ಶಿವಮೊಗ್ಗದ ರಾಗಿಗುಡ್ಡದಲ್ಲಿ 20 ಎಕರೆ ಪ್ರದೇಶದಲ್ಲಿ ಜೈವಿಕ ವನ ಅಭಿವೃದ್ಧಿಗೆ ಯೋಜನೆ 

ರಾಗಿಗುಡ್ಡದ 112 ಸರ್ವೆ ನಂಬರ್ ನಲ್ಲಿ ಒಟ್ಟು 69 ಎಕರೆ ಪ್ರದೇಶ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43 ಎಕರೆ  ಪ್ರದೇಶವನ್ನು ಈಗಾಗಲೇ ಮಂಜೂರು ಮಾಡಲಾಗಿದೆ.

news18-kannada
Updated:August 13, 2020, 3:54 PM IST
ಶಿವಮೊಗ್ಗದ ರಾಗಿಗುಡ್ಡದಲ್ಲಿ 20 ಎಕರೆ ಪ್ರದೇಶದಲ್ಲಿ ಜೈವಿಕ ವನ ಅಭಿವೃದ್ಧಿಗೆ ಯೋಜನೆ 
ಅಧಿಕಾರಿಗಳೊಂದಿಗೆ ಚರ್ಚಿಸುತ್ತಿರುವ ಸಚಿವ ಕೆ ಎಸ್ ಈಶ್ವರಪ್ಪ
  • Share this:
ಶಿವಮೊಗ್ಗ(ಆಗಸ್ಟ್​.13): ಶಿಮೊಗ್ಗ ನಗರದಲ್ಲಿರುವ ರಾಗಿಗುಡ್ಡದಲ್ಲಿ ಲಭ್ಯವಿರುವ ಸುಮಾರು 20 ಎಕರೆ ಕಂದಾಯ ಜಮೀನಿನಲ್ಲಿ ಜೈವಿಕ ವನ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದೆ. ಶಿವಮೊಗ್ಗ ನಗರಕ್ಕೆ ಅತ್ಯಂತ ಹತ್ತಿರದಲ್ಲಿರುವ ಈ ಪ್ರದೇಶದ ದೇವಸ್ಥಾನಗಳ ತಾಣವಾಗಿದೆ. ಪ್ರತಿ ನಿತ್ಯ ನೂರಾರು ಜನರು ಇಲ್ಲಿಗೆ ಹೋಗಿ ಸುಂದರ ಪರಿಸರ ಸೌಂದರ್ಯವನ್ನು ಆಸ್ವಾದಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ರಾಗಿಗುಡ್ಡದಲ್ಲಿ ಸಸ್ಯ ಸಂಕುಲಗಳು ನಾಶವಾಗುತ್ತಿದ್ದು, ಇದನ್ನು ರಕ್ಷಣೆ ಮಾಡುವ ಉದ್ದೇಶದಿಂದ ಜೈವಿಕ ವನ ನಿರ್ಮಾಣಕ್ಕೆ ಮಂದಾಗಲಾಗಿದೆ.

ಶಿವಮೊಗ್ಗ ಜಿಲ್ಲಾ ಉಸ್ತುವರಿ ಸಚಿವ ಈಶ್ವರಪ್ಪ, ರಾಗಿಗುಡ್ಡ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಹಸಿರೀಕರಣಕ್ಕಾಗಿ 3.86 ಕೋಟಿ ರೂ. ಮೀಸಲಿರಿಸಲಾಗಿದ್ದು, ಇದನ್ನು ಬಳಸಿಕೊಂಡು ಜೈವಿಕ ವನ ಅಭಿವೃದ್ಧಿಪಡಿಲು ಉದ್ದೇಶಿಸಲಾಗಿದೆ.

ಮಲೆನಾಡಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉತ್ತಮ ಸಸಿಗಳನ್ನು ಬಳಸಿಕೊಂಡು ವನ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಇದರಲ್ಲಿ ಮುಂದಿನ ಐದು ವರ್ಷಗಳ ನಿರ್ವಹಣೆಯೂ ಸೇರಿರಬೇಕು. ಒಟ್ಟು 7 ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ರಾಗಿಗುಡ್ಡದ 112 ಸರ್ವೆ ನಂಬರ್ ನಲ್ಲಿ ಒಟ್ಟು 69 ಎಕರೆ ಪ್ರದೇಶ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43 ಎಕರೆ  ಪ್ರದೇಶವನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಇದರಲ್ಲಿ 5 ಎಕರೆ ಇಎಸ್ಐ ಆಸ್ಪತ್ರೆ, 8 ಎಕರೆ ಜಾಗವನ್ನು ಪ್ರಾದೇಶೀಕ ವಿಜ್ಞಾನ ಕೇಂದ್ರ, 5 ಎಕರೆ ಜಾಗ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದೆ.

ಇದನ್ನೂ ಓದಿ : Bengaluru Violence - ಬೆಂಗಳೂರು ಗಲಭೆ: 9 ಎಫ್ಐಆರ್, 17 ಆರೋಪಿಗಳು – ನಾಲ್ವರ ಬಂಧನ

ಇನ್ನೂ ಕೆಲವು ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಉಳಿದ ಜಾಗದಲ್ಲಿ ಜೈವಿಕ ಉದ್ಯಾನಕ್ಕೆ ಬಳಸಿ ಕೊಳ್ಳಲಾಗುತ್ತಿದೆ. ಇದೇ ರೀತಿ ಉದ್ದೇಶಿತ ವಾಜಪೇಯಿ ಬಡಾವಣೆಯಲ್ಲಿ 10 ಎಕರೆ  ಮೀಸಲು ಅರಣ್ಯವಿದ್ದು ಅಲ್ಲಿಯೂ ಸಸಿಗಳನ್ನು ನೆಡಲು ಚಿಂತನೆ ನಡೆಸಲಾಗುತ್ತಿದೆ. ರಾಗಿಗುಡ್ಡದಲ್ಲಿ ಸುಮಾರು 20 ಗುಂಟೆ ಜಮೀನು ಒತ್ತುವರಿ ಮಾಡಿ 22 ಮನೆಗಳನ್ನು ನಿರ್ಮಿಸಲಾಗಿದೆ. ಇದನ್ನು ತೆರವುಗೊಳಿಸಲು, ಜೈವಿಕ ವನ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಗಿಗುಡ್ಡದ ತುದಿಯಲ್ಲಿ ನಿಂತರೆ ಸಾಕು ಶಿವಮೊಗ್ಗ ನಗರದ ಸಂಪೂರ್ಣ ಚಿತ್ರಣ ಸಿಗುತ್ತದೆ. ಇಲ್ಲಿ ಸೂಕ್ತ ಮೂಲಭೂತ ಸೌಲಭ್ಯಗಳು ಇಲ್ಲದ ಕಾರಣ ಜನರು ಹೆಚ್ಚಾಗಿ ಹೋಗುವುದನ್ನು ಇತ್ತೀಚೆಗೆ ನಿಲ್ಲಿಸಿದ್ದರು. ಜೈವಿಕ ವನವಾದರೇ ಈ ಪ್ರದೇಶಕ್ಕೆ ಪ್ರವಾಸಿಗರ ಸಂಖ್ಯೆ ಸಹ ಹೆಚ್ಚಾಗಲಿದೆ. ಅಲ್ಲದೇ ಸುಂದರ ಪರಿಸರವೊಂದು ನಿರ್ಮಾಣವಾದಂತೆ ಆಗುತ್ತದೆ. ಶಿವಮೊಗ್ಗ ನಗರದ ಜನರಿಗೆ ಉತ್ತಮ ಪರಿಸರ ತಾಣವೊಂದು ಅತಿ ಹತ್ತಿರದಲ್ಲೇ ಸಿಗುವಂತಾಗುತ್ತದೆ.
Published by: G Hareeshkumar
First published: August 13, 2020, 3:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading