ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಒಂದೇ ದಿನ ಗಣಪತಿ ಪ್ರತಿಷ್ಠಾಪಿಸಿ; ಸಚಿವ ಕೆಎಸ್​ ಈಶ್ವರಪ್ಪ ಮನವಿ

ಘಅನೆಸಹ ಛಹಅತಉರತಹಿ 2020: ಗಣಪತಿ ಹಬ್ಬದ ದಿನ  ಬೆಳಿಗ್ಗೆ ಗಣಪತಿ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ನಂತರ  ಸಂಜೆ ಗಣಪತಿ ಮೂರ್ತಿ ವಿಸರ್ಜನೆ ಮಾಡಬೇಕು. ರಾಮಣ್ಣ ಶ್ರೇಷ್ಟಿ ಪಾರ್ಕ್, ಹಿಂದೂ ಮಹಾಸಭಾ ಗಣಪತಿ ಸೇರಿದಂತೆ ಎಲ್ಲಾ ಗಣಪತಿಗಳಿಗೂ ಒಂದೇ ದಿನ ಇಡಲು ಜಿಲ್ಲೆಯಲ್ಲಿ ಅನುಮತಿ ಕೊಡಲಾಗಿದೆ. ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುವಂತೆ ಈಶ್ವರಪ್ಪ ಕೇಳಿಕೊಂಡಿದ್ದಾರೆ.

news18-kannada
Updated:August 19, 2020, 6:18 PM IST
ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಒಂದೇ ದಿನ ಗಣಪತಿ ಪ್ರತಿಷ್ಠಾಪಿಸಿ; ಸಚಿವ ಕೆಎಸ್​ ಈಶ್ವರಪ್ಪ ಮನವಿ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ
  • Share this:
ಶಿವಮೊಗ್ಗ (ಆಗಸ್ಟ್‌ 19); ಕೊರೋನಾ ಪಾಸಿಟಿವ್ ಪ್ರಕರಣಗಳು ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ  ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶೋತ್ಸವ ಸರಳವಾಗಿ ಆಚರಿಸಿ ಎಂದು ಜಿಲ್ಲೆಯ ಜನರಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಶಿವಮೊಗ್ಗ ಜಿಲ್ಲೆಯಲ್ಲಿ, ಈ ವರ್ಷ ಗಣೇಶೋತ್ಸವ ಕೇವಲ ಒಂದೇ ಒಂದು ದಿನಕ್ಕೆ ಮಾತ್ರ ಸೀಮಿತ ಮಾಡಲಾಗಿದೆ. ಮೆರವಣಿಗೆಯಲ್ಲಿ ಗಣಪತಿ ತರುವಂತಿಲ್ಲ, ಮೆರವಣಿಗೆ ಮೂಲಕ ತೆರಳಿ ವಿಸರ್ಜನೆ ಮಾಡುವಂತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ  ವಿವಿಧ ಸಂಘಟನೆಗಳು ಮುಖಂಡರ ಜೊತೆ ಈ ಬಾರಿಯ ಗಣಪತಿ ಹಬ್ಬದ ಆಚರಣೆ ಬಗ್ಗೆ ಚರ್ಚೆ ನಡೆಸಿದರು. ನಂತರ ಮಾಹಿತಿ ನೀಡಿದ ಸಚಿವ ಈಶ್ವರಪ್ಪ, "ಕೊರೋನಾ ಸಂಕಷ್ಟದ ಸಮಯದಲ್ಲಿ ಜನರ ಜೀವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ಬಾರಿಯ ಗಣೇಶೋತ್ಸವ ಕೇವಲ ಒಂದೇ ಒಂದು ದಿನ ಮಾತ್ರ ಆಚರಣೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಕರೆಂಟ್ ಮತ್ತು ಮೈಕ್ ಗೆ ಯಾವುದೇ ಪರ್ಮಿಷನ್ ಸಹ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗಣಪತಿ ಹಬ್ಬದ ದಿನ  ಬೆಳಿಗ್ಗೆ ಗಣಪತಿ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ನಂತರ  ಸಂಜೆ ಗಣಪತಿ ಮೂರ್ತಿ ವಿಸರ್ಜನೆ ಮಾಡಬೇಕು. ರಾಮಣ್ಣ ಶ್ರೇಷ್ಟಿ ಪಾರ್ಕ್, ಹಿಂದೂ ಮಹಾಸಭಾ ಗಣಪತಿ ಸೇರಿದಂತೆ ಎಲ್ಲಾ ಗಣಪತಿಗಳಿಗೂ ಒಂದೇ ದಿನ ಇಡಲು ಜಿಲ್ಲೆಯಲ್ಲಿ ಅನುಮತಿ ಕೊಡಲಾಗಿದೆ. ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುವಂತೆ ಈಶ್ವರಪ್ಪ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : ಉತ್ತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಹಳದಿ ಅಲರ್ಟ್, ಬೆಂಗಳೂರಿನಲ್ಲೂ ಮಳೆ ಮುಂದುವರಿಕೆ!

ಕಡಿಮೆ ಜನ ಸೇರಿ,  ತಮ್ಮ ಜೀವವನ್ನು ಉಳಿಸಿಕೊಂಡು, ಮುಂದಿನ ವರ್ಷ ವಿಜೃಂಭಣೆಯಿಂದ ಗಣಪತಿ ಹಬ್ಬ ಆಚರಿಸಲು ತಯಾರಾಗಿ ಎಂದು ವಿನಂತಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರದ ತೀರ್ಮಾನದಂತೆ, ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲಾ ಗಣಪತಿ ಸಂಘಟನೆಗಳು ಬದ್ಧರಾಗಿರಬೇಕು. ಗಣಪತಿ ಮೂರ್ತಿಯನ್ನು ಈ ವರ್ಷ ಇಡಬೇಡಿ ಎಂದು ಜಿಲ್ಲಾಡಳಿತ ಹೇಳುತ್ತಿಲ್ಲ. ಅದರೆ ಬಹಳ ಎಚ್ಚರಿಕೆಯಿಂದ ಹಬ್ಬ ಮಾಡಬೇಕು. ಕೋವಿಡ್ 19 ಇರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರದಂತೆ ಗಣಪತಿ ಪ್ರತಿಷ್ಠಾಪನೆ ಮಾಡಬೇಕಿದೆ. ಹೀಗಾಗಿ ಒಂದೇ ದಿನ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಹೇಳಲಾಗುತ್ತಿದೆ ಎಂದಿದ್ದಾರೆ.
Published by: MAshok Kumar
First published: August 19, 2020, 6:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading