HOME » NEWS » Sports » CRICKET INDIA VS AUSTRALIA 2ND ODI PLAYING11 PITCH REPORT LIVE SCORECARD AUSTRALIA 398 4 VB

India vs Australia 2nd ODI: ಮತ್ತೆ ಅಬ್ಬರಿಸಿ ಬೊಬ್ಬಿರಿದ ಆಸೀಸ್ ಬ್ಯಾಟ್ಸ್​ಮನ್ಸ್​: ಭಾರತಕ್ಕೆ 390 ರನ್ಸ್ ಟಾರ್ಗೆಟ್

ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್‌ ಲಾಬುಶೇನ್ ಮತ್ತೊಂದು ಅಮೋಘ ಇನ್ನಿಂಗ್ಸ್​ ಕಟ್ಟಿದರು. ಸ್ಮಿತ್ ತಮ್ಮ ಹಳೇಯ ಫಾರ್ಮ್​ ಮುಂದುವರೆಸಿ ಮನಮೋಹಕ ಹೊಡೆತಗಳ ಮೂಲಕ ಗಮನ ಸೆಳೆದರು. ಸತತ ಎರಡನೇ ಶತಕವನ್ನೂ ಪೂರೈಸಿದರು.

news18-kannada
Updated:November 29, 2020, 1:03 PM IST
India vs Australia 2nd ODI: ಮತ್ತೆ ಅಬ್ಬರಿಸಿ ಬೊಬ್ಬಿರಿದ ಆಸೀಸ್ ಬ್ಯಾಟ್ಸ್​ಮನ್ಸ್​: ಭಾರತಕ್ಕೆ 390 ರನ್ಸ್ ಟಾರ್ಗೆಟ್
Steve Smith
  • Share this:
ಸಿಡ್ನಿ (ನ. 29): ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್​​ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಸ್ಟೀವ್ ಸ್ಮಿತ್ ಅವರ ಅಮೋಘ ಶತಕದ ಜೊತೆ, ನಾಯಕ ಆ್ಯರೋನ್ ಫಿಂಚ್, ಡೇವಿಡ್ ವಾರ್ನರ್, ಮ್ಯಾಕ್ಸ್​ವೆಲ್ ಹಾಗೂ ಮಾರ್ನಸ್‌ ಲಾಬುಶೇನ್ ಅವರ ಅರ್ಧಶತಕದ ನೆರವಿನಿಂದ ಆಸೀಸ್ 50 ಓವರ್​ಗಳಲ್ಲಿ ಬರೋಬ್ಬರಿ 389 ರನ್ ಚಚ್ಚಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿತು. ಓಪನರ್​ಗಳಾದ ನಾಯಕ ಆ್ಯರೋನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಕಳೆದ ಪಂದ್ಯದಂತೆ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸಿದರು. ಬಿರುಸಿನ ಆಟ ಪ್ರದರ್ಶಿಸಿದ ಇಬ್ಬರೂ ಅರ್ಧಶತಕ ಸಿಡಿಸಿ  ಮಿಂಚಿದರು.

ಈ ಜೋಡಿ ಮೊದಲ ವಿಕೆಟ್​ಗೆ 142 ರನ್​ಗಳ ಜೊತೆಯಾಟ ಆಡಿತು. ಫಿಂಚ್ 69 ಎಸೆತಗಳಲ್ಲಿ 6 ಫೋರ್, 1 ಸಿಕ್ಸರ್ ಬಾರಿಸಿ 60 ರನ್ ಗಳಿಸಿ ಔಟ್ ಆದರೆ. ವಾರ್ನರ್ 77 ಎಸೆತಗಳಲ್ಲಿ 7 ಫೋರ್, 3 ಸಿಕ್ಸರ್ ಸಿಡಿಸಿ 83 ರನ್​ಗೆ ನಿರ್ಗಮಿಸಿದರು.

Babar Azam: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಕಾಮಕಾಂಡ ಬಯಲು; ಹಳೇ ಕತೆ ಬಿಚ್ಚಿಟ್ಟ ಮಾಜಿ ಪ್ರೇಯಸಿ

ಬಳಿಕ ಒಂದಾದ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್‌ ಲಾಬುಶೇನ್ ಮತ್ತೊಂದು ಅಮೋಘ ಇನ್ನಿಂಗ್ಸ್​ ಕಟ್ಟಿದರು. ಸ್ಮಿತ್ ತಮ್ಮ ಹಳೇಯ ಫಾರ್ಮ್​ ಮುಂದುವರೆಸಿ ಮನಮೋಹಕ ಹೊಡೆತಗಳ ಮೂಲಕ ಗಮನ ಸೆಳೆದರು. ಸತತ ಎರಡನೇ ಶತಕವನ್ನೂ ಪೂರೈಸಿದರು.





ಭಾರತೀಯ ಬೌಲರ್​ಗಳ ಬೆವರಿಳಿಸಿದ ಸ್ಮಿತ್-ಮಾರ್ನಸ್ ಜೋಡಿ 136 ರನ್​ಗಳ ಕಾಣಿಕೆ ನೀಡಿದರು. ಸ್ಮಿತ್ 64 ಎಸೆತಗಳಲ್ಲಿ 14 ಬೌಂಡರಿ, 2 ಸಿಕ್ಸರ್ ಬಾರಿಸಿ 104 ರನ್ ಚಚ್ಚಿದರು.  ಬಳಿಕ ಅಂತಿಮ ಹಂತದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೂಡಿ ಸ್ಫೋಟಕ ಆಟವಾಡಿದ ಮಾರ್ನಸ್ ಅರ್ಧಶತಕ ಸಿಡಿಸಿ ತಂಡದ ಮೊತ್ತವನ್ನು 370ರ ಗಡಿ ದಾಟಿಸಿದರು. ಮಾರ್ನಸ್ 61 ಎಸೆತಗಳಲ್ಲಿ 5 ಬೌಂಡರಿ ಬಾರಿಸಿ 70 ರನ್ ಗಳಿಸಿದರೆ, ಮ್ಯಾಕ್ಸ್​ವೆಲ್ ಕೇವಲ 29 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಿಡಿಸಿ ಅಜೇಯ 63 ರನ್ ಚಚ್ಚಿದರು.

ಆಸ್ಟ್ರೇಲಿಯಾ 50 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 389 ರನ್ ಗಳಿಸಿತು. ಭಾರತ ಪರ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದರು.

ಆಸ್ಟ್ರೇಲಿಯ ತಂಡ: ಆ್ಯರೋನ್ ಫಿಂಚ್‌ (ನಾಯಕ), ಡೇವಿಡ್‌ ವಾರ್ನರ್‌, ಸ್ಟೀವ್ ಸ್ಮಿತ್‌, ಮಾರ್ನಸ್‌ ಲಾಬುಶೇನ್‌, ಗ್ಲೆನ್‌ ಮ್ಯಾಕ್ಸ್​ವೆಲ್‌, ಮೊಯ್​ಸೆಸ್ ಹೆನ್ರಿಕ್ಯೂ, ಅಲೆಕ್ಸ್‌ ಕ್ಯಾರಿ, ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹ್ಯಾಝಲ್‌ವುಡ್‌, ಆ್ಯಡಂ ಝಂಪ.

ಭಾರತ ತಂಡ: ಶಿಖರ್‌ ಧವನ್‌, ಮಾಯಾಂಕ್‌ ಅಗರ್ವಾಲ್‌, ವಿರಾಟ್‌ ಕೊಹ್ಲಿ (ನಾಯಕ), ಶ್ರೇಯಸ್‌ ಅಯ್ಯರ್‌, ಕೆ. ಎಲ್‌. ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ನವದೀಪ್‌ ಸೈನಿ, ಯಜುವೇಂದ್ರ ಚಹಾಲ್‌, ಮೊಹಮ್ಮದ್‌ ಶಮಿ, ಜಸ್​ಪ್ರೀತ್ ಬುಮ್ರಾ.
Published by: Vinay Bhat
First published: November 29, 2020, 1:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading