ಭದ್ರಾವತಿಯ ವಿಎಸ್ಐಎಲ್ ಘಟಕದಿಂದ ಶಿವಮೊಗ್ಗ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ; ಕೆ.ಎಸ್.ಈಶ್ವರಪ್ಪ

ವಿಎಸ್ಐಎಲ್ ಘಟಕದಲ್ಲಿ 300 ಗ್ಯಾಸ್ ಸಿಲಿಂಡರ್‌ಗಳು ಸಹ ಲಭ್ಯವಿದ್ದು, ಇದನ್ನು ಸಹ ಜಿಲ್ಲೆಯ ಉಪಯೋಗಕ್ಕಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಆಕ್ಸಿಜನ್ ಆನಿಲ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದ್ದು, ಅದನ್ನು ದ್ರವ ರೂಪಕ್ಕೆ ರೂಪಾಂತರ ಮಾಡುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಲು ಸಚಿವ ಈಶ್ವರಪ್ಪ ಸೂಚಿಸಿದರು.

news18-kannada
Updated:August 22, 2020, 7:18 AM IST
ಭದ್ರಾವತಿಯ ವಿಎಸ್ಐಎಲ್ ಘಟಕದಿಂದ ಶಿವಮೊಗ್ಗ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ; ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್‌. ಈಶ್ವರಪ್ಪ.
  • Share this:
ಶಿವಮೊಗ್ಗ: ಭದ್ರಾವತಿಯ ವಿಎಸ್ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಪ್ರಸ್ತುತ ವಿಎಸ್ಐಎಲ್‌ನಲ್ಲಿ ಸ್ಥಳೀಯ ಬಳಕೆಗಾಗಿ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸೂಕ್ತವಾದ ಆಕ್ಸಿಜನ್ ಇಲ್ಲಿ ಉತ್ಪಾದಿಸಲಾಗುತ್ತಿದ್ದು, ಶಿವಮೊಗ್ಗ ನಗರದ ಆಸ್ಪತ್ರೆಗಳಿಗೆ ಇಲ್ಲಿಂದ ಆಕ್ಸಿಜನ್ ಪೂರೈಕೆ ಮಾಡಲು ಸರ್ಕಾರದಿಂದ ಪರವಾನಿಗೆ ಒದಗಿಸಲಾಗುವುದು. ಶಿವಮೊಗ್ಗ ನಗರದ ಆಸ್ಪತ್ರೆಗಳ ಶೇ. 30ರಷ್ಟು ಆಕ್ಸಿಜನ್ ಬೇಡಿಕೆಯನ್ನು ಈ ಒಂದೇ ಘಟಕದಿಂದ ಪೂರೈಕೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಎಸ್ಐಎಲ್ ಆಕ್ಸಿಜನ್ ತಯಾರಕಾ ಘಟಕಕ್ಕೆ ಭೇಟಿ ನೀಡಿ  ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಈಶ್ವರಪ್ಪ ಸಮಾಲೋಚನಾ ಸಭೆ ನಡೆಸಿದರು. ಜಿಲ್ಲೆಯ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್ ಲಭ್ಯವಿರುವ ಕಡೆಗಳಿಂದ ತರಿಸಲು ಕ್ರಮ ಕೈಗೊಳ್ಳಲಾಗಿದೆ. ಆಕ್ಸಿಜನ್ ಸಾಗಾಟ ಮಾಡಲು ಟ್ಯಾಂಕರ್‌ಗಳ ಕೊರತೆ ಕಂಡು ಬಂದಿದ್ದು, ಉನ್ನತ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು.

ವಿಎಸ್ಐಎಲ್ ಘಟಕದಲ್ಲಿ 300 ಗ್ಯಾಸ್ ಸಿಲಿಂಡರ್‌ಗಳು ಸಹ ಲಭ್ಯವಿದ್ದು, ಇದನ್ನು ಸಹ ಜಿಲ್ಲೆಯ ಉಪಯೋಗಕ್ಕಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಆಕ್ಸಿಜನ್ ಆನಿಲ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದ್ದು, ಅದನ್ನು ದ್ರವ ರೂಪಕ್ಕೆ ರೂಪಾಂತರ ಮಾಡುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಲು ಈಶ್ವರಪ್ಪ ಸೂಚಿಸಿದರು.

ಯಾವುದೇ ಕಾರಣಕ್ಕೂ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕುರಿತು ಯಾವುದೇ ದೂರು ಬಂದಿಲ್ಲ. ಆದರೆ ಕರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಎಲ್ಲಾ ಮೂಲಗಳಿಂದ ಆಕ್ಸಿಜನ್ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ : ಚೀನಿಯರ ವೀಸಾ ಮತ್ತು ಭಾರತದಲ್ಲಿನ ಡ್ಯ್ರಾಗನ್ ದೇಶದ ಶಿಕ್ಷಣ ಸಂಸ್ಥೆಗಳ ಪರಿಶೀಲನೆಗೆ ಮುಂದಾದ ಕೇಂದ್ರ ಸರ್ಕಾರ

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್  ಮಾತನಾಡಿ, "ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ 12 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಸಂಗ್ರಹಣಾ ಘಟಕವನ್ನು ಅಳವಡಿಸಲಾಗುತ್ತಿದ್ದು ಕೆಲವೇ ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.  ಖಾಸಗಿ ಆಕ್ಸಿಜನ್ ಸಾಗಾಟದಾರರ ನೆರವಿನಿಂದ ಪ್ರಸ್ತುತ ಬಳ್ಳಾರಿಯಿಂದ ವೈದ್ಯಕೀಯ ಸೇವೆಗೆ ಅಗತ್ಯವಾದ ಆಕ್ಸಿಜನ್  ತರಿಸಲಾಗುತ್ತಿದೆ.

ಈಗ ಅಗತ್ಯಕ್ಕೆ ತಕ್ಕ ಆಕ್ಸಿಜನ್ ಜಿಲ್ಲೆಗೆ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಅಗತ್ಯ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಎಸ್ಐಎಲ್ ಘಟಕದಿಂದ ಆಕ್ಸಿಜನ್ ಪಡೆಯಲು ಉದ್ದೇಶಿಸಲಾಗಿದೆ" ಎಂದಿದ್ದಾರೆ. ಈ ವೇಳೆ ವಿಎಸ್ಐಎಲ್ ಘಟಕದ ಹಿರಿಯ ಅಧಿಕಾರಿಗಳು, ಖಾಸಗಿ ಪೂರೈಕೆದಾರರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Published by: MAshok Kumar
First published: August 22, 2020, 7:18 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading