HOME » NEWS » National-international » GOLD PRICE TODAY GOLD RATE WITNESS MASSIVE HIKE SILVER PRICE RISES GOLD PRICE ON MARCH 25 SCT

Gold Price Today: ಕಡಿಮೆಯಾಗಿದ್ದ ಚಿನ್ನದ ಬೆಲೆ ಮತ್ತೆ ಭಾರೀ ಏರಿಕೆ; ಬೆಳ್ಳಿ ಬೆಲೆಯೂ ಹೆಚ್ಚಳ

Gold Silver Price: ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,690 ರೂ. ಇದ್ದುದು ಇಂದು 45,820 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ನಿನ್ನೆ 65,300 ರೂ. ಇದ್ದ ಬೆಳ್ಳಿ ಬೆಲೆ ಇಂದು 65,700ಕ್ಕೆ ಏರಿಕೆಯಾಗಿದೆ.

news18-kannada
Updated:March 25, 2021, 10:51 AM IST
Gold Price Today: ಕಡಿಮೆಯಾಗಿದ್ದ ಚಿನ್ನದ ಬೆಲೆ ಮತ್ತೆ ಭಾರೀ ಏರಿಕೆ; ಬೆಳ್ಳಿ ಬೆಲೆಯೂ ಹೆಚ್ಚಳ
ಚಿನ್ನ
  • Share this:
Gold Rate Today | ಭಾರತದಲ್ಲಿ ನಿನ್ನೆ ಕಡಿಮೆಯಿದ್ದ ಚಿನ್ನದ ಬೆಲೆ ಮತ್ತೆ ಹೆಚ್ಚಾಗಿದೆ. ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,690 ರೂ. ಇದ್ದುದು ಇಂದು 45,820 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 41,890 ರೂ. ಇದ್ದುದು ಇಂದು 42,000 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ನಿನ್ನೆ 65,300 ರೂ. ಇದ್ದ ಬೆಳ್ಳಿ ಬೆಲೆ ಇಂದು 65,700ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 42,990 ರೂ. ಇದ್ದುದು 44,030 ರೂ.ಗೆ ಹೆಚ್ಚಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 43,990 ರೂ. ಇದ್ದುದು ಇಂದು 45,030 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,820 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 42,000 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 47,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಭಾರೀ ಇಳಿಕೆಯಾಗಿದ್ದು, ನಿನ್ನೆ 65,300 ರೂ. ಇದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 65,700 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 65,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
Youtube Video

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
Published by: Sushma Chakre
First published: March 25, 2021, 10:51 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories