HOME » NEWS » District » MINISTER SURESH KUMAR WARNS OF STRICT ACTION IF COVID RULES NOT FOLLOWED IN WEDDING HALLS SHTV SNVS

ಮದುವೆ ಮಂಟಪಗಳಲ್ಲಿ ಕೊರೋನಾ ಮಾರ್ಗಸೂಚಿ ಅನುಸರಿಸದಿದ್ದರೆ ಕಠಿಣ ಕ್ರಮ: ಸುರೇಶ್ ಕುಮಾರ್

ಬಿಬಿಎಂಪಿ ಬೊಮ್ಮನಹಳ್ಳಿ ಕೋವಿಡ್ ಉಸ್ತುವಾರಿ ಆಗಿರುವ ಸಚಿವ ಸುರೇಶ್ ಕುಮಾರ್ ನಿನ್ನೆ ಮದುವೆ ಮಂಟಪ ಮತ್ತು ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ.

news18-kannada
Updated:April 19, 2021, 10:23 AM IST
ಮದುವೆ ಮಂಟಪಗಳಲ್ಲಿ ಕೊರೋನಾ ಮಾರ್ಗಸೂಚಿ ಅನುಸರಿಸದಿದ್ದರೆ ಕಠಿಣ ಕ್ರಮ: ಸುರೇಶ್ ಕುಮಾರ್
ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ
  • Share this:
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಮದುವೆ ಮಂಟಪಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಮದುವೆ ಮಂಟಪಗಳ ಮಾಲಿಕರು ಕಟ್ಟು ನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಬೊಮ್ಮನಹಳ್ಳಿ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಬಿಬಿಎಂಪಿಯ ಬೊಮ್ಮನಹಳ್ಳಿ ವಲಯ ಹಾಗೂ ಆನೇಕಲ್ ತಾಲ್ಲೂಕುಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಮದುವೆ ಮಂಟಪಗಳ ಮಾಲಿಕರು ಹಾಗೂ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಸಚಿವರು, ಕೆಲ ಖಾಸಗಿ ಆಸ್ಪತ್ರೆಗಳು ನಿಗದಿತ ಸಂಖ್ಯೆಯ ಬೆಡ್ ಗಳನ್ನು ಕೊರೋನಾ‌ ಸೊಂಕಿತರಿಗಾಗಿ ಮೀಸಲಿಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಸಿಡಿಮಿಡಿಗೊಂಡಿದ್ದು, ಅಂತಹ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನೂ ಕೆಲ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನು ಕಾಯ್ದಿರಿಸಿದ್ದರೂ ಸೊಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುವಲ್ಲಿ ಅನಗತ್ಯ ವಿಳಂಬ ಉಂಟಾಗುತ್ತಿರುವ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ ಸಚಿವರು, ಕೂಡಲೇ ಪ್ರತಿ ಆಸ್ಪತ್ರೆಗೆ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಿ ಸೊಂಕಿತರಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: Farmer Death - ಗದಗ ರೈತ ಆತ್ಮಹತ್ಯೆ; ಬ್ಯಾಂಕ್ ಸಾಲ, ಕೈಸಾಲದಿಂದ ದಿಕ್ಕುಕಾಣದೆ ನೇಣಿಗೆ ಶರಣಾದ ಅನ್ನದಾತ

ಆಕ್ಸಿಜನ್ ಕೊರತೆಯ ಬಗ್ಗೆ ಮಾಹಿತಿ ಪಡೆದ ಸಚಿವರು ಕೂಡಲೇ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ಬೊಮ್ಮನಹಳ್ಳಿ ವಲಯದಲ್ಲಿ ಪ್ರತಿ ವಾರ್ಡ್​ಗೆ ಎರಡರಂತೆ ಒಟ್ಟು 34 ಅಂಬುಲೆನ್ಸ್ ಗಳನ್ನು ಸೇವೆಗಾಗಿ ಸಿದ್ಧಗೊಳಿಸಲಾಗಿದ್ದು ಪ್ರತಿ ವಾರ್ಡ್ ಗಳಲ್ಲಿರುವ ಕೋವಿಡ್ ವಾರ್-ರೂಮ್ ಗಳನ್ನು ಹೆಚ್ಚು ಕ್ರಿಯಾಶೀಲಗೊಳಿಸಿ ತ್ವರಿತವಾಗಿ ಸ್ಪಂದಿಸುವಂತೆ ಸೂಚಿಸಿದರು.

ಕೊರೋನಾ ಸೋಂಕಿನಿಂದ ನಿಧನರಾದವರ ಅಂತ್ಯಕ್ರಿಯೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಧ್ಯಮ ವರದಿ ಗಮನಿಸಿದ ಸಚಿವರು, ಈ‌ ವಲಯದ ಕೂಡ್ಲುವಿನಲ್ಲಿರುವ ವಿದ್ಯುತ್ ಚಿತಾಗಾರಕ್ಕೆ ಪ್ರತಿ ನಿತ್ಯ ಈ ಮುಂಚೆ 3 ರಿಂದ 4 ಶವಗಳು ಬರುತ್ತಿದ್ದವು. ಆದರೆ ಈಗ 22 ರಿಂದ 25 ಶವಗಳು ಬರುತ್ತಿದ್ದು ಅಲ್ಲಿಗೆ ಹೆಚ್ಚು ಸಿಬ್ಬಂದಿ ನೇಮಿಸಿ ಶವಗಳಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕ್ರಮ ಕೈಗೊಳ್ಳಲು ತಿಳಿಸಿದರು.

ಇದನ್ನೂ ಓದಿ: ಮೀನು ಮಾರಿ ದುಡಿದು ಓದಿ ಡಾಕ್ಟರೇಟ್ ಪದವಿ ಗಳಿಸಿದ ನಿಯಾಜ್ ಪಣಕಜೆಕಳೆದ ಸಭೆಯಲ್ಲಿ ನೀಡಿದ್ದ ಸೂಚನೆಯಂತೆ ಮೈಕ್ರೋ ಕಂಟೈನ್ಮೆಂಟ್ ವಲಯಗಳನ್ನು ಗುರ್ತಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಅಧಿಕಾರಿಗಳ ಕ್ರಮಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯ ಬಳಿಕ ಬೊಮ್ಮನಹಳ್ಳಿ ವಲಯದಲ್ಲಿ ನೂತನವಾಗಿ ಆರಂಭಿಸಿರುವ 50 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್​ಗೆ ಹಾಗೂ ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ವಲಯದ ಉಸ್ತುವಾರಿ ಆಯುಕ್ತ ರಾಜೇಂದ್ರ ಕಟಾರಿಯಾ, ಜಂಟಿ ಆಯುಕ್ತ ರಾಮಕೃಷ್ಣ, ಅಗ್ನೇಯ ವಿಭಾಗದ ಡಿಸಿಪಿ  ಶ್ರೀನಾಥ್ ಜೋಶಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಶರಣು ಹಂಪಿ
Published by: Vijayasarthy SN
First published: April 19, 2021, 10:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories