ಯಡಿಯೂರಪ್ಪ ದೆಹಲಿ‌ ಭೇಟಿ‌ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ; ಸಚಿವ ಜಗದೀಶ್ ಶೆಟ್ಟರ್

ಡ್ರಗ್ಸ್  ಪ್ರಕರಣದಲ್ಲಿ ಯಾರೇ ಇದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾಜಕಾರಣಿಗಳ‌ ಮಕ್ಕಳು ಭಾಗಿಯಾಗಿದ್ದರೆ ಅವರ ಹೆಸರು ಕೊಡಿ, ನಾನೇ ಗೃಹ ಸಚಿವರಿಗೆ ಲಿಸ್ಟ್ ಕೊಡುತ್ತೇನೆ

news18-kannada
Updated:September 17, 2020, 6:04 PM IST
ಯಡಿಯೂರಪ್ಪ ದೆಹಲಿ‌ ಭೇಟಿ‌ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ; ಸಚಿವ ಜಗದೀಶ್ ಶೆಟ್ಟರ್
ಸಚಿವ ಜಗದೀಶ್ ಶೆಟ್ಟರ್
  • Share this:
ಹುಬ್ಬಳ್ಳಿ(ಸೆಪ್ಟೆಂಬರ್​. 17): ಸಿಎಂ ಯಡಿಯೂರಪ್ಪನವರ ದೆಹಲಿ‌ ಭೇಟಿ‌ಗೆ ಬೇರೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ. ಮುಖ್ಯಮಂತ್ರಿಗಳ ಬದಲಾವಣೆ ಎಂಬುವುದು ಮಾಧ್ಯಮಗಳ ಸೃಷ್ಟಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಎನ್ನುವುದೆಲ್ಲಾ ಸುಳ್ಳು. ಸದ್ಯಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಮಾಡುವ ವಿಚಾರವೇ ಇಲ್ಲಾ ಎಂದಿದ್ದಾರೆ. ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಹಾಗೂ ಕೇಂದ್ರ ಸರ್ಕಾರದ ಅನುದಾನಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ದೆಹಲಿಗೆ ಹೋಗಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿರುವ ವಿಚಾರದ ಬಗ್ಗೆ ಸ್ವತಃ ಕುಮಾರಸ್ವಾಮಿಯವರೇ ಸ್ಪಷ್ಟನೆ ನೀಡಿದ್ದಾರೆ. ಯಾಕೆ ಮುಖ್ಯಮಂತ್ರಿಗಳನ್ನು ಭೇಟಿ ಆಗಿದ್ದಾರೆಂದು ತಿಳಿಸಿದ್ದಾರೆ. ಕುಮಾರಸ್ವಾಮಿಯವರು ಶಾಸಕರಾಗಿ ಅವರ ಕ್ಷೇತ್ರದ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ. ಹೀಗಾಗಿ ಸಿಎಂ ಮತ್ತು ಹೆಚ್ಡಿಕೆ ಭೇಟಿಯ ಬಗ್ಗೆ ನಾವೇನು ಹೆಚ್ಚಿಗೆ ಮಾತನಾಡುವ ಅವಶ್ಯಕತೆಯಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದ್ದರಿಂದ ಕೈಗಾರಿಕೆಗಳಿಗೆ ಆಕ್ಸಿಜನ್ ಕೊರತೆ ಆಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮೊದಲು ಜೀವ ಉಳಿಸಲು ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ. ತದ ನಂತರದಲ್ಲಿ ಕೈಗಾರಿಕೆಗಳಿಗೆ ಸರಬರಾಜು ಮಾಡಲಾಗುವುದು ಎಂದಿದ್ದಾರೆ.

ಆಕ್ಸಿಜನ್ ಬೇಡಿಕೆ ಹೆಚ್ಚಾಗಿದ್ದರೂ ಉತ್ಪಾದನೆ ಮೊದಲಿದ್ದಷ್ಟೇ ಇದೆ.‌ ಹಾಗಾಗಿ ಕೊರತೆ ಕಂಡು ಬಂದಿದೆ.  ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಸೂಕ್ತ ‌ನಿರ್ದೇಶನ ನೀಡಲಾಗಿದೆ. ಆದಷ್ಟು ಶೀಘ್ರ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಡ್ರಗ್ಸ್  ಪ್ರಕರಣದಲ್ಲಿ ಯಾರೇ ಇದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾಜಕಾರಣಿಗಳ‌ ಮಕ್ಕಳು ಭಾಗಿಯಾಗಿದ್ದರೆ ಅವರ ಹೆಸರು ಕೊಡಿ, ನಾನೇ ಗೃಹ ಸಚಿವರಿಗೆ ಲಿಸ್ಟ್ ಕೊಡುತ್ತೇನೆ ಎಂದವರು ಹೇಳಿದ್ದಾರೆ.

ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಪರಿಹಾರ ಸಮರ್ಪಕವಾಗಿ ಬರುತ್ತಿಲ್ಲಾ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೆರೆ ಪರಿಹಾರದ ಕುರಿತು ಕೇಂದ್ರ ತಂಡ ಅಧ್ಯಯನ ಮಾಡಿದೆ. ಎಷ್ಟು ಪರಿಹಾರ ಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಅಧ್ಯಯನ ತಂಡ ತಿಳಿಸಿದೆ. ಅದರಂತೆ ಪರಿಹಾರ ಬರುತ್ತಿದೆ. ನೆರೆ ಪರಿಹಾರ ಸರಿಯಾಗಿ ಬಂದಿಲ್ಲಾ ಅನ್ನೋದು ತಪ್ಪು. ಮಾರ್ಗ ಸೂಚಿಯಂತೆ ಯಾವಾಗ ಎಷ್ಟು ಪರಿಹಾರ ಬರಬೇಕೋ ಅಷ್ಟು ಬರುತ್ತಿದೆ ಎಂದವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿಐದು ಲಕ್ಷ ಪರಿಹಾರದಲ್ಲಿ ದಕ್ಕಿದ್ದು ಕಿಂಚಿತ್ತು ; ಪೂರ್ಣ ಪ್ರಮಾಣದ ಮನೆ ನಿರ್ಮಾಣವಾಗದೆ ಸಂತ್ರಸ್ಥರ ಪೀಕಲಾಟ

ಇತ್ತ ನವದೆಹಲಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುತ್ತೇನೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ರಾಜ್ಯದ ಅಭಿವೃದ್ದಿ ಸೇರಿದಂತೆ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೂಡ ಹೈಕಮಾಂಡ್ ಜತೆ ಚರ್ಚಿಸುತ್ತೇನೆ. ಸಂಪುಟ ವಿಸ್ತರಣೆಯೋ, ಪುನರ್ ​​ರಚನೆಯೋ ಎಂಬ ಬಗ್ಗೆ ಗೊತ್ತಿಲ್ಲ. ಹೈಕಮಾಂಡ್​​ ಭೇಟಿ ಮಾಡಿದ ಬಳಿಕ ಯಾವಾಗ ಸಂಪುಟ ವಿಸ್ತರಣೆ ಎನ್ನುವ ಬಗ್ಗೆ ಗೊತ್ತಾಗಲಿದೆ. ಇದೇ ವಿಷಯವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ರಾಜ್ಯದ ಅಭಿವೃದ್ದಿ ಸಂಬಂಧ ಹಲವಾರು ಕೆಲಸಗಳಿಗೆ. ಇದರ ಬಗ್ಗೆ ಚರ್ಚಿಸಲು ಕೇಂದ್ರ ಸಚಿವರನ್ನು ಭೇಟಿಯಾಗಬೇಕಿದೆ. ಮೊದಲು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಹತ್ತಾರು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವೆ ಎಂದು ತಿಳಿಸಿದ್ದಾರೆ.
Published by: G Hareeshkumar
First published: September 17, 2020, 5:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading