ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ. ನೀರಾವರಿ ಯೋಜನೆಗಳಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

news18-kannada
Updated:October 19, 2020, 7:13 PM IST
ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ: ಸಿಎಂ ಯಡಿಯೂರಪ್ಪ
ನೀರಾವರಿ ಯೋಜನೆಗಳ ಉದ್ಘಾಟನೆ ಮಾಡಿದ ಯಡಿಯೂರಪ್ಪ, ಈಶ್ವರಪ್ಪ
  • Share this:
ಶಿವಮೊಗ್ಗ(ಅ. 19): ಜಿಲ್ಲೆಯ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಯಡಿಯೂರಪ್ಪ  ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ  ಹೊಲಗಳಿಗೆ ನೀರನ್ನು ಹರಿಸುವ  ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲೂ ಸಾಕಷ್ಟು ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ನೀರಾವರಿ ಯೋಜನೆಗಳಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. 

ಕಲ್ಲೊಡ್ಡು ಏತ ನೀರಾವರಿ ಯೋಜನೆಯಿಂದಾಗಿ ಶಿಕಾರಿಪುರ ಹಾಗೂ ಸೊರಬ ತಾಲೂಕುಗಳ 3,430 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸಾಧ್ಯವಾಗಲಿದೆ.  ಯೋಜನೆಯಿಂದ 41 ಕೆರೆಗಳಿಗೆ ಸಹ ನೀರು ತುಂಬಿಸಲಾಗುತ್ತಿದೆ. ತಾಳಗುಂದ ಹೊಸೂರು ಏತ ನೀರಾವರಿ ಯೋಜನೆ ಈಗಾಗಲೇ ಅನುಷ್ಟಾನಗೊಳ್ಳುತ್ತಿದ್ದು, ಇದರಿಂದ 230 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಗಲಿದೆ.  ಮುಂದಿನ ವರ್ಷ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಅಕ್ಕಮಹಾದೇವಿ ಅವರ ಜನ್ಮಸ್ಥಳವಾದ ಉಡುತಡಿಯನ್ನು ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ನಾವು ಬದ್ಧರಾಗಿದ್ದು ಈಗಾಗಲೇ ಕಾಮಗಾರಿ ಆರಂಭವಾಗಿದೆ. ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು 21 ರಂದು ನಡೆಸಲಿದ್ದೇನೆ.  ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶದಗಲ್ಲಿ ಪರಿಹಾರ ಕಾರ್ಯ ನಡೆಸಲಾಗುತ್ತಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: ಊರಿಗೆ ಊರೇ ಮುಳುಗಿ ಹೋಗಿದೆ; ಸಿಎಂಗೆ ಶಿಕಾರಿಪುರ ಪ್ರವಾಸ ಹೆಚ್ಚಾಯ್ತು; ಎಚ್​.ಡಿ.ಕುಮಾರಸ್ವಾಮಿ ಕಿಡಿ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಮನೆಮನೆಗೆ ಗಂಗೆ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹೇಳಿದರು.

ಸಿಎಂ ಯಡಿಯೂರಪ್ಪ 125 ಕೋಟಿ ರೂ ವೆಚ್ಚದ ಕಸಬಾ ಏತ ನೀರಾವರಿ ಯೋಜನೆ, 17.80 ಕೋಟಿ ರೂ ವೆಚ್ಚದಲ್ಲಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಸಮಗ್ರ ಅಭಿವೃದ್ಧಿ ಕಾಮಗಾರಿ, 16 ಕೋಟಿ ರೂ ವೆಚ್ಚದ ಸನ್ಯಾಸಿಕೊಪ್ಪ ಏತ ನೀರಾವರಿ ಕಾಮಗಾರಿ, 8.33 ಕೋಟಿ ರೂ ವೆಚ್ಚದ ಭಕ್ತನಕೊಪ್ಪ ವಿದ್ಯುತ್ ಉಪಕೇಂದ್ರ, 9 ಕೋಟಿ ರೂ ವೆಚ್ಚದ ಅಂಬಾರಕೊಪ್ಪ ವಿದ್ಯುತ್ ಉಪಕೇಂದ್ರ ಸೇರಿದಂತೆ ನೂರಾರು ಕೋಟಿ ರೂ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಇದನ್ನೂ ಓದಿ: ನನಸಾಗಲಿದೆ ಕನಸು; 2021ಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟಕ್ಕೆ ಸಜ್ಜು: ಬಿಎಸ್​ ಯಡಿಯೂರಪ್ಪಇದೇ ಸಂದರ್ಭದಲ್ಲಿ ತೊಗರ್ಸಿ ಹಾಗೂ ಬಿಳಕಿಯಲ್ಲಿ ನಿರ್ಮಿಸಿರುವ ಪಶು ಚಿಕಿತ್ಸಾ ಕೇಂದ್ರ, ಶಿಕಾರಿಪುರ ಹಾಗೂ ಶಿರಾಳಕೊಪ್ಪದಲ್ಲಿ ನಿರ್ಮಿಸಿರುವ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿದರು.

ಜಿಲ್ಲಾದಿಕಾರಿ ಕೆ.ಬಿ.ಶಿವಕುಮಾರ್ ಸ್ವಾಗತಿಸಿದರು. ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತೋಟಗಾರಿಕೆ, ಪೌರಾಡಳಿತ ಸಚಿವ ನಾರಾಯಣಗೌಡ, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.

ವರದಿ: ಹೆಚ್ ಆರ್ ನಾಗರಾಜ
Published by: Vijayasarthy SN
First published: October 19, 2020, 7:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading