IPL

  • associate partner

KKR vs RCB, IPL 2020 Live Score: ಆರ್​ಸಿಬಿ 2 ವಿಕೆಟ್ ಪತನ

IPL 2020, Kolkata Knight Riders vs Royal Challengers Bangalore Live Score: ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ ಉಭಯ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೋಲ್ಕತ್ತಾ ನೈಟ್ ರೈಡರ್ಸ್​​ ತಂಡ 15ರಲ್ಲಿ ಗೆಲುವು ದಾಖಲಿಸಿದ್ದರೆ, ರಾಯಲ್ ಚಾಲೆಂಜರ್ಸ್​ ಬೆಂಗಳೂರು‌ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ.

news18-kannada
Updated:October 21, 2020, 10:07 PM IST
KKR vs RCB, IPL 2020 Live Score: ಆರ್​ಸಿಬಿ 2 ವಿಕೆಟ್ ಪತನ
KKR vs RCB Live Score Updates
  • Share this:
ಅಬುಧಾಬಿ (ಅ. 21): ಇಲ್ಲಿನ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಐಪಿಎಲ್​ನ 39ನೇ ಪಂದ್ಯ ನಡೆಯಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಬೌಲರ್​​ಗಳ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಮೊಹಮ್ಮದ್ ಸಿರಾಜ್ ಅವರ ಬೆಂಕಿಯ ಚೆಂಡಿಗೆ ನಲುಗಿದ ಕೆಕೆಆರ್ 20 ಓವರ್​ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 84 ರನ್ ಗಳಿಸಿದೆ.

ಸದ್ಯ ಸುಲಭ ಗುರಿ ಬೆನ್ನಟ್ಟಿರುವ ಆರ್​ಸಿಬಿ ಭರ್ಜರಿ ಆರಂಭ ಪಡೆದುಕೊಂಡಿದೆ. ಓಪನರ್​ಗಳಾದ ದೇವದತ್ ಪಡಿಕ್ಕಲ್ ಹಾಗೂ ಆ್ಯರೋನ್ ಫಿಂಚ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಕೋಲ್ಕತ್ತಾ ಕೇವಲ 14 ರನ್​ಗೆ 4 ವಿಕೆಟ್ ಕಳೆದುಕೊಂಡಿತು. ಶುಭ್ಮನ್ ಗಿಲ್ ಜೊತೆ ಓಪನರ್ ಆಗಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ ಕೇವಲ 1 ರನ್​ ಗಳಿಸಿ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಔಟ್ ಆದರು. ಮುಂದಿನ ಎಸೆತದಲ್ಲೇ ನಿತೀಶ್ ರಾಣಾ ಕ್ಲೀನ್ ಬೌಲ್ಡ್ ಆಗುವ ಮೂಲಕ ಪೆವಿಲಿಯನ್ ಹಾದಿ ಹಿಡಿದರು.



3ನೇ ಓವರ್ ಬೌಲಿಂಗ್​ಗೆ ಇಳಿದ ನವ್​ದೀಪ್ ಸೈನಿ ತಮ್ಮ ಎರಡನೇ ಎಸೆತದಲ್ಲಿ ಶುಭ್ಮನ್ ಗಿಲ್(1) ಅವರನ್ನು ಔಟ್ ಮಾಡುವ ಮತ್ತೊಂದು ಬ್ರೇಕ್ ನೀಡಿದರು. ಟಾಮ್ ಬಾಂಟನ್ ಆಟ 10 ರನ್​ಗೆ ಅಂತ್ಯವಾಯಿತು. ದಿನೇಶ್ ಕಾರ್ತಿಕ್(4) ಚಹಾಲ್ ಬೌಲಿಂಗ್​ನಲ್ಲಿ ಎಲ್​ಬಿ ಬಲೆಗೆ ಸಿಲುಕಿದರು.

ಪ್ಯಾಟ್ ಕಮಿನ್ಸ್​ ಕೂಡ ಬಂದ ಬೆನ್ನಲ್ಲೆ ನಿರ್ಗಮಿಸಿದರು. ನಾಯಕ ಇಯಾನ್ ಮಾರ್ಗನ್​ಗೆ ಯಾವೊಬ್ಬ ಬ್ಯಾಟ್ಸ್​ಮನ್ ಸಾತ್ ನೀಡಲಿಲ್ಲ. 16ನೇ ಓವರ್​ನ​ ಸುಂದರ್ ಬೌಲಿಂಗ್​ನಲ್ಲಿ ಮಾರ್ಗನ್ ಕೂಡ ಔಟ್ ಆದರು. 34 ಎಸೆತಗಳಲ್ಲಿ 30 ಗಳಿಸಿ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು.

ಅಂತಿಮವಾಗಿ ಕೆಕೆಆರ್ 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 84 ರನ್ ಗಳಿಸಿತು. ಆರ್​ಸಿಬಿ ಪರ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಿತ್ತರೆ, ಯಜುವೇಂದ್ರ ಚಹಾಲ್ 2 ಹಾಗೂ ವಾಷಿಂಗ್ಟನ್ ಸುಂದರ್, ನವ್​ದೀಪ್ ಸೈನಿ 1 ವಿಕೆಟ್ ಪಡೆದರು.

ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಶಹ್ಬಾಜ್ ಅಹ್ಮದ್ ಬದಲು ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುತ್ತಿದ್ದಾರೆ. ಇತ್ತ ಕೆಕೆಆರ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಶಿವಂ ಮಾವಿ ಮತ್ತು ಆ್ಯಂಡ್ರೋ ರಸೆಲ್ ಬದಲು ಟಾಮ್ ಬಾಂಟನ್ ಮತ್ತು ಪ್ರಸಿದ್ಧ್ ಕೃಷ್ಣ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್‌ (ವಿ.ಕೀ), ಗುರುಕೀರತ್ ಮನ್​ ಸಿಂಗ್, ಕ್ರಿಸ್ ಮೊರೀಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯಜುವೇಂದ್ರ ಚಾಹಲ್.

ಕೆಕೆಆರ್: ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೀ), ಇಯಾನ್ ಮಾರ್ಗನ್ (ನಾಯಕ), ಟಾಮ್ ಬಾಂಟನ್, ಪ್ಯಾಟ್ ಕಮ್ಮಿನ್ಸ್, ಕುಲ್ದೀಪ್ ಯಾದವ್, ವರಣ್ ಚಕ್ರವರ್ತಿ, ಲಾಕಿ ಫರ್ಗೂಸನ್, ಪ್ರಸಿದ್ಧ್ ಕೃಷ್ಣ





ಆರ್​ಸಿಬಿ ಈ ಪಂದ್ಯ ಗೆದ್ದುವನ್ನು ಪ್ಲೇ ಆಫ್ ಹಂತವನ್ನು ಸನಿಹಗೊಳಿಸುವ ಅಂದಾಜಿನಲ್ಲಿದ್ದರೆ, ಇತ್ತ ಕೆಕೆಆರ್​ ಪಾಲಿಗೆ ಈ ಮ್ಯಾಚ್ ಮಹತ್ವ ಪಡೆದಿದೆ.

ಆರ್‌ಸಿಬಿ ಇದುವರೆಗೂ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ. ಒಟ್ಟು 12 ಅಂಕಗಳೊಂದಿಗೆ ಐಪಿಎಲ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಕೋಲ್ಕತ್ತಾ ಆಡಿರುವ 9 ಪಂದ್ಯಗಳಿಂದ 5ರಲ್ಲಿ ಗೆಲುವು ಪಡೆದು ನಾಲ್ಕನೇ ಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಬೆಂಗಳೂರು ಫ್ರಾಂಚೈಸಿ, ರಾಜಸ್ಥಾನ್‌ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಗೆಲುವು ಸಾಧಿಸಿತ್ತು. ಕೇವಲ 22 ಎಸೆತಗಳಲ್ಲಿ 55 ರನ್‌ಗಳನ್ನು ಸಿಡಿಸಿದ್ದ ಎಬಿ ಡಿವಿಲಿಯರ್ಸ್ ಆರ್‌ಸಿಬಿ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ನೈಟ್‌ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಸೂಪರ್‌ ಓವರ್‌ನಲ್ಲಿ ರೋಚಕ ಗೆಲುವು ಸಾಧಿಸಿತ್ತು. ಲಾಕಿ ಫರ್ಗೂಸನ್‌ ಕೋಲ್ಕತಾ ಪರ ಅದ್ಭುತ ಬೌಲಿಂಗ್‌ ಪ್ರದರ್ಶನ ತೋರಿದ್ದರು.

ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ ಉಭಯ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೋಲ್ಕತ್ತಾ ನೈಟ್ ರೈಡರ್ಸ್​​ ತಂಡ 15ರಲ್ಲಿ ಗೆಲುವು ದಾಖಲಿಸಿದ್ದರೆ, ರಾಯಲ್ ಚಾಲೆಂಜರ್ಸ್​ ಬೆಂಗಳೂರು‌ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ.
Published by: Vinay Bhat
First published: October 21, 2020, 7:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading