ದೆಹಲಿಯಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಕೊಲೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಘಟನೆ ಬಳಿಕ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಸತೀಶ್​ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಪೊಲೀಸರಿಗೆ ಮಾಹಿತಿ ತಿಳಿದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

news18-kannada
Updated:October 30, 2020, 11:22 AM IST
ದೆಹಲಿಯಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಕೊಲೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಅ.30): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನೇ ದಿನೇ ಕೊಲೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ನೋಡ ನೋಡುತ್ತಿದ್ದಂತೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆಗೆ ಮತ್ತೆ ದೆಹಲಿ ಸಾಕ್ಷಿಯಾಗಿದೆ. ಈ ಕ್ರೂರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಕ್ಷಿಣ ದೆಹಲಿಯ ಟಿಗ್ರಿ ಪ್ರದೇಶದಲ್ಲಿ ಯುವಕನೊಬ್ಬ ವ್ಯಕ್ತಿಯನ್ನು ಹೊಡೆದು, ಎತ್ತಿ ಬಿಸಾಡಿದ್ದಾನೆ. ಬಳಿಕ ಚಾಕುವಿನಿಂದ ಅನೇಕ ಬಾರಿ ಚುಚ್ಚಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ದೆಹಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. 21 ವರ್ಷದ ಸತೀಶ್ ಕೊಲೆಯಾದ ವ್ಯಕ್ತಿ. ಈತ ಬುಧವಾರ ರಾತ್ರಿ 10.30ಕ್ಕೆ ಹಾಲು ಖರೀದಿಸಿ ಮನೆಗೆ ತೆರಳುತ್ತಿದ್ದ. ಈ ವೇಳೆ ದುಷ್ಕರ್ಮಿಗಳು ಸತೀಶ್​​ನನ್ನು ಅಡ್ಡ ಹಾಕಿ ಹಲ್ಲೆ ಮಾಡಿದ್ದಾರೆ.

ಆರೋಪಿ ವಿಕ್ಕಿ ಎಂಬಾತನನ್ನು ಪೊಲೀಸರು ಸೆರೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿಕ್ಕಿ ತನ್ನ ಗೆಳೆಯರಾದ ಪಿಯೂಶ್ ಮತ್ತು ವಿವೇಕ್ ಜೊತೆ ಸೇರಿ ಸತೀಶ್​​ನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ.

ಗುಂಡ್ಲುಪೇಟೆ ಬಳಿ ತೋಟದ ಮನೆಗೆ ನುಗ್ಗಿ ದರೋಡೆ; ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ

ಈ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸತೀಶ್​ ನಡೆದು ಹೋಗುತ್ತಿದ್ದ ವೇಳೆ, ಆತನನ್ನು ಮತ್ತೊಬ್ಬ ಹಿಂಬಾಲಿಸಿದ್ದಾನೆ. ಬಳಿಕ ಮತ್ತಿಬ್ಬರು ಆತನ ಜೊತೆಗೆ ಸೇರಿಕೊಂಡಿದ್ದಾರೆ. ಬಳಿಕ ಸತೀಶ್​​ನನ್ನು ಅಡ್ಡಹಾಕಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ್ದಾರೆ. ಬಳಿಕ ಚಾಕುವಿನಿಂದ ಹಲವು ಬಾರಿ ಚುಚ್ಚಿ ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಸತೀಶ್​ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಪೊಲೀಸರಿಗೆ ಮಾಹಿತಿ ತಿಳಿದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

ಸದ್ಯ ಪೊಲೀಸರು ಆರೋಪಿ ವಿಕ್ಕಿ ಎಂಬಾತನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಅರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
Published by: Latha CG
First published: October 30, 2020, 11:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading