HOME » NEWS » National-international » AMIT SHAH TO VISIT BENGAL ON NOVEMBER 5 JP NADDAS VISIT CANCELLED MAK

ಚುನಾವಣಾ ಕಾರ್ಯತಂತ್ರ; ನವೆಂಬರ್​ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ

2021 ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಸಾಂಸ್ಥಿಕ ವಿಷಯಗಳ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಅಮಿತ್ ಶಾ ಅವರು ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ಶುಕ್ರವಾರ ರಾತ್ರಿ ತಿಳಿಸಿದೆ.

news18-kannada
Updated:October 31, 2020, 12:56 PM IST
ಚುನಾವಣಾ ಕಾರ್ಯತಂತ್ರ; ನವೆಂಬರ್​ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ
ಅಮಿತ್​ ಶಾ.
  • Share this:
ನವ ದೆಹಲಿ (ಅಕ್ಟೋಬರ್​​ 31); ಬಿಹಾರ ಚುನಾವಣೆ ಬೆನ್ನಿಗೆ 2021 ರ ಆರಂಭದಲ್ಲೇ ಪಶ್ಚಿಮ ಬಂಗಾಳದ ಚುನಾವಣೆಯೂ ಎದುರಾಗಲಿದೆ. ಹೀಗಾಗಿ ಬಿಜೆಪಿ ಬಂಗಾಳದಲ್ಲಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇಬೇಕು ಎಂದು ಪಣ ತೊಟ್ಟಿದೆ. ಇದೇ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಪಕ್ಷವನ್ನು ಬಲಗೊಳಿಸುತ್ತಿದೆ. ಅಲ್ಲದೆ, ಹಲವಾರು ಹೋರಾಟಗಳು ಮತ್ತು ರ‍್ಯಾಲಿಯನ್ನು ಆಯೋಜಿಸುತ್ತಿದೆ. ಕಳೆದ ತಿಂಗಳು ಸಂಸದ ತೇಜಸ್ವಿ ಸೂರ್ಯ ಸಹ ಬಂಗಾಳದಲ್ಲಿ ಒಂದು ರ‍್ಯಾಲಿಯನ್ನು ಆಯೋಜಿಸಿ ಗಮನಸೆಳೆದಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸಕ್ಕೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಅಸಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಬಂಗಾಳದ ಪ್ರವಾಸಕ್ಕೆ ತೆರಳಬೇಕಿತ್ತು. ಆದರೆ, ಅವರ ಪ್ರವಾಸವನ್ನು ಮೊಟಕುಗೊಳಿಸಿ ಇದೀಗ ಅಮಿತ್ ಶಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.

2021 ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಸಾಂಸ್ಥಿಕ ವಿಷಯಗಳ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಅಮಿತ್ ಶಾ ಅವರು ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ಶುಕ್ರವಾರ ರಾತ್ರಿ ತಿಳಿಸಿದೆ.

ತಡರಾತ್ರಿಯ ಬೆಳವಣಿಗೆಯೊಂದರಲ್ಲಿ, ಪಶ್ಚಿಮ ಬಂಗಾಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಅವರು ನವೆಂಬರ್ 6 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿಗದಿತ ಭೇಟಿ ರದ್ದುಗೊಂಡಿದೆ. ಆದರೆ, ಅಮಿತ್ ಶಾ ಅವರು ನವೆಂಬರ್ 5 ರಿಂದ ಎರಡು ದಿನಗಳ ಭೇಟಿಗೆ ಪಶ್ಚಿಮ ಬಂಗಾಳಕ್ಕೆ ಆಗಮಿಸಲು ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

"ಅವರು ನವೆಂಬರ್ 5 ರಂದು ಮದಿನಿಪುರ ಸಾಂಸ್ಥಿಕ ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಯಿದೆ ಮತ್ತು ಮರುದಿನ ರಾಜ್ಯದ ಪಕ್ಷದ ಮುಖಂಡರನ್ನು ಭೇಟಿಯಾಗಲಿದ್ದಾರೆ. ಆದರೆ, ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ” ಎಂದು ಸಯಂತನ್ ಬಸು ತಿಳಿಸಿದ್ದಾರೆ.

ಇದನ್ನೂ ಓದಿ : CoronaVirus Update: ಕೊರೋನಾ ಸಾವಿನ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಭಾರತ; 81 ಲಕ್ಷದ ಗಡಿ ದಾಟಿದ ಸಕ್ರೀಯ ಸೋಂಕಿತರ ಸಂಖ್ಯೆ

ಈ ಕುರಿತು ಮಾತನಾಡಿರುವ ಬಂಗಾಳದ ಬಿಜೆಪಿ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿ, “ರಾಜ್ಯದಲ್ಲಿ ಬಿಜೆಪಿಯ ಸಂಘಟನೆಯ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಅಮಿತ್ ಶಾ ಅವರು ಸಂಘಟನೆಯ ವಿವಿಧ ಅಂಶಗಳನ್ನು ಪರಿಶೀಲಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ. ಈ ಚರ್ಚೆಯ ನಂತರ ಪತ್ರಿಕಾಗೋಷ್ಠಿಯನ್ನೂ ನಡೆಸುವ ಸಾಧ್ಯತೆ ಇದೆ” ಎಂದು ಮಾಹಿತಿ ನೀಡಿದ್ದಾರೆ.
Youtube Video
ಭೇಟಿಯ ವೇಳೆ ಅಮಿತ್ ಶಾ, ಪಕ್ಷದ ಹಿರಿಯ ನಾಯಕರಾದ ಕೈಲಾಶ್ ವಿಜಯವರ್ಗಿಯಾ, ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರೊಂದಿಗೆ ಬೂತ್ ಮತ್ತು ಜಿಲ್ಲಾ ಮಟ್ಟದ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿವೆ. ಈ ಹಿಂದೆ ಅಮಿತ್ ಶಾ ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಬಂಗಾಳದಲ್ಲಿ ವರ್ಚುವಲ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ, ಇದು ಅಷ್ಟಾಗಿ ಪರಿಣಾಮಕಾರಿಯಾಗಿರಲಿಲ್ಲ.
Published by: MAshok Kumar
First published: October 31, 2020, 12:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories