ನಿಗಮ ಮಂಡಳಿ ಅಧ್ಯಕ್ಷ ಸ್ಥಾನ: ಕಾದು ನೋಡುವ ತಂತ್ರದಲ್ಲಿ ಶಿವರಾಜ ಪಾಟೀಲ

ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ತಮಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವಾದರೂ ಸಿಗಬಹುದು ಎಂದು ಕಾಯುತ್ತಿದ್ದಾರೆ.

news18-kannada
Updated:September 19, 2020, 12:47 PM IST
ನಿಗಮ ಮಂಡಳಿ ಅಧ್ಯಕ್ಷ ಸ್ಥಾನ: ಕಾದು ನೋಡುವ ತಂತ್ರದಲ್ಲಿ ಶಿವರಾಜ ಪಾಟೀಲ
ರಾಯಚೂರು ನಗರ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲ
  • Share this:
ರಾಯಚೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದೆ. ಈ ಸಂದರ್ಭದಲ್ಲಿ ತಮಗೂ ಒಂದು ಅವಕಾಶ ಸಿಗಬಹುದು ಎಂದು ಕಾಯುತ್ತಿರುವ ಶಾಸಕರು ಹಲವರಿದ್ದಾರೆ. ಸಚಿವ ಆಕಾಂಕ್ಷಿಗಳಿಗೆ ಕೆಲವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅದರಲ್ಲಿ ಕೆಲವರು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡು ಅಧಿಕಾರ ಸ್ವೀಕರಿಸಿದ್ದಾರೆ. ಮತ್ತೆ ಕೆಲವರು ನಿರಾಕರಿಸಿದ್ದಾರೆ. ಇನ್ನೂ ಕೆಲವರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಮೂರನೆಯ ತಂತ್ರಕ್ಕೆ ರಾಯಚೂರು ನಗರ ಶಾಸಕ ಡಾ ಶಿವರಾಜ ಪಾಟೀಲ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಎರಡನೆಯ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಾ ಶಿವರಾಜ ಪಾಟೀಲ ಮೊದಲ ಬಾರಿ ಜೆಡಿಎಸ್​ನಿಂದ ಆಯ್ಕೆಯಾಗಿದ್ದರು. 2018 ರ ಚುನಾವಣೆಯ ಮುನ್ನ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿ ಈಗ ಬಿಜೆಪಿಯಿಂದ ಮತ್ತೆ ಶಾಸಕರಾಗಿದ್ದಾರೆ. ಸಹಜವಾಗಿಯೇ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಿವರಾಜ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ಅನುಮಾನ ಎನ್ನಲಾಗಿದೆ. ಇದೇ ಕಾರಣಕ್ಕೆ ಅವರಿಗೆ ಜೈವಿಕ ಇಂಧನ ತಂತ್ರಜ್ಞಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಘೋಷಣೆ ಮಾಡಲಾಗಿದೆ. ಆದರೆ ಇಲ್ಲಿಯವರೆಗೂ ಪಾಟೀಲರು ತಮಗೆ ನೀಡಿದ ಅಧ್ಯಕ್ಷ ಸ್ಥಾನ ಸ್ವೀಕರಿಸಿಲ್ಲ. ಅಧ್ಯಕ್ಷ ಸ್ಥಾನ ಘೋಷಣೆಯಾದ ತಕ್ಷಣದಿಂದಲೂ ವಹಿಸಿಕೊಳ್ಳುವ ಬಗ್ಗೆ ಗುಟ್ಟು ಬಿಟ್ಟುಕೊಡದ ಶಿವರಾಜ ಪಾಟೀಲ, ಈಗ ವಿಧಾನಸಭಾ ಅಧಿವೇಶನದ ನಂತರ ವಹಿಸಿಕೊಳ್ಳಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Cabinet Expansion: ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ; ಸುಳಿವು ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ

ಈ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ, ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ನನಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಆಸ್ಪತ್ರೆಯಲ್ಲಿದ್ದೆ. ಈಗ ಗುಣಮುಖರಾಗಿ ಬಂದು 10-12 ದಿನವಾಗಿದೆ. ಸೋಮವಾರದಿಂದ ವಿಧಾನ ಸಭಾ ಅಧಿವೇಶನ ನಡೆಯಲಿದೆ. ಅಧಿವೇಶನದ ನಂತರ ನೋಡೋಣ ಎಂದಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದು ದೇವದುರ್ಗಾ ಶಾಸಕ ಶಿವನಗೌಡ ನಾಯಕ ಒಲ್ಲದ ಮನಸ್ಸಿನಿಂದ ಕರ್ನಾಟಕ ರಸ್ತೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ಯಡಿಯೂರಪ್ಪ ಸರಕಾರ ಬರಲು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಮಸ್ಕಿಯ ಪ್ರತಾಪಗೌಡರನ್ನು ಮಸ್ಕಿಯಿಂದ ಆಯ್ಕೆಯಾದ ನಂತರ ಅವರನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆ ಇದೆ. ಮಸ್ಕಿ ವಿಧಾನಸಭಾ ಚುನಾವಣೆಯ ಬಗ್ಗೆ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಾಗಿದ್ದರಿಂದ ಇಲ್ಲಿ ಚುನಾವಣೆ ನಡೆದಿಲ್ಲ. ಚುನಾವಣೆ ನಡೆದು ಅವರು ಆಯ್ಕೆ ಆಗುವವರೆಗೂ ಜಿಲ್ಲೆಯ ಶಾಸಕರಿಗೆ ಸ್ಥಾನ ನೀಡುವುದು ಅನುಮಾನ ಎನ್ನಲಾಗಿದೆ. ಇದಕ್ಕೆ ಶಾಸಕ ಡಾ ಶಿವರಾಜ ಪಾಟೀಲ ಸಹ ಪರೋಕ್ಷವಾಗಿ ಒಪ್ಪಿಕೊಂಡಿದ್ದು ಪ್ರತಾಪಗೌಡರು ಸರಕಾರ ಬರಲು ಕಾರಣವಾಗಿದ್ದಾರೆ, ಅವರಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಅದರೂ ಇನ್ನು ಸ್ವಲ್ಪ ದಿನ ಕಾಯ್ದು ನೋಡುವ ತಂತ್ರಕ್ಕೆ ಅವರು ಮೊರೆ ಹೋಗಿರುವುದು ಸ್ಪಷ್ಠವಾಗಿದೆ.

ವರದಿ: ಶರಣಪ್ಪ ಬಾಚಲಾಪುರ
Published by: Vijayasarthy SN
First published: September 19, 2020, 12:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading