HOME » NEWS » National-international » GUJARAT FIRE ACCIDENT 16 COVID 19 PATIENTS CRITICAL AFTER FIRE ACCIDENT IN GUJARAT SURAT HOSPITAL ICU SCT

Gujarat Fire Accident: ಗುಜರಾತ್​​ನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 16 ಕೊರೋನಾ ರೋಗಿಗಳ ಸ್ಥಿತಿ ಗಂಭೀರ

Surat Fire Accident: ಗುಜರಾತ್​ನ ಸೂರತ್​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಐಸಿಯುನಲ್ಲಿದ್ದ16 ಕೊರೋನಾ ರೋಗಿಗಳ ಪರಿಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Sushma Chakre | news18-kannada
Updated:April 26, 2021, 10:34 AM IST
Gujarat Fire Accident: ಗುಜರಾತ್​​ನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 16 ಕೊರೋನಾ ರೋಗಿಗಳ ಸ್ಥಿತಿ ಗಂಭೀರ
ಬೆಂಕಿಯಿಂದ ಕೊರೋನಾ ರೋಗಿಗಳ ರಕ್ಷಣೆ
  • Share this:
ಸೂರತ್ (ಏ. 26): 3 ದಿನಗಳ ಹಿಂದಷ್ಟೇ ಮಹಾರಾಷ್ಟ್ರದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 13 ಕೊರೋನಾ ರೋಗಿಗಳು ಸಜೀವ ದಹನವಾಗಿದ್ದರು. ಅದರ ಬೆನ್ನಲ್ಲೇ ಗುಜರಾತ್​ನಲ್ಲಿ ಕೂಡ ಅದೇ ರೀತಿಯ ಘಟನೆ ನಿನ್ನೆ ರಾತ್ರಿ ನಡೆದಿದೆ. ಗುಜರಾತ್​ನ ಸೂರತ್​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ 16 ಕೊರೋನಾ ರೋಗಿಗಳ ಪರಿಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂರತ್​ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅನಾಹುತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಸೂರತ್​ನ ಆಯುಷ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ 11.45ರ ಸುಮಾರಿಗೆ ಬೆಂಕಿ ಅವಘಡ ನಡೆದಿದ್ದು, ತಕ್ಷಣ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಇಲ್ಲಿನ ಐಸಿಯುನಲ್ಲಿ 16 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಗಂಭೀರವಾಗಿದೆ.

ನಿನ್ನೆ ರಾತ್ರಿ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಐಸಿಯುನಲ್ಲಿದ್ದ ಕೊರೋನಾ ರೋಗಿಗಳನ್ನು ರಕ್ಷಿಸಿದ್ದಾರೆ. ಐಸಿಯುನಲ್ಲಿ ಎಸಿ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



ಏ. 23ರಂದು ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿನ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ 13 ರೋಗಿಗಳು ಸಾವನ್ನಪ್ಪಿದ್ದರು. ಇನ್ನೂ ಅನೇಕ ರೋಗಿಗಳಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡಿದ್ದರಿಂದ ಐಸಿಯುನಲ್ಲಿದ್ದ 13 ಕೊರೋನಾ ರೋಗಿಗಳು ಸಾವನ್ನಪ್ಪಿದ್ದರು.
Youtube Video

ವಾಸೈನ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಐಸಿಯುನಲ್ಲಿದ್ದ ಏರ್​ ಕಂಡೀಷನರ್​ (ಎಸಿ)ನಲ್ಲಿ ಶಾರ್ಟ್​ ಸರ್ಕ್ಯೂಟ್ ಉಂಟಾಗಿದ್ದರಿಂದ ಬೆಂಕಿ ಹೊತ್ತಿಕೊಂಡಿತ್ತು. ಐಸಿಯುನಲ್ಲಿ 17 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ 13 ರೋಗಿಗಳು ಸಾವನ್ನಪ್ಪಿದ್ದರು.
Published by: Sushma Chakre
First published: April 26, 2021, 10:34 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories