IPL

  • associate partner

IPL 2020: ಮತ್ತೊಂದು ದಾಖಲೆಯ ಸನಿಹದಲ್ಲಿ ಎಬಿ ಡಿವಿಲಿಯರ್ಸ್

Ab De Villiers: ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 10 ನೇ ರನ್ ಗಳಿಸುವುದರೊಂದಿಗೆ ವಿರಾಟ್ ಕೊಹ್ಲಿ ಟಿ 20 ಕ್ರಿಕೆಟ್‌ನಲ್ಲಿ 9000 ರನ್ ದಾಟಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

news18-kannada
Updated:October 21, 2020, 6:02 PM IST
IPL 2020: ಮತ್ತೊಂದು ದಾಖಲೆಯ ಸನಿಹದಲ್ಲಿ ಎಬಿ ಡಿವಿಲಿಯರ್ಸ್
AB de Villiers
  • Share this:
IPL 2020 ಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ಗೆಲುವು, 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಟೂರ್ನಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್​ಸಿಬಿ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ 55 ರನ್ ಬಾರಿಸಿ ಎಬಿ ಡಿವಿಲಿಯರ್ಸ್ ಅಬ್ಬರಿಸಿದ್ದರು. ಇದೀಗ 39ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಮತ್ತೊಮ್ಮೆ ಅಬ್ಬರಿಸಿದ್ರೆ ಎಬಿಡಿ ಹೆಸರಿನಲ್ಲಿ ದಾಖಲೆಯೊಂದು ಸೇರ್ಪಡೆಯಾಗಲಿದೆ.

ಹೌದು, ಕೊಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ 58 ರನ್​ಗಳಿಸಿದರೆ ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ರನ್​ ಪೂರೈಸಿದ ಆಟಗಾರರ ಪಟ್ಟಿಗೆ ಎಬಿಡಿ ಸೇರ್ಪಡೆಯಾಗಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ದಕ್ಷಿಣ ಆಫ್ರಿಕಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಪಾತ್ರರಾಗಲಿದ್ದಾರೆ. ಇದರೊಂದಿಗೆ ಈ ಸಾಧನೆಗೈದ 8ನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 10 ನೇ ರನ್ ಗಳಿಸುವುದರೊಂದಿಗೆ ವಿರಾಟ್ ಕೊಹ್ಲಿ ಟಿ 20 ಕ್ರಿಕೆಟ್‌ನಲ್ಲಿ 9000 ರನ್ ದಾಟಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಟಿ20 ಕ್ರಿಕೆಟ್​ನಲ್ಲಿ ಭಾರತ ಹಾಗೂ ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಿರುವ ಕೊಹ್ಲಿ 9 ಸಾವಿರ ರನ್ ಸಾಧನೆ ಮಾಡಿದ ವಿಶ್ವದ 7ನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್ - 13300+ ರನ್), ಕೀರನ್ ಪೊಲಾರ್ಡ್ ( ವೆಸ್ಟ್ ಇಂಡೀಸ್ - 10370+), ಶೋಯೆಬ್ ಮಲಿಕ್ (ಪಾಕಿಸ್ತಾನ - 9926), ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್ - 9922), ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ - 9450+) ಮತ್ತು ಆರೋನ್ ಫಿಂಚ್ (ಆಸ್ಟ್ರೇಲಿಯಾ - 9150+) ಕೊಹ್ಲಿಗಿಂತ ಮುಂದಿನ ಸ್ಥಾನದಲ್ಲಿದ್ದಾರೆ.

ಇಂದಿನ ಪಂದ್ಯದಲ್ಲಿ ಎಬಿಡಿ ಬ್ಯಾಟ್​ನಿಂದ 58 ರನ್ ಸಿಡಿದರೆ ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ರನ್ ಪೂರೈಸಿದ ಆರ್​ಸಿಬಿಯ ಎರಡನೇ ಆಟಗಾರ ಎಂಬ ಕೀರ್ತಿಗೆ ಡಿವಿಲಿಯರ್ಸ್​ ಪಾತ್ರರಾಗಲಿದ್ದಾರೆ.
POINTS TABLE:

SCHEDULE TIME TABLE: ORANGE CAP:

PURPLE CAP:

RESULT DATA:

MOST SIXES:

ಇದನ್ನೂ ಓದಿ:   IPL 2020: ರಾಹುಲ್ ಸಲಹೆಗೆ ಕೊಹ್ಲಿಯ ಕೌಂಟರ್..!
Published by: zahir
First published: October 21, 2020, 6:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading