ರೈಲು ಪ್ರಯಾಣಿಕರೇ ಗಮನಿಸಿ; ಹಬ್ಬಗಳ ಪ್ರಯುಕ್ತ ಅ. 20ರಿಂದ 392 ವಿಶೇಷ ರೈಲು ಸಂಚಾರ

ದುರ್ಗಾ ಪೂಜೆ, ದಸರಾ, ದೀಪಾವಳಿ, ಸೇರಿದಂತೆ ವಿವಿಧ ಹಬ್ಬಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 20ರಿಂದ ನವೆಂಬರ್ 30ರವರೆಗೆ ವಿಶೇಷ ರೈಲುಗಳು ಸಂಚಾರ ಮಾಡಲಿವೆ.

Sushma Chakre | news18-kannada
Updated:October 14, 2020, 12:48 PM IST
ರೈಲು ಪ್ರಯಾಣಿಕರೇ ಗಮನಿಸಿ; ಹಬ್ಬಗಳ ಪ್ರಯುಕ್ತ ಅ. 20ರಿಂದ 392 ವಿಶೇಷ ರೈಲು ಸಂಚಾರ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಅ. 14): ಈ ತಿಂಗಳಿಂದ ಒಂದರ ಹಿಂದೊಂದರಂತೆ ಸಾಲಾಗಿ ಹಬ್ಬಗಳು ಇರುವುದರಿಂದ ಭಾರತೀಯ ರೈಲ್ವೆ ಇಲಾಖೆ ಅಕ್ಟೋಬರ್ 20ರಿಂದ ನವೆಂಬರ್ 30ರವರೆಗೆ 392 ವಿಶೇಷ ರೈಲುಗಳ ಸಂಚಾರವನ್ನು ಆರಂಭಿಸಲಿದೆ. ಈ ವಾರ ಆರಂಭವಾಗುವ ದಸರಾದಿಂದ ಮುಂದಿನ ತಿಂಗಳ ದೀಪಾವಳಿವರೆಗೂ ಸಾಕಷ್ಟು ಹಬ್ಬಗಳು, ಸರ್ಕಾರಿ ರಜೆಗಳು ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕೆಂದು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಕೊರೋನಾ ಹಿನ್ನೆಲೆಯಲ್ಲಿ ಹೆಚ್ಚಿನ ಜನದಟ್ಟಣೆಯನ್ನು ತಡೆಯುವ ಉದ್ದೇಶದಿಂದ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಅಕ್ಟೋಬರ್ 20ರಿಂದ ನವೆಂಬರ್ 30ರವರೆಗೆ 196 ಜೋಡಿ ರೈಲುಗಳು ದೇಶದ ವಿವಿಧ ರಾಜ್ಯಗಳಿಗೆ ಸಂಚಾರ ಮಾಡಲಿವೆ. ಲಾಕ್​ಡೌನ್ ಬಳಿಕ ರೈಲು ಸಂಚಾರವನ್ನು ಆರಂಭಿಸಲಾಗಿದ್ದು, ಈಗಾಗಲೇ ಸಂಚರಿಸುತ್ತಿರುವ ರೈಲುಗಳ ಜೊತೆಗೆ ವಿಶೇಷ ರೈಲುಗಳು ಹೆಚ್ಚುವರಿಯಾಗಿ ಸಂಚರಿಸಲಿವೆ.ಹಬ್ಬದ ಸಮಯದಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದು ಎನ್ನುವ ಕಾರಣಕ್ಕಾಗಿ ಹೆಚ್ಚುವರಿ ರೈಲು ಸಂಚಾರ ಆರಂಭಿಸಲಾಗುತ್ತಿದೆ.


ಕೊಲ್ಕತ್ತಾ, ಪಾಟ್ನಾ, ವಾರಣಾಸಿ, ಲಕ್ನೋ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ದುರ್ಗಾ ಪೂಜೆ, ದಸರಾ, ದೀಪಾವಳಿ, ಸೇರಿದಂತೆ ವಿವಿಧ ಹಬ್ಬಗಳ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ನಡೆಸಲಿವೆ. ನವೆಂಬರ್​ 30ರ ನಂತರ ವಿಶೇಷ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ವಿಶೇಷ ರೈಲುಗಳು ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಸಂಚಾರ ನಡೆಸಲಿವೆ. ಪ್ರಾದೇಶಿಕ ರೈಲ್ವೆ ಇಲಾಖೆಗಳು ಆಯಾ ಭಾಗದ ರೈಲಿನ ವೇಳಾಪಟ್ಟಿಯನ್ನು ಪ್ರಕಟಿಸಲಿವೆ ಎಂದು ರೈಲ್ವೆ‌ ಇಲಾಖೆ ತಿಳಿಸಿದೆ.

ಎಕ್ಸ್‌ಪ್ರೆಸ್ ರೈಲುಗಳ ಟಿಕೆಟ್ ದರಕ್ಕೆ ಹೋಲಿಸಿದರೆ ವಿಶೇಷ ರೈಲುಗಳ ದರವು ಶೇ. 10ರಿಂದ 30ರವರೆಗೂ ಹೆಚ್ಚಿರಲಿದೆ. ಐಆರ್​ಸಿಟಿಸಿ ಮತ್ತು ಪಿಆರ್​ಎಸ್​ ಟಿಕೆಟ್​ ಕೌಂಟರ್​ಗಳ ಮೂಲಕವೂ ವಿಶೇಷ ರೈಲುಗಳ ಟಿಕೆಟ್ ಬುಕ್ ಮಾಡಬಹುದು. ಪ್ರಯಾಣಿಕರು ಯಾವ ಬೋಗಿಯನ್ನು ಬುಕ್ ಮಾಡುತ್ತಾರೆ ಎಂಬುದರ ಆಧಾರದಲ್ಲಿ ದರ ನಿಗದಿಯಾಗಲಿದೆ.
Published by: Sushma Chakre
First published: October 14, 2020, 12:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading