HOME » NEWS » District » PEOPLES REPRESENTATIVES INSIST TO DECLARE CHIKKODI AS AN AGRICULTURAL DISTRICT MAK

ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸಿ: ಸಚಿವ ಬಿ.ಸಿ. ಪಾಟೀಲ್​ಗೆ ಜನ ಪ್ರತಿನಿಧಿಗಳ ಒತ್ತಾಯ

ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಳ್ಳಬೇಕು ಎಂದು ಕುಡಚಿ ಶಾಸಕ ಪಿ.ರಾಜೀವ್ ಒತ್ತಾಯಿಸಿದ್ದಾರೆ.

news18-kannada
Updated:June 7, 2021, 11:23 PM IST
ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸಿ: ಸಚಿವ ಬಿ.ಸಿ. ಪಾಟೀಲ್​ಗೆ ಜನ ಪ್ರತಿನಿಧಿಗಳ ಒತ್ತಾಯ
ಕೃಷಿ ಸಚಿವ ಬಿ.ಸಿ. ಪಾಟೀಲ್.
  • Share this:
ಬೆಳಗಾವಿ (ಜೂನ್,7)-  ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಇಂದು ಕೃಷಿ ಸಚಿವ ಬಿ ಸಿ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜನಪ್ರತಿನಿಧಿಗಳು ಒತ್ತಾಯ ಮಾಡಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಬಿ ಸಿ ಪಾಟೀಲ್ ಕೃಷಿ ಜಿಲ್ಲೆ ಘೋಷಿಸುವ ಬಗ್ಗೆ  ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು ಪರಿಶೀಲಿಸಲಾಗು ವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಳ್ಳಬೇಕು ಎಂದು ಕುಡಚಿ ಶಾಸಕ ಪಿ.ರಾಜೀವ್ ಒತ್ತಾಯಿಸಿದರು.  ಇದಕ್ಕೆ ಸ್ಪಂದಿಸಿದ ಕೃಷಿ ಸಚಿವರು, ಈ ರೀತಿ ಕೃಷಿ ಜಿಲ್ಲೆ ಘೋಷಿಸುವ ಬಗ್ಗೆ ಗೊತ್ತಿಲ್ಲ. ಅಧಿಕಾರಿಗಳ ಜತೆ ಚರ್ಚಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆಯಿಲ್ಲ;

ಸಮರ್ಪಕ ದಾಸ್ತಾನು ಲಭ್ಯವಿದ್ದು, ಯಾವುದೇ ಕಾರಣಕ್ಕೂ ಕಾಳಸಂತೆಯಲ್ಲಿ ಸಬ್ಸಿಡಿ ಗೊಬ್ಬರ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆಡರೇಶನ್ ಮೂಲಕ ಸಮರ್ಪಕವಾಗಿ ಗೊಬ್ಬರ ವಿತರಿಸಬೇಕು. ಸಾಕಷ್ಟು ದಾಸ್ತಾನು ಇರುವುದರಿಂದ ಸಮರ್ಪಕ ವಿತರಣೆ ಮಾಡಬೇಕು ಇಲ್ಲದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಚಿವರು ನೀಡಿದರು.

ಇದನ್ನೂ ಓದಿ: Arvind Kejriwal: ದೆಹಲಿಯಲ್ಲಿ ಮತದಾನ ಕೇಂದ್ರಗಳನ್ನು ಲಸಿಕಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಮುಂದಾದ ಕೇಜ್ರಿವಾಲ್ ಸರ್ಕಾರ

ರೈತರಿಂದಲೇ ಬೆಳೆ ಸಮೀಕ್ಷೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಈ ಬಾರಿ ಭೂಮಿ ಸಾಫ್ಟ್‌ವೇರ್ ಗೆ ಲಿಂಕ್ ಮಾಡುವುದರಿಂದ ಬೆಳೆ ಸಮೀಕ್ಷೆ ವಿವರ ನೇರವಾಗಿ ಪಹಣಿಗೆ ಸೇರ್ಪಡೆಯಾಗಲಿದೆ. ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.  ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಸಂಶೋಧಕರು ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ರೈತರ ಜತೆ ಸಮಾಲೋಚನೆ ನಡೆಸಬೇಕು ಎಂದು ಈಗಾಗಲೇ ಸುತ್ತೋಲೆ ಹೊರಡಿಸಲಾಗಿದ್ದು, ಈ ಬಗ್ಗೆ ಇಲಾಖೆಯ ವತಿಯಿಂದ ವರದಿ ಪಡೆದುಕೊಳ್ಳಲಾಗುತ್ತಿದೆ ಎಂದರು.

ಪಿಎಂ ಕಿಸಾನ್ ಯೋಜನೆ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ ರೈತರಿಂದಲೇ ಬೆಳೆ ಸಮೀಕ್ಷೆ ಯೋಜನೆ ಬಗ್ಗೆ ಕೇಂದ್ರ ಸರಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ರಾಷ್ಟ್ರಮಟ್ಟದಲ್ಲಿ ಇದನ್ನು ಜಾರಿಗೊಳಿಸುವುದಕ್ಕೆ ಚಿಂತನೆ ನಡೆಸಿದೆ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು.ಇದನ್ನೂ ಓದಿ: ರಾಜ್ಯ ಆರೋಗ್ಯ ವ್ಯವಸ್ಥೆಗೆ ಆಮೂಲಾಗ್ರ ಕಾಯಕಲ್ಪ 1,500 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆಗೆ ಕಾರ್ಯಪಡೆ ಒಪ್ಪಿಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮಾತನಾಡಿ, ಕಬ್ಬು ಕಟಾವು ಯಂತ್ರಗಳ ಖರೀದಿ ಸಬ್ಸಿಡಿ ಬಾಕಿಯಿದೆ. ಯಂತ್ರಗಳಿಗೆ ಬೇಡಿಕೆ ಇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಯಂತ್ರಗಳ ಖರೀದಿ ಗುರಿ ನಿಗದಿಪಡಿಸಬೇಕು ಎಂದು ಸಚಿವರ ಗಮನಸೆಳೆದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, 'ನನ್ನ ಬೆಳೆ ನನ್ನ ಹಕ್ಕು' ಯೋಜನೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ವರ್ಷ ಕೂಡ ಹೆಚ್ಚಿನ ಪ್ರಚಾರ ನೀಡಿ ಇದನ್ನು ಮುಂದುವರಿಸಬೇಕು ಎಂದರು.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: MAshok Kumar
First published: June 7, 2021, 11:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories