ಜೂ.19 ರಿಂದ 21ರವರೆಗೂ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶ ನಿಷೇಧ - ಜಿಲ್ಲಾಧಿಕಾರಿ ಆದೇಶ

ಹೀಗಾಗಿ, ಜೂ.19 ರಿಂದ 21ರವರೆಗೆ ಮಲೆ ಮಹದೇಶ್ವರ ದೇವಾಲಯ ಹಾಗೂ ಪ್ರಾಧಿಕಾರ ಆವರಣಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶ ನಿಷೇಧಿಸುವಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಪತ್ರದ ಮುಖೇನ ಜಿಲ್ಲಾಧಿಕಾರಿಗಳಿಗೆ ಕೋರಿದ್ದರು.

news18-kannada
Updated:June 18, 2020, 8:33 AM IST
ಜೂ.19 ರಿಂದ 21ರವರೆಗೂ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶ ನಿಷೇಧ - ಜಿಲ್ಲಾಧಿಕಾರಿ ಆದೇಶ
ದೇವರ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತಾಧಿಗಳು
  • Share this:
ಚಾಮರಾಜನಗರ(ಜೂ.18): ಕೋವಿಡ್-19 ವೈರಸ್​​ ತೀವ್ರವಾಗಿ ಹರಡುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾಧಿಗಳಿಗೆ ಜೂನ್ 19ರಿಂದ 21ರವರೆಗೂ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಆದೇಶ ಹೊರಡಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಮಲೆ ಮಹದೇಶ್ವರ ಸ್ವಾಮಿಗೆ ಜೂನ್ 19ನೇ ತಾರೀಕಿನಂದು ಎಣ್ಣೆಮಜ್ಜನ ಹಾಗೂ 20, 21ರಂದು  ಅಮಾವಾಸ್ಯೆ ದಿನದ ವಿಶೇಷ ಪೂಜೆಗಳು ನಡೆಯಲಿವೆ. ಭಾನುವಾರ ಮತ್ತು ರಜಾ ದಿನಗಳಲ್ಲಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಮೂರರಿಂದ ನಾಲ್ಕು ಪಟ್ಟು ಹೆಚ್ಚಿರುತ್ತದೆ. ಈ ಸಮಯದಲ್ಲಿ ಕೊರೋನಾ ವಿರುದ್ಧ ಹೋರಾಡಲು ಸಂರಕ್ಷಣಾ ಕ್ರಮಗಳನ್ನು ಕೈಗೊಂಡರೂ ಸಹ ಸುಮಾರು 50,000 ಭಕ್ತರು ಬರುವ ಸಂಭವವಿರುವುದರಿಂದ ಭಕ್ತರನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಿ ದೇವರ ದರ್ಶನ ಮಾಡಿಸಲು ಕಷ್ಟ ಸಾಧ್ಯವಾಗಲಿದೆ.

ಹೀಗಾಗಿ, ಜೂ.19 ರಿಂದ 21ರವರೆಗೆ ಮಲೆ ಮಹದೇಶ್ವರ ದೇವಾಲಯ ಹಾಗೂ ಪ್ರಾಧಿಕಾರ ಆವರಣಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶ ನಿಷೇಧಿಸುವಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ   ಪತ್ರದ ಮುಖೇನ ಜಿಲ್ಲಾಧಿಕಾರಿಗಳಿಗೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ಭಕ್ತಾದಿಗಳ ಆರೋಗ್ಯ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜೂನ್‌ 19 ರಿಂದ 21 ರವರೆಗೆ ಮಲೆಮಹದೇಶ್ವರ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ  ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಕೋವಿಡ್​​-19: ಒಂದೇ ದಿನ 2,174 ಮಂದಿಗೆ ವೈರಸ್​​; 50 ಸಾವಿರ ದಾಟಿದ ಸೋಂಕಿತರ ಸಂಖ್ಯೆ
First published: June 18, 2020, 8:33 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading