ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಜಗದೀಶ್ ಶೆಟ್ಟರ್ ಎಚ್ಚರಿಕೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮಾಡುವಲ್ಲಿ ನಿಸ್ಸೀಮರು. ಸರ್ಕಾರದ ಬಗ್ಗೆ ಬರೀ ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಯಾವುದೇ ಇಶ್ಯೂಗಳಿಲ್ಲದ ಕಾರಣ ಪ್ರತಿಪಕ್ಷದವರು ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದು ಒಳ್ಳೆಯದಲ್ಲ ಎಂದು ಜಗದೀಶ್‌ ಶೆಟ್ಟರ್‌ ಕಿಡಿಕಾರಿದರು. 

news18-kannada
Updated:August 31, 2020, 8:25 PM IST
ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಜಗದೀಶ್ ಶೆಟ್ಟರ್ ಎಚ್ಚರಿಕೆ
ಜಗದೀಶ್‌ ಶೆಟ್ಟರ್‌.
  • Share this:
ಕಲಬುರ್ಗಿ (ಆಗಸ್ಟ್‌ 31); ಡ್ರಗ್ಸ್‌ ದಂಧೆಯಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರಸ್ತುತ ಸದ್ದು ಮಾಡುತ್ತಿರುವ ಡ್ರಗ್ ಮಾಫಿಯಾ ಜೊತೆಗೆ ಸಿನಿಮಾ ಮತ್ತು ರಾಜಕಾರಣಿಗಳ ನಂಟಿನ ಕುರಿತು ಪ್ರತಿಕ್ರಿಯಿಸಿದ ಅವರು, "ಸರ್ಕಾರ ಈಗಾಗಲೇ ಎಲ್ಲಾ ಹಂತದಲ್ಲಿ ತನಿಖೆಗೆ ಮುಂದಾಗಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯನ್ನು ಸಹ ಪರಿಗಣಿಸಲಾಗಿದೆ. ತಪ್ಪಿತಸ್ಥರು ಯಾರೇ ಇದ್ರೂ ಸರ್ಕಾರ ಕಠಿಣ ಕ್ರಮ  ತೆಗೆದುಕೊಳ್ಳುತ್ತೆ" ಎಂದು ಭರವಸೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, "ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮಾಡುವಲ್ಲಿ ನಿಸ್ಸೀಮರು. ಸರ್ಕಾರದ ಬಗ್ಗೆ ಬರೀ ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಯಾವುದೇ ಇಶ್ಯೂಗಳಿಲ್ಲದ ಕಾರಣ ಪ್ರತಿಪಕ್ಷದವರು ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದು ಒಳ್ಳೆಯದಲ್ಲ" ಎಂದು ಕಿಡಿಕಾರಿದರು.

"ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರ್ಗಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಖಂಡಿತಾ ಕಲಬುರ್ಗಿಗೆ ನ್ಯಾಯ ಸಿಗಲಿದೆ. ಮುಖ್ಯಮಂತ್ರಿಗಳಿಗೂ ಈ ವಿಷಯ ಗಮನಕ್ಕಿದೆ. ನಾನೂ ಸಹ ಮತ್ತೊಮ್ಮೆ ಮುಖ್ಯಮಂತ್ರಿಗಳ ಬಳಿ ಈ ಕುರಿತಾಗಿ ಚರ್ಚಿಸುತ್ತೇನೆ. ಮುಂಬರುವ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕಲಬುರ್ಗಿಯ ಒಬ್ಬರಿಗೆ ಸಚಿವ ಸ್ಥಾನ ಸಿಗೋದು ಖಚಿತ" ಎಂದು ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಡ್ರಗ್ಸ್‌ ಸೇವನೆ ಮಾಡುವವರ 10-15 ಹೆಸರುಗಳನ್ನು ಸಾಕ್ಷಿ ಸಮೇತ ಪೊಲೀಸರಿಗೆ ನೀಡಿದ್ದೇನೆ; ಇಂದ್ರಜಿತ್ ಲಂಕೇಶ್

ಕೈಗಾರಿಕೋದ್ಯಮಿಗಳ ಜೊತೆ ಶೆಟ್ಟರ್ ಸಂವಾದ

ಕಲಬುರ್ಗಿಯ ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಜಿಲ್ಲಾ ಕೈಗಾರಿಕೋದ್ಯಮಿಗಳೊಂದಿಗೆ ಇಂದು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ್ ಶೆಟ್ಟರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಕುರಿತಾಗಿ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸಿದರು.

"ಧಾರವಾಡ, ಶಿವಮೊಗ್ಗ ಜೊತೆ ಕಲಬುರ್ಗಿಯನ್ನೂ ವಿಶೇಷ ಹೂಡಿಕೆ ವಲಯವನ್ನಾಗಿ ಘೋಷಿಸಿ ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿಗೆ ನಾಂದಿಹಾಡಲಾಗುವುದು. ಗುಜರಾತ್ ಮಾದರಿಯಲ್ಲಿ ವಿಶೇಷ ಹೂಡಿಕೆ ವಲಯ ಸ್ಥಾಪನೆಗೆ ಮುಂದಿನ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು. ಇಂತಹ ವಲಯಗಳಿಗೆ ವಿಶೇಷ ಅನುದಾನವೂ ಸಿಗಲಿದೆ" ಎಂದು ಶೆಟ್ಟರ್ ಅಭಿಪ್ರಾಯಪಟ್ಟರು.
Published by: MAshok Kumar
First published: August 31, 2020, 8:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading