Maharashtra: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ಕುಸಿತ; 10 ಮಂದಿ ಸಾವು, 25 ಜನ ಸಿಲುಕಿರುವ ಸಾಧ್ಯತೆ

Bhiwandi Building Collapse: ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಮಹಡಿ ಕಟ್ಟಡ ಕುಸಿದುಬಿದ್ದಿದೆ. ಈಗಾಗಲೇ ಮಗು ಸೇರಿದಂತೆ 20 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಸುಮಾರು 25 ಮಂದಿ ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆಗಳಿವೆ

Sushma Chakre | news18-kannada
Updated:September 21, 2020, 9:20 AM IST
Maharashtra: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ಕುಸಿತ; 10 ಮಂದಿ ಸಾವು, 25 ಜನ ಸಿಲುಕಿರುವ ಸಾಧ್ಯತೆ
ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ
  • Share this:
ಮುಂಬೈ (ಸೆ. 21): ಮಹಾರಾಷ್ಟ್ರ ರಾಜ್ಯದ ಭಿವಾಂಡಿಯಲ್ಲಿ ಇಂದು ಮುಂಜಾನೆ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇದರಿಂದ ಕಟ್ಟಡದೊಳಗಿದ್ದ 10 ಜನರು ಸಾವನ್ನಪ್ಪಿದ್ದು, ಸಾಕಷ್ಟು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎನ್​ಡಿಆರ್​ಎಫ್​ ತಂಡ ಸ್ಥಳಕ್ಕೆ ಆಗಮಿಸಿದೆ. ಇಂದು ಮುಂಜಾನೆ 3.40ರ ವೇಳೆಗೆ ಈ ದುರಂತ ಸಂಭವಿಸಿದೆ. ಬೆಳಗ್ಗೆಯಿಂದ ಇದುವರೆಗೂ 20 ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ಎನ್​ಡಿಆರ್​ಎಫ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ರಾಜಧಾನಿ ಮುಂಬೈ ಬಳಿ ಇರುವ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಮಹಡಿ ಕಟ್ಟಡ ಕುಸಿದುಬಿದ್ದಿದೆ. ಈಗಾಗಲೇ ಮಗು ಸೇರಿದಂತೆ 20 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಸುಮಾರು 25 ಮಂದಿ ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.



30 ವರ್ಷ ಹಳೆಯದಾಗಿರುವ ಈ ಕಟ್ಟಡವನ್ನು ಇತ್ತೀಚೆಗಷ್ಟೆ ರಿಪೇರಿ ಮಾಡುವಂತೆ ಸೂಚಿಸಲಾಗಿತ್ತು. ಆದರೂ ಕಟ್ಟಡದ ಮಾಲೀಕರು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಈ ಕಟ್ಟಡದ ಮಾಲೀಕರಿಗೆ ಈಗಾಗಲೇ ಮುನ್ಸಿಪಲ್ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿತ್ತು. ಅಲ್ಲದೆ, ಈ ಕಟ್ಟಡವನ್ನು ತೆರವುಗೊಳಿಸುವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ...
Published by: Sushma Chakre
First published: September 21, 2020, 8:37 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading