IPL

  • associate partner

IPL point Table: ಪ್ಲೇಆಫ್​ಗೆ ಸ್ಥಾನ ಖಚಿತಪಡಿಸಿಕೊಂಡ ಮುಂಬೈ; ಎರಡನೇ ಸ್ಥಾನದಲ್ಲೇ ಮುಂದುವರಿದ ಆರ್​ಸಿಬಿ

ಮುಂಬೈ ಇಂಡಿಯನ್ಸ್​ ಆಡಿದ 12 ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದು ನಾಲ್ಕರಲ್ಲಿ ಸೋತಿದೆ. ಈ ಮೂಲಕ 14 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೊದಲಿದೆ. ಆರ್​ಸಿಬಿ ಆಡಿದ 12 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಐದರಲ್ಲಿ ಸೋಲು ಕಂಡಿದೆ.

news18-kannada
Updated:October 29, 2020, 9:27 AM IST
IPL point Table: ಪ್ಲೇಆಫ್​ಗೆ ಸ್ಥಾನ ಖಚಿತಪಡಿಸಿಕೊಂಡ ಮುಂಬೈ; ಎರಡನೇ ಸ್ಥಾನದಲ್ಲೇ ಮುಂದುವರಿದ ಆರ್​ಸಿಬಿ
MI vs RCB Live Score Updates
  • Share this:
ಬುಧವಾರ ನಡೆದ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್​ ಗೆದ್ದು ಬೀಗಿದೆ. ಈ ಮೂಲಕ 16 ಅಂಕ ಪಡೆದು ಮುಂಬೈ ಇಂಡಿಯನ್ಸ್​ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಸತತ ಎರಡನೇ ಸೋಲು ಕಂಡಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಸೋತ ಹೊರತಾಗಿಯೂ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.

ಮುಂಬೈ ಇಂಡಿಯನ್ಸ್​ ಆಡಿದ 12 ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದು ನಾಲ್ಕರಲ್ಲಿ ಸೋತಿದೆ. ಈ ಮೂಲಕ 14 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೊದಲಿದೆ. ಆರ್​ಸಿಬಿ ಆಡಿದ 12 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಐದರಲ್ಲಿ ಸೋಲು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್​ ಆಡಿದ 12 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಐದರಲ್ಲಿ ಸೋಲು ಕಂಡು ಮೂರನೇ ಸ್ಥಾನದಲ್ಲಿದೆ.

ಸತತ ಐದು ಗೆಲುವು ದಾಖಲಿಸುವ ಮೂಲಕ ಪಂಜಾಬ್​ ನಾಲ್ಕನೇ ಸ್ಥಾನಕ್ಕೇರಿದೆ. ಒಂದೊಮ್ಮೆ ಮುಂದಿನ ಎರಡೂ ಪಂದ್ಯ ಗೆದ್ದರೆ ಪಂಜಾಬ್​ ಪ್ಲೇಆಫ್​ಗೆ ಏರಲಿದೆ. ಐದನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಇದೆ. ಆರನೇ ಸ್ಥಾನದಲ್ಲಿ ಹೈದರಾಬಾದ್​​​​​, ಏಳನೇ ಸ್ಥಾನದಲ್ಲಿ ರಾಜಸ್ಥಾನ್​​​​ ಹಾಗೂ ಕೊನೆಯ ಸ್ಥಾನದಲ್ಲಿ ಚೆನ್ನೈ ಇದೆ.

POINTS TABLE:


ಅತಿ ಹೆಚ್ಚು ರನ್​ ಹೊಡೆದವರಿಗೆ ನೀಡುವ ಆರೆಂಜ್​ ಕ್ಯಾಪ್​ ಕಿಂಗ್ಸ್​ ಇಲವೆನ್​ ಪಂಜಾಬ್​ ತಂಡದ ನಾಯಕ ಕೆಎಲ್​ ರಾಹುಲ್​ ಬಳಿ ಇದೆ. 10 ಪಂದ್ಯಗಳಿಂದ ಅವರು 595 ರನ್​ ಕಲೆ ಹಾಕಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ಬೌಲರ್​ ರಬಾಡ 23 ವಿಕೆಟ್​ ತೆಗೆಯುವ ಮೂಲಕ ಈ ಮೂಲಕ ಪರ್ಪಲ್​​ ಕ್ಯಾಪ್ ಹಾಕಿಕೊಂಡಿದ್ದಾರೆ.
Published by: Rajesh Duggumane
First published: October 29, 2020, 9:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading