ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಘಟನೆ ನಡೆದ ತಕ್ಷಣ ಗ್ರಾಮದ ಜನರ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟಿದ್ದ ಮಕ್ಕಳನ್ನ ಕಂಡು ಮಮ್ಮಲಮರುಗಿದರು. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

news18-kannada
Updated:August 2, 2020, 5:34 PM IST
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಪ್ರಾತಿನಿಧಿಕ ಚಿತ್ರ
  • Share this:
ತುಮಕೂರು(ಆಗಸ್ಟ್ .02): ಆಟವಾಡುತ್ತಿದ್ದ ಮಕ್ಕಳಿಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ತುಮಕೂರು ತಾಲೂಕಿನ ಮರಿತಿಮ್ಮನಹಳ್ಳಿ ನಡೆದಿದೆ. ಗ್ರಾಮದ ಕೃಷ್ಣ ಎಂಬುವವರ ಮಕ್ಕಳಾದ ಶರತ್( 5 ) ಹಾಗೂ ಲೋಚನಾ ( 3) ಎಂದು ಗುರುತಿಸಲಾಗಿದೆ. 

ಇತ್ತೀಚೆಗೆ ತಾಲೂಕಿನಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಪೋಷಕರು ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ಮಗ್ನರಾಗಿದ್ದರು. ಈ ವೇಳೆ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಎರಡು ಕಣ್ಣುಗಳಂತಿದ್ದ ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನೆ ನಡೆದ ತಕ್ಷಣ ಗ್ರಾಮದ ಜನರ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟಿದ್ದ ಮಕ್ಕಳನ್ನ ಕಂಡು ಮಮ್ಮಲಮರುಗಿದರು. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಅಡಿಕೆ ಬೆಳೆಗಾರರಿಗೆ ಕಾಡುತ್ತಿದೆ ಕೊಳೆರೋಗ ಬಾಧೆ ; ಪರಿಹಾರಕ್ಕಾಗಿ ಎದುರು ನೋಡುತ್ತಿರುವ ಮಲೆನಾಡಿನ ರೈತ

ಜಿಲ್ಲೆಯಲ್ಲಿ ಈವರೆಗೆ ಹಲವಾರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿವೆ. ಈ ಬಗ್ಗೆ ಸರ್ಕಾರ ಕೂಡ ಈ ಹಿಂದೇಯೇ ತೆರೆದ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಸುವಂತೆ ಸೂಚಿಸಲಾಗಿತ್ತು. ಆದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಹುತೇಕ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿಲ್ಲ.

ಗ್ರಾಮೀಣ ಭಾಗದಲ್ಲಿ ಕೃಷಿ ಹೊಂಡಗಳು ಮಕ್ಕಳ ಬಲಿಗಾಗಿ ಬಾಯ್ತೆರೆದು ಕಾಯುತ್ತಿದ್ದು ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ.
Published by: G Hareeshkumar
First published: August 2, 2020, 4:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading