ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರು ಗೆಲ್ಲುತ್ತದೆ: ಸಿಎಂ ಯಡಿಯೂರಪ್ಪ

ಎರಡು ಕ್ಷೇತ್ರದಲ್ಲಿಯೂ ಬಿಜೆಪಿ ಪರವಾದ ಒಲವು ಇದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ 3 ದಿನದಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡೂ ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಸಿಎಂ ಯಡಿಯೂರಪ್ಪ ವ್ಯಕ್ತಪಡಿಸಿದರು. 

news18-kannada
Updated:October 18, 2020, 8:45 PM IST
ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರು ಗೆಲ್ಲುತ್ತದೆ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
  • Share this:
ಶಿವಮೊಗ್ಗ(ಅಕ್ಟೋಬರ್​. 18): ಶಿರಾ ಮತ್ತು ಆರ್.ಆರ್. ನಗರ ಉಪ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ವಿಜಯೇಂದ್ರ ಅವರ ಮುಂದಾಳತ್ವದಲ್ಲಿ ಎಲ್ಲಾ ಕೆಲಸಗಳು ನಡೆಯುತ್ತಿವೆ. ಎರಡು ಕ್ಷೇತ್ರದಲ್ಲಿಯೂ ಬಿಜೆಪಿ ಪರವಾದ ಒಲವು ಇದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ 3 ದಿನದಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡೂ ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಸಿಎಂ ಯಡಿಯೂರಪ್ಪ ವ್ಯಕ್ತಪಡಿಸಿದರು. ಸಿಎಂ ಯಡಿಯೂರಪ್ಪ ಇದೇ ವರ್ಷ ಕಳೆದ ಫೆಬ್ರವರಿ ತಿಂಗಳಲ್ಲಿ  ತವರು ಜಿಲ್ಲೆಗೆ ಆಗಮಿಸಿದ್ದರು. ಈ ನಂತರ ಕೋವಿಡ್ ಕಾರಣಗಳಿಂದಾಗಿ ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮಗಳಿಗೆ ಆಗಮಿಸಿರಲಿಲ್ಲ ಇಂದು ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇನ್ನು ಮೂರು ದಿನಗಳ ಕಾಲ ಶಿಕಾರಿಪುರದಲ್ಲೇ ವಾಸ್ತವ್ಯ ಇರಲಿದ್ದಾರೆ. ಬೆಂಗಳೂರಿನಿಂದ ಶಿಕಾರಿಪುರಕ್ಕೆ ಕುಟುಂಬ ಸದಸ್ಯರ ಜೊತೆ ಆಗಮಿಸಿದ ಬಿ ಎಸ್ ಯಡಿಯೂರಪ್ಪನವರು, ಹುಚ್ಚರಾಯ ಸ್ವಾಮಿ ಮತ್ತು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ  ಪೂಜೆ ಸಲ್ಲಿಸಿದರು. 

ಸಂಸದ ರಾಘವೇಂದ್ರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಾಕಷ್ಟು ಅನುದಾನ ತಂದಿದ್ದಾರೆ. ಶಿವಮೊಗ್ಗ ಜಿಲ್ಲೆ ಮಾದರಿ ಜಿಲ್ಲೆಯಾಗಬೇಕು, ಶಿಕಾರಿಪುರ ಮಾದರಿ ತಾಲೂಕು ಆಗಬೇಕು ಎಂಬ ಆಸೆ ಇದ್ದು, ಅದು ಈಡೇರುತ್ತಿದೆ. ವಿಮಾನ ನಿಲ್ದಾಣ ಅದಷ್ಟು ಬೇಗಾ ಅದರೆ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಲಿವೆ ಎಂದರು.

ಸಾಗರ ತಾಲೂಕಿನ ಪುಣ್ಯ ಕ್ಷೇತ್ರ ಸಿಗಂದೂರು ದೇವಸ್ಥಾನದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು. ಈಗಾಗಲೇ ಅಲ್ಲಿ ಗಲಾಟೆ ಆರಂಭವಾಗಿದೆ. ಇದರ ಬಗ್ಗೆ ಜಿಲ್ಲಾಧಿಕಾರಿ ಮತ್ತು ಮುಖಂಡರ ಜೊತೆ ಕುಳಿತು ಮಾತನಾಡುತ್ತೇನೆ. ಇಂತಹ ಘಟನೆಗಳು ದೇವಸ್ಥಾನದಲ್ಲಿ ನಡೆಯಬಾರದು, ಅದು ಶೋಭೆ ತರುವುದಿಲ್ಲ ಎಂದರು.

ಇದನ್ನೂ ಓದಿ : ದೇವೇಗೌಡರ ಕುಟುಂಬವನ್ನು ಹಣ ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ: ಹೆಚ್​ ಡಿ ಕುಮಾರಸ್ವಾಮಿ

ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಹಲವು ಮುಖಂಡರ ಜೊತೆ ಚರ್ಚೆ ಮಾಡಿ ದೇವಸ್ಥಾನದ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿದ್ದೇನೆ. ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಪ್ರಧಾನಿಯವರು ತಿಳಿಸಿದ್ದಾರೆ. ಮನೆ ಕಳೆದುಕೊಂಡವರಿಗೆ ಹೊಸ ಮನೆ ಕಟ್ಟಿಕೊಡುತ್ತೇವೆ ಎಂದು ಸಿಎಂ ಬರವಸೆ ನೀಡಿದರು. ಬೆಳೆ ಕಳೆದುಕೊಂಡವರಿಗೆ ವೈಜ್ಞಾನಿಕ ಬೆಲೆ ಕೊಡುವಂತ ಕೆಲಸ ಮಾಡುತ್ತೇವೆ ಈಗಾಗಲೇ ಕಾರ್ಯ ಪ್ರವೃತ್ತನಾಗಿದ್ದೇನೆ ಎಂದು ಹೇಳಿದರು.
Published by: G Hareeshkumar
First published: October 18, 2020, 8:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading