗಳನ್ನು ಕೂಗಿದರು.

ಸರ್ಕಾರದ ವಿವಿಧ ಯೋಜನೆ ಹಾಗೂ ತಳ ಸಮುದಾಯಗಳ ಅಭಿವೃದ್ಧಿಯ ಉದ್ದೇಶಗಳನ್ನು ತಿಳಿಸಲು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಗಾಗ ಸಭೆ ನಡೆಸುತ್ತದೆ. ಪಾಲಿಕೆಯ ಕುಂದುಕೊರತೆಗಳ ಸಭೆಗೆ ಸಮಾಜದ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸಬೇಕು. ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಕುರಿತು ಹುಬ್ಬಳ್ಳಿ ತಹಶೀಲ್ದಾರ್ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಅಮಾನುಷ ಘಟನೆ: ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು: ಯೋಧನ ವಿರುದ್ಧ ಎರಡು ಕೇಸ್ ದಾಖಲುವಿಷ್ಣುವರ್ಧನ್ ಜನ್ಮದಿನಾಚರಣೆ:

ಹುಬ್ಬಳ್ಳಿಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ 70 ನೇ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು. ಹುಬ್ಬಳ್ಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಕೇಕ್ ಕತ್ತರಿಸುವ ಮೂಲಕ ನೆಚ್ಚಿನ ನಟನನ್ನು ಸ್ಮರಿಸಿದರು. ಡಾ. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಇದೇ ವೇಳೆ ಸಸಿಗಳನ್ನು ವಿತರಿಸಿ ಪರಿಸರದ ಬಗ್ಗೆ ಅರಿವು ಮೂಡಿಸಲಾಯಿತು‌. ಪರಿಸರ ರಕ್ಷಣೆ ಮತ್ತು ಗಿಡಮರಗಳ ಮಹತ್ವದ ಕುರಿತು ಜನಜಾಗೃತಿ ಮೂಡಿಸಲಾಯಿತು.

ವರದಿ: ಪರಶುರಾಮ ತಹಶೀಲ್ದಾರ
Published by: Vijayasarthy SN
First published: September 19, 2020, 7:52 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading