news18-kannada Updated:April 13, 2021, 5:26 PM IST
KKR vs MI
ಇಂದು ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ನ 5ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ. ಕೆಕೆಆರ್ ತಂಡವು ಭಾನುವಾರ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಅನ್ನು 10 ರನ್‌ಗಳಿಂದ ಸೋಲಿಸಿ 14ನೇ ಸೀಸನ್ ಆರಂಭಿಸಿದರೆ, ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ವಿರುದ್ದ ಮುಗ್ಗರಿಸುವ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹೊಸ ಆವೃತ್ತಿಯನ್ನು ಸೋಲಿನೊಂದಿಗೆ ಶುರು ಮಾಡಿಕೊಂಡಿದೆ.
ಚೆನ್ನೈನ ಚಿದಂಬರಂ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಮುಂಬೈ 2 ವಿಕೆಟ್ಗಳಿಂದ ಸೋಲನುಭವಿಸಿತು. ಇದಾಗ್ಯೂ ಮುಂಬೈ ಸಾಂಘಿಕ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಕಳೆದ ಪಂದ್ಯದಲ್ಲಿನ ಸಣ್ಣ ಪುಟ್ಟ ತಪ್ಪುಗಳಿಂದ ಪಾಠ ಕಲಿತು ಮುಂಬೈ ಇಂದು ಕಣಕ್ಕಿಳಿಯಲಿದೆ. ಅದೇ ಸಮಯದಲ್ಲಿ, ಇಯಾನ್ ಮೋರ್ಗನ್ ನಾಯಕತ್ವದ ಕೆಕೆಆರ್ ತಂಡ ಎಸ್ಆರ್ಹೆಚ್ ವಿರುದ್ದ 10 ರನ್ಗಳ ರೋಚಕ ಜಯ ಸಾಧಿಸಿ ಬೀಗುತ್ತಿದೆ.
ಮೊದಲ ಪಂದ್ಯದಲ್ಲೇ ನಿತೀಶ್ ರಾಣಾ ಮತ್ತು ರಾಹುಲ್ ತ್ರಿಪಾಠಿ ಅಬ್ಬರಿಸಿರುವುದು ಕೆಕೆಆರ್ ಪಾಲಿಗೆ ಶುಭ ಸೂಚನೆ ಎನ್ನಬಹುದು. ಇದಾಗ್ಯೂ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಗೊಳಿಸಬೇಕಾದ ಅನಿವಾರ್ಯತೆ ಕೆಕೆಆರ್ಗೆ ಇದೆ. ಮೊದಲ ಪಂದ್ಯದ ಗೆಲುವಿನ ಕಾರಣ ಇಂದಿನ ಪಂದ್ಯಕ್ಕಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಕಂಡು ಬರಬಹುದು. ಆರ್ಸಿಬಿ ವಿರುದ್ದ 4 ಓವರ್‌ಗಳಲ್ಲಿ 43 ರನ್ ನೀಡಿದ್ದ ರಾಹುಲ್ ಚಹರ್ ಬದಲು ಇಂದು ಪಿಯೂಷ್ ಚಾವ್ಲಾ ಸ್ಥಾನ ಪಡೆಯುವ ಸಾಧ್ಯತೆಯಿದೆ. ಇದರ ಹೊರತಾಗಿ ಉಭಯ ತಂಡಗಳಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ:-
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ರಿಸ್ ಲಿನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸನ್, ಪಿಯೂಷ್ ಚಾವ್ಲಾ, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.
ಕೋಲ್ಕತಾ ನೈಟ್ ರೈಡರ್ಸ್: ನಿತೀಶ್ ರಾಣಾ, ಶುಭ್ಮನ್ ಗಿಲ್, ಇಯಾನ್ ಮೋರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸ್ಸೆಲ್, ಶಕೀಬ್ ಅಲ್ ಹಸನ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ ಕೃಷ್ಣ ಮತ್ತು ವರುಣ್ ಚಕ್ರವರ್ತಿ.
Published by:
zahir
First published:
April 13, 2021, 5:26 PM IST