ವಿಜಯಪುರ : ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಸೂಕ್ತ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವುದರ ಜೊತೆಗೆ ನಿರಂತರ ವಿದ್ಯುತ ಸರಬರಾಜು ಕೈಗೊಳ್ಳಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡಕ್ಕೆ ಸಂಬಂಧಿಸಿದಂತೆ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು.

news18-kannada
Updated:September 26, 2020, 7:08 AM IST
ವಿಜಯಪುರ : ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಸೂಕ್ತ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
  • Share this:
ವಿಜಯಪುರ(ಸೆಪ್ಟೆಂಬರ್​. 26): ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಸಾಲ ಮತ್ತು ಸಹಾಯ ಧನ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಎಸ್ಸಿ ಮತ್ತು ಎಸ್ಟಿ ಫಲಾನುಭವಿಗಳಿಗೆ ಸರಕಾರ ನೀಡುವ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಸಕಾಲಕ್ಕೆ ನೀಡಬೇಕು ಮ್ತು ಸಾಲ ನೀಡಲು ಮುಂಗಡ ಠೇವಣಿ ಹಣ ಪಡೆಯ ಬಾರದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಎಂ. ಟೆಕ್, ಎಂಬಿಬಿಎಸ್ ಮತ್ತು ನಾನಾ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡಲು ಕ್ರೀಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅರ್ಹತೆ ಮೇಲೆ ಹೆಚ್ಚಿನ ಅಂಕಗಳ ಆಧಾರದಲ್ಲಿ ಈ ಸೌಲಭ್ಯ ದೊರಕಿಸಲು ಕ್ರಮ ಕೈಗೊಳ್ಳಬೇುಕು ಎಂದು ಸೂಚನೆ ನೀಡಿದರು.

ಕೊರೋನಾ ಲಾಕ್‍ಡೌನ್ ಹಿನ್ನಲೆಯಲ್ಲಿ ತೀವ್ರ ಸಂಕಷ್ಠ ಎದುರಿಸುತ್ತಿರುವ ಪರಿಶಿಷ್ಠ ಜಾತಿಯ ಚಲವಾದಿ, ಸಿಂಗೆ ಜನಾಂಗಗಳಿಗೂ ಸರಕಾರದಿಂದ ಸಹಾಯಧನ ಸೌಲಭ್ಯ ನೀಡಬೇಕು ಎಂದು ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ ಈ ಸಂದರ್ಭದಲ್ಲಿ ಮನವಿ ಮಾಡಿರುವ ಈ ಕುರಿತು ಅರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸೂಚನೆ ನೀಡಿದರು.

ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ಥರಿಗೆ ಸಕಾಲಕ್ಕೆ ಪರಿಹಾರ ದೊರೆಯಬೇಕು.  ಪರಿಹಾರ ನೀಡುವುದು ಸೇರಿದಂತೆ ಪ್ರತಿ ಹಂತದ ಪ್ರಗತಿಯ ಬಗ್ಗೆ ಕಾಲಕಾಲಕ್ಕೆ ತಪ್ಪದೆ ಮಾಹಿತಿ ಸಲ್ಲಿಸಬೇಕು. ಪ್ರತಿಯೊಂದು ದೌರ್ಜನ್ಯ ಪ್ರಕರಣಗಳ ಹಂತದ ಕುರಿತು ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವುದರ ಜೊತೆಗೆ ನಿರಂತರ ವಿದ್ಯುತ ಸರಬರಾಜು ಕೈಗೊಳ್ಳಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡಕ್ಕೆ ಸಂಬಂಧಿಸಿದಂತೆ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ನವೀಕರಣಕ್ಕೆ ಸಂಬಂಧಿಸಿದಂತೆ ತಾವೂ ಖುದ್ದಾಗಿ ಭೇಟಿ ನೀಡಿ ಕ್ಷೇತ್ರ ವ್ಯಾಪ್ತಿ ಆಧಾರದ ಮೇಲೆ ಸುಧಾರಣೆಗೆ ಅವಶ್ಯಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಈ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ : ತನ್ನ ರಕ್ತದಿಂದಲೇ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಭಾವಚಿತ್ರ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಚಿತ್ರಕಲಾವಿದ

ಅತಾಲಟ್ಟಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ನೀಗಿಸಬೇಕು. ಕೆಸರಟ್ಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ತೊರವಿ ಗ್ರಾಮದ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲು  ಸೂಕ್ತ ನಿವೇಶನ ಇದ್ದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಮಸಬಿನಾಳ ಗ್ರಾಮದಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಯನ್ನು ಭರ್ತಿ ಮಾಡಬೇಕು ಎಂದು ಅವರು ತಿಳಿಸಿದರು.
ನಾನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ಸಹಕಾರ ನೀಡಿದ್ದಕ್ಕೆ ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ಸಮಿತಿ ಸದಸ್ಯರಿಗೆ ಮತ್ತು ಸಮುದಾಯದವರಿಗೆ ಅಭಿನಂದನೆ ಸಲ್ಲಿಸಿದರು
Published by: G Hareeshkumar
First published: September 26, 2020, 7:08 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading