HOME » NEWS » State » BJP OFFICES WILL BE OPEN IN ALL OVER KARNATAKA WITHIN 3 YEARS SAYS NALIN KUMAR KATEEL SCT

ಮೂರು ವರ್ಷದೊಳಗೆ ರಾಜ್ಯದ 11 ಕಡೆ ಬಿಜೆಪಿ ಕಾರ್ಯಾಲಯ ಸ್ಥಾಪನೆ; ನಳಿನ್ ಕುಮಾರ್ ಕಟೀಲ್ ಮಾಹಿತಿ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ ಕುಮಾರ್ ಕಟೀಲ್ ಮಾತನಾಡಿ, ಎರಡು- ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದೇವೆ. ಇದಕ್ಕಾಗಿ ಭೂಮಿ ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದರು.

news18-kannada
Updated:August 14, 2020, 3:27 PM IST
ಮೂರು ವರ್ಷದೊಳಗೆ ರಾಜ್ಯದ 11 ಕಡೆ ಬಿಜೆಪಿ ಕಾರ್ಯಾಲಯ ಸ್ಥಾಪನೆ; ನಳಿನ್ ಕುಮಾರ್ ಕಟೀಲ್ ಮಾಹಿತಿ
ನಳೀನ್‍ ಕುಮಾರ್ ಕಟೀಲ್
  • Share this:
ಬೆಂಗಳೂರು (ಆ. 14): ಎರಡು- ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ನಳೀನ್ ಕುಮಾರ್ ಕಟೀಲು ತಿಳಿಸಿದರು. ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯಪುರ, ರಾಯಚೂರು, ಬಳ್ಳಾರಿ, ಬೀದರ್, ಬಾಗಲಕೋಟೆ, ಕೋಲಾರ, ಚಾಮರಾಜನಗರ ಮತ್ತು ತಿಪಟೂರಿನಲ್ಲಿ ಕಾರ್ಯಾಲಯ ಆರಂಭವಾಗುತ್ತಿವೆ ಎಂದರು.

ಮುಂದಿನ ದಿನಗಳಲ್ಲಿ ಹಾವೇರಿ, ರಾಮನಗರ, ಉತ್ತರ ಕನ್ನಡ ಸೇರಿದಂತೆ ಒಟ್ಟು 11 ಕಡೆ ಕಾರ್ಯಾಲಯಗಳನ್ನು ಪ್ರಾರಂಭಿಸಲಾಗುವುದು. ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಇರುವ ಕಾರಣ ಭೂಮಿ ಖರೀದಿ ವಿಳಂಬವಾಗಿದೆ. ಒಂದೆರಡು ತಿಂಗಳಲ್ಲಿ ಇದು ಕೂಡ ಪೂರ್ಣಗೊಳ್ಳಲಿದ್ದು, ಎರಡು- ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಕಾರ್ಯಾಲಯಗಳು ಪ್ರಾರಂಭವಾಗಲಿವೆ ಎಂದು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿಯಿಂದ ಲೋಕಸಭೆ ಚುನಾವಣೆಯವರೆಗೂ ಬಿಜೆಪಿ ಅಧಿಕಾರ ಹಿಡಿಯಬೇಕು. ಇದಕ್ಕಾಗಿ ಈಗಿನಿಂದಲೇ  ಕೆಲಸ ಮಾಡಲು ಮುಂದಾಗಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಗದಗದಲ್ಲಿ ಎಸಿಬಿ ಅಧಿಕಾರಿಗಳ ದಾಳಿ; ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಸಿಕ್ಕಿಬಿದ್ದ ಪಿಡಿಓ

ದೆಹಲಿಯಿಂದಲೇ ವರ್ಚುವಲ್ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಕಮಲ ಅರಳಿಸಬೇಕಾದರೆ ಕಾರ್ಯಕರ್ತರು  ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಅದೇ ರೀತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಪಾಲಿಕೆಗಳು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲೂ ತಮ್ಮ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾದರೆ ಕಾರ್ಯಕರ್ತರ ಶ್ರಮ ಅಗತ್ಯ ಎಂದರು.
ರಾಜ್ಯದಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಪಕ್ಷ ಹಿನ್ನಡೆ ಇದೆಯೋ ಅಂತಹ ಕ್ಷೇತ್ರಗಳಲ್ಲಿ  ಹೆಚ್ಚು  ಸಂಘಟನೆಯನ್ನು ಚುರುಕುಗೊಳಿಸಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲವೆಂದು  ಹೇಳುತ್ತಿದ್ದ ಕಡೆಯೂ ಇಂದು ನಾವು ಗೆಲುವು ಸಾಧಿಸಿದ್ದೇವೆ.  ರಾಜ್ಯದಲ್ಲಿ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಕೆಲವು ಜಿಲ್ಲೆಗಳ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದರು.
Published by: Sushma Chakre
First published: August 14, 2020, 3:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading