Bengaluru Rain: ಬೆಂಗಳೂರಿನಲ್ಲಿ ನಿಲ್ಲದ ಮಳೆ; ರಾಜಕಾಲುವೆ, ತಗ್ಗು ಪ್ರದೇಶದಲ್ಲಿ ಎಚ್ಚರ ವಹಿಸಲು ಸಿಎಂ ಯಡಿಯೂರಪ್ಪ ಸೂಚನೆ

Bengaluru Rain: ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಒಂದೇ ಸಮನೆ ಮಳೆ ಸುರಿಯುತ್ತಿರುವುದರಿಂದ ಬಿಬಿಎಂಪಿ ಆಡಳಿತ ಅಧಿಕಾರಿ ಗೌರವ್ ಗುಪ್ತ ಅವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಕಾಲುವೆ, ನಗರದ ತಗ್ಗು ಪ್ರದೇಶಗಳಲ್ಲಿ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ.

news18-kannada
Updated:September 20, 2020, 2:43 PM IST
Bengaluru Rain: ಬೆಂಗಳೂರಿನಲ್ಲಿ ನಿಲ್ಲದ ಮಳೆ; ರಾಜಕಾಲುವೆ, ತಗ್ಗು ಪ್ರದೇಶದಲ್ಲಿ ಎಚ್ಚರ ವಹಿಸಲು ಸಿಎಂ ಯಡಿಯೂರಪ್ಪ ಸೂಚನೆ
ಮಳೆಗೆ ತತ್ತರಿಸಿದ ಬೆಂಗಳೂರು
  • Share this:
ಬೆಂಗಳೂರು (ಸೆ. 20): ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸೆ. 23ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಕೊಡಗು, ಕರಾವಳಿ, ಮಲೆನಾಡು ಆಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ನಿನ್ನೆ ಸಂಜೆಯಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಬಸವನಗುಡಿ, ಚಾಮರಾಜಪೇಟೆ, ಜಯನಗರ, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್ ಸೇರಿದಂತೆ ಸುತ್ತಮುತ್ತ ಇಂದು ಮಳೆಯ ಆರ್ಭಟ ಹೆಚ್ಚಾಗಿದೆ. ಧಿಡೀರ್ ಮಳೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ತಗ್ಗುಪ್ರದೇಶಗಳಲ್ಲಿ ಎಚ್ಚರ ವಹಿಸುವಂತೆ ಸಿಎಂ ಸೂಚಿಸಿದ್ದಾರೆ.

ಬೆಳಗ್ಗೆಯಿಂದ ಒಂದೇ ಸಮನೆ ಮಳೆ ಸುರಿಯುತ್ತಿರುವುದರಿಂದ ಬಿಬಿಎಂಪಿ ಆಡಳಿತ ಅಧಿಕಾರಿ ಗೌರವ್ ಗುಪ್ತ ಅವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಕರೆ ಮಾಡಿದ್ದಾರೆ. ರಾಜಕಾಲುವೆ, ನಗರದ ತಗ್ಗು ಪ್ರದೇಶಗಳಲ್ಲಿ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ. ಹಾಗೇ, ಮಳೆ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.




ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ, ಸಮಸ್ಯೆ ಆಲಿಸಲು ಅಧಿಕಾರಿಗಳು ಸಿಗಬೇಕು. ಈ ಬಗ್ಗೆ ಎಚ್ಚರ ವಹಿಸುವಂತೆ ಆಡಳಿತಾಧಿಕಾರಿಗೆ ಆದೇಶಿಸಿದ್ದಾರೆ. ಹಾಗೇ, ಮಳೆಯಿಂದ ಹಾನಿಗೊಳಗಾಗಿರುವ ಸ್ಥಳದಲ್ಲಿ ಇದ್ದು ಸಮಸ್ಯೆ ಆಲಿಸುವಂತೆ ದೂರವಾಣಿ ಮೂಲಕ ಮಳೆ ಹೆಚ್ಚಾಗಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಉಡುಪಿಯಲ್ಲಿಯೂ ಮಳೆಯಿಂದ ಅವಾಂತರ ಸೃಷ್ಟಿಯಾಗಿರುವುದರಿಂದ ಉಡುಪಿ ಜಿಲ್ಲಾಧಿಕಾರಿಗೆ ಕರೆ ಮಾಡಿರುವ ಸಿಎಂ ಯಡಿಯೂರಪ್ಪ, ಅಗತ್ಯ ಕ್ರಮ ಕೈಗೊಂಡು ಜನರ ರಕ್ಷಣೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಮಳೆಯಿಂದ ಉಡುಪಿ ಶ್ರೀಕೃಷ್ಣ ಮಠದ ಬಳಿ ಇರುವ ವಾಹನ ನಿಲುಗಡೆ ಸ್ಥಳವು ಮುಳುಗಡೆಯಾಗಿದೆ. ಇಂದ್ರಾಣಿ ನದಿಯ ಅಕ್ಕಪಕ್ಕದ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ತಾಲೂಕಿನ ನೀಲಾವರ, ಮಟಪಾಡಿ ಗ್ರಾಮಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ತಗ್ಗುಪ್ರದೇಶದ ಜನಸಂಪರ್ಕವನ್ನು ಕಳೆದುಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ಅಸ್ತ್ಯವ್ಯಸ್ಥವಾಗಿದೆ. ಮಲ್ಪೆ ಸಮುದ್ರದಲ್ಲಿ ಮೂರು ಬೋಟ್​ಗಳು ಮುಳುಗಡೆಯಾಗಿದೆ.
Published by: Sushma Chakre
First published: September 20, 2020, 2:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading