BY Vijayendra: ಸರ್ಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ

ವಿಜಯೇಂದ್ರ ಮುಖ್ಯಮಂತ್ರಿ ಅಲ್ಲ, ಸಚಿವರೂ ಅಲ್ಲ, ಸಂಸದರಲ್ಲ, ಶಾಸಕರಲ್ಲ, ಗ್ರಾಮ ಪಂಚಾಯ್ತಿ ಸದಸ್ಯ ಕೂಡ ಅಲ್ಲ. ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿಲ್ಲದ ವಿಜಯೇಂದ್ರ ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

news18-kannada
Updated:September 16, 2020, 9:36 AM IST
BY Vijayendra: ಸರ್ಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ
ಬಿ.ವೈ. ವಿಜಯೇಂದ್ರ
  • Share this:
ಬೆಂಗಳೂರು (ಸೆ. 16): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಗ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಮಾತ್ರವಲ್ಲದೆ ಬಿಜೆಪಿಯ ಕೆಲವು ಶಾಸಕರು ಕೂಡ ಅಸಮಾಧಾನ ಹೊರಹಾಕಿದ್ದರು. ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎಂದು ಟೀಕಿಸಲಾಗಿತ್ತು. ಸಿಎಂ ಯಡಿಯೂರಪ್ಪನವರ ಮಗ ಬಿ.ವೈ. ವಿಜಯೇಂದ್ರ ನಿನ್ನೆ ಸರ್ಕಾರಿ ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಹೊಂದಿಲ್ಲದ ಬಿ.ವೈ. ವಿಜಯೇಂದ್ರ ಹೇಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಯಡಿಯೂರಪ್ಪನವರ ಮಗ ವಿಜಯೇಂದ್ರ ಮುಖ್ಯಮಂತ್ರಿ ಅಲ್ಲ, ಸಚಿವರೂ ಅಲ್ಲ, ಸಂಸದರಲ್ಲ, ಶಾಸಕರಲ್ಲ, ಗ್ರಾಮ ಪಂಚಾಯ್ತಿ ಸದಸ್ಯ ಕೂಡ ಅಲ್ಲ. ಹೀಗಿದ್ದರೂ ಸರ್ಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿಲ್ಲದ ವಿಜಯೇಂದ್ರ ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದೇಕೆ? ಆ ಅಧಿಕಾರವನ್ನು ಅವರಿಗೆ ಕೊಟ್ಟವರಾರು? ಆಡಳಿತ ಯಂತ್ರದಲ್ಲಿ ಮೂಗು ತೂರಿಸಿದ ಈ "ದಲ್ಲಾಳಿತನ" ಪ್ರಜಾಪ್ರಭುತ್ವದ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.




ಇದನ್ನೂ ಓದಿ: Ragini Dwivedi: ಸ್ಯಾಂಡಲ್​ವುಡ್​ ಡ್ರಗ್ ಕೇಸ್; ಇಂದು ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ

ಇದಕ್ಕೂ ಮೊದಲು ಹಲವು ಬಾರಿ ಕಾಂಗ್ರೆಸ್ ಬಿ.ವೈ. ವಿಜಯೇಂದ್ರ ಅವರು ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ, ಯಡಿಯೂರಪ್ಪ ನೆಪಮಾತ್ರಕ್ಕೆ ಸಿಎಂ ಆಗಿದ್ದಾರೆ ಎಂದು ಆರೋಪಗಳನ್ನು ಮಾಡಿತ್ತು. ಕಳೆದ ತಿಂಗಳು ಬಿಜೆಪಿ ಶಾಸಕರಲ್ಲೇ ಕೆಲವರು ವಿಜಯೇಂದ್ರ ವಿರುದ್ಧ ಬಿಜೆಪಿ ಹೈಕಮಾಂಡ್​ಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ವಕ್ತಾರ ಬಿಡುಗಡೆ ಮಾಡಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ 5 ಸಾವಿರ ಕೋಟಿ ರೂ. ಮೌಲ್ಯದ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕರೇ ಬಿಜೆಪಿ ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಪತ್ರವನ್ನು ರಿಲೀಸ್ ಮಾಡಿತ್ತು. ವಿಜಯೇಂದ್ರ ಅವರಿಂದ ಬಿಜೆಪಿಯನ್ನು ಉಳಿಸಿ ಅಂತ ಬಿಜೆಪಿ ಹೈಕಮಾಂಡ್​ಗೆ ಬಿಜೆಪಿ ಶಾಸಕರೇ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ವಕ್ತಾರ ಲಕ್ಷ್ಮಣ ಬಿಡುಗಡೆ ಮಾಡಿದ್ದರು. 32 ಜನರ ಕೂಟವನ್ನು ವಿಜಯೇಂದ್ರ ರಚಿಸಿಕೊಂಡಿದ್ದಾರೆ. ಇಲಾಖೆಗಳಿಗೆ ಉಸ್ತುವಾರಿಗಳನ್ನು‌ ಮಾಡಿಕೊಂಡಿದ್ದಾರೆ. ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಳೆದ ಒಂದು ವರ್ಷದಲ್ಲಿ 5 ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ ಎಂದು ಬಿಜೆಪಿ ಶಾಸಕರು ಪತ್ರ ಬರೆದಿದ್ದರು. ಆ ಪತ್ರವನ್ನು ಕೂಡ ಕಾಂಗ್ರೆಸ್ ಬಿಡುಗಡೆ ಮಾಡಿತ್ತು.
Published by: Sushma Chakre
First published: September 16, 2020, 9:36 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading