IPL

  • associate partner

IPL 2020: ಮಿಂಚಿದ ಜಸ್ಪ್ರೀತ್​ ಬೂಮ್ರಾ; ಶೀಘ್ರವೇ ಮುಂಬೈ ಬೌಲರ್​ ಕೈ ಸೇರಲಿದೆಯಾ ಪರ್ಪಲ್​ ಕ್ಯಾಪ್?​

ಐಪಿಎಲ್​ ಎಂದಮೇಲೆ ಸಿಕ್ಸ್​​ನ ಸುರಿಮಳೆ ಸುರಿಯೋದು ಕಾಮನ್​. ಈ ರೀತಿ ಸಿಕ್ಸ್ ಸಿಡಿಸಿದವರ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್​ ಮೊದಲಿದ್ದಾರೆ. 12  ಪಂದ್ಯಗಳಲ್ಲಿ ಅವರು ಬರೋಬ್ಬರಿ 23 ಸಿಕ್ಸ್​ ಸಿಡಿಸಿದ್ದಾರೆ.

news18-kannada
Updated:October 29, 2020, 9:42 AM IST
IPL 2020: ಮಿಂಚಿದ ಜಸ್ಪ್ರೀತ್​ ಬೂಮ್ರಾ; ಶೀಘ್ರವೇ ಮುಂಬೈ ಬೌಲರ್​ ಕೈ ಸೇರಲಿದೆಯಾ ಪರ್ಪಲ್​ ಕ್ಯಾಪ್?​
ಜಸ್ಪ್ರೀತ್​ ಬೂಮ್ರಾ
  • Share this:
ಬುಧವಾರ ನಡೆದ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್​ ಗೆದ್ದು ಬೀಗಿದೆ. ಈ ಮೂಲಕ 16 ಅಂಕ ಪಡೆದು ಮುಂಬೈ ಇಂಡಿಯನ್ಸ್​ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಸತತ ಎರಡನೇ ಸೋಲು ಕಂಡಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಸೋತ ಹೊರತಾಗಿಯೂ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ. ನಿನ್ನೆಯ ಪಂದ್ಯದಲ್ಲಿ ಮುಂಬೈ ಆಟಗಾರ ಜಸ್ಪ್ರೀತ್​ ಬೂಮ್ರಾ 3 ವಿಕೆಟ್​ ಪಡೆದಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ 20 ವಿಕೆಟ್​ ಗಳಿಸಿಕೊಂಡಿದ್ದಾರೆ. 23 ವಿಕೆಟ್​ ಪಡೆಯುವ ಮೂಲಕ ಪರ್ಪಲ್​ ಕ್ಯಾಪ್​ ಧರಿಸಿಕೊಂಡಿರುವ ರಬಾಡ ಅವರನ್ನು ಬೂಮ್ರಾ ಶೀಘ್ರವೇ ಹಿಂದಿಕ್ಕಲಿದ್ದಾರೆ ಎನ್ನಲಾಗುತ್ತಿದೆ. 

ಅತಿ ಹೆಚ್ಚು ರನ್​ ಹೊಡೆಯುವವರಿಗೆ ನೀಡುವ ಆರೆಂಜ್​ ಕ್ಯಾಪ್ ಕಿಂಗ್ಸ್​ ಇಲವೆನ್ ಪಂಜಾಬ್​ ತಂಡದ ಆಟಗಾರ, ಕನ್ನಡಿಗ ಕೆಎಲ್​ ರಾಹುಲ್​​ ಬಳಿ ಇದೆ. 11 ಪಂದ್ಯಗಳಲ್ಲಿ ಅವರು 595 ರನ್​ ಕಲೆ ಹಾಕಿದ್ದಾರೆ. ಈ ಮೂಲಕ ಅತಿ ಹೆಚ್ಚು ರನ್​ ಕಲೆ ಹಾಕುವ ಮೂಲಕ ಆರೇಂಜ್​ ಕ್ಯಾಪ್​ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ.

ORANGE CAP:

ಇನ್ನು ಅತಿ ಹೆಚ್ಚು ವಿಕೆಟ್​ ತೆಗೆದವರಿಗೆ ನೀಡುವ ಪರ್ಪಲ್ ಕ್ಯಾಪ್​ ಈ ಬಾರಿ ಡೆಲ್ಲಿ ಬೌಲರ್​ ರಬಾಡ ಬಳಿ ಇದೆ. 23 ವಿಕೆಟ್​ ಕೀಳುವ ಮೂಲಕ ಅವರು ಪರ್ಪಲ್​​ ಕ್ಯಾಪ್ ಹಾಕಿಕೊಂಡಿದ್ದಾರೆ.

ORANGE CAP:

ಐಪಿಎಲ್​ ಎಂದಮೇಲೆ ಸಿಕ್ಸ್​​ನ ಸುರಿಮಳೆ ಸುರಿಯೋದು ಕಾಮನ್​. ಈ ರೀತಿ ಸಿಕ್ಸ್ ಸಿಡಿಸಿದವರ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್​ ಮೊದಲಿದ್ದಾರೆ. 12  ಪಂದ್ಯಗಳಲ್ಲಿ ಅವರು ಬರೋಬ್ಬರಿ 23 ಸಿಕ್ಸ್​ ಸಿಡಿಸಿದ್ದಾರೆ.

MOST SIXES: ಮುಂಬೈ ಇಂಡಿಯನ್ಸ್​ ಆಡಿದ 12 ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದು ನಾಲ್ಕರಲ್ಲಿ ಸೋತಿದೆ. ಈ ಮೂಲಕ 14 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೊದಲಿದೆ. ಆರ್​ಸಿಬಿ ಆಡಿದ 12 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಐದರಲ್ಲಿ ಸೋಲು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್​ ಆಡಿದ 12 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಐದರಲ್ಲಿ ಸೋಲು ಕಂಡು ಮೂರನೇ ಸ್ಥಾನದಲ್ಲಿದೆ.

POINTS TABLE:

ಸತತ ಐದು ಗೆಲುವು ದಾಖಲಿಸುವ ಮೂಲಕ ಪಂಜಾಬ್​ ನಾಲ್ಕನೇ ಸ್ಥಾನಕ್ಕೇರಿದೆ. ಒಂದೊಮ್ಮೆ ಮುಂದಿನ ಎರಡೂ ಪಂದ್ಯ ಗೆದ್ದರೆ ಪಂಜಾಬ್​ ಪ್ಲೇಆಫ್​ಗೆ ಏರಲಿದೆ. ಐದನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಇದೆ. ಆರನೇ ಸ್ಥಾನದಲ್ಲಿ ಹೈದರಾಬಾದ್​​​​​, ಏಳನೇ ಸ್ಥಾನದಲ್ಲಿ ರಾಜಸ್ಥಾನ್​​​​ ಹಾಗೂ ಕೊನೆಯ ಸ್ಥಾನದಲ್ಲಿ ಚೆನ್ನೈ ಇದೆ.
Published by: Rajesh Duggumane
First published: October 29, 2020, 9:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading