ಡ್ರಗ್ಸ್‌ ಕೇಸ್‌ನಲ್ಲಿ ಬಂಧಿತರ ರಕ್ಷಣೆಗೆ ಕೆಲವು ಸಚಿವರೇ ಮುಂದಾಗಿದ್ದಾರೆ; ಸಿದ್ದರಾಮಯ್ಯ ಆರೋಪ

ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ. ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ? ಎಂದು ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

news18-kannada
Updated:September 6, 2020, 9:30 PM IST
ಡ್ರಗ್ಸ್‌ ಕೇಸ್‌ನಲ್ಲಿ ಬಂಧಿತರ ರಕ್ಷಣೆಗೆ ಕೆಲವು ಸಚಿವರೇ ಮುಂದಾಗಿದ್ದಾರೆ; ಸಿದ್ದರಾಮಯ್ಯ ಆರೋಪ
ಸಿದ್ದರಾಮಯ್ಯ.
  • Share this:
ಬೆಂಗಳೂರು (ಸೆಪ್ಟೆಂಬರ್‌ 06); ರಾಜ್ಯ ರಾಜಧಾನಿಯಲ್ಲಿ ಡ್ರಗ್ಸ್‌ ಮಾಫಿಯಾ ಜಾಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ದಿನಕ್ಕೊಬ್ಬರನ್ನು ಬಂಧಿಸಲಾಗುತ್ತಿದೆ. ಅವರಿಂದ ಅನೇಕ ಮಹತ್ವ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ನಡುವೆ ಡ್ರಗ್ಸ್‌ ಜಾಲದ ಜೊತೆಗೆ ನಂಟು ಹೊಂದಿರುವ ಅನುಮಾನದ ಮೇಲೆ ಚಿತ್ರ ನಟಿ ರಾಗಿಣಿ ಅವರನ್ನೂ ಪೊಲೀಸರು ಮೂರು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಜಾಲದಲ್ಲಿ ಅನೇಕ ಉದ್ಯಮಿಗಳು ಹಾಗೂ ರಾಜಕಾರಣಿಗಳ ಮಕ್ಕಳ ಭಾಗಿಯಾಗಿರುವ ಕುರಿತ ಮಾಹಿತಿಗಳು ಲಭ್ಯವಾಗುತ್ತಿದೆ. ಈ ಕುರಿತು ಟ್ವೀಟ್‌ ಮೂಲಕ ಆಡಳಿತ ಪಕ್ಷದ ಕಿವಿಹಿಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಡ್ರಗ್ಸ್‌ ಜಾಲದ ವಿರುದ್ಧ ಮುಖ್ಯಮಂತ್ರಿಗಳು ನಿರ್ದಾಕ್ಷಿಣ ಕ್ರಮ ತೆಗೆದುಕೊಳ್ಳಬೇಕು. ಬಂಧಿತರಲ್ಲಿ ಕೆಲವರಿಗೆ ಬಿಜೆಪಿ ಪಕ್ಷದ ಜೊತೆಗೂ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು, ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು" ಎಂದು ಮನವಿ ಮಾಡಿದ್ದಾರೆ.

ಡ್ರಗ್ಸ್‌ ಜಾಲದ ಸುದ್ದಿ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಿಗೆ ಇಂದು ಟ್ವೀಟ್ ಮಾಡುವ‌ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿರುವ ಸಿದ್ದರಾಮಯ್ಯ, ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? - ಈ ಎಲ್ಲ ವಿವರ ಕೇಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ.


ಅಲ್ಲದೆ, ಮುಖ್ಯಮಂತ್ರಿ ಯಡಿಯೂರಪ್ಪ ಬಂಧಿತರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಬಂಧಿತರಲ್ಲಿ ಕೆಲವರಿಗೆ ಬಿಜೆಪಿ ಪಕ್ಷದ ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು, ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು" ಎಂದು ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸರ್ಕಾರದ ಎದುರು ಸರಣಿ ಪ್ರಶ್ನೆಗಳನ್ನಿಟ್ಟಿರುವ ಸಿದ್ದರಾಮಯ್ಯ, "ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ?
ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?ರಾಜ್ಯದಲ್ಲಿ ಮಾದಕ ವಸ್ತುಗಳ ದುಶ್ಚಟಕ್ಕೆ ಸಿಕ್ಕಿರುವ ಮಕ್ಕಳ ತಂದೆ-ತಾಯಿಗಳಿಂದ ರಹಸ್ಯವಾಗಿ ಮಾಹಿತಿ ಪಡೆಯುವ ವ್ಯವಸ್ಥೆ ಇದೆಯೇ? ಇಂತಹ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ? ಕೈಗೊಂಡ ಕ್ರಮಗಳೇನು?ಎನ್ ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ/ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ,ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ. ಇಂತಹ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ? ಈ ಸಮಿತಿಗಳ ಸಭೆಗಳು ಎಷ್ಟು ನಡೆದಿವೆ ಮತ್ತು ಏನು ಕ್ರಮಕೈಗೊಳ್ಳಲಾಗಿದೆ?

ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ. ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ?" ಎಂಬ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಆದರೆ, ಈ ಎಲ್ಲಾ ಪ್ರಶ್ನೆಗಳಿಗೂ ರಾಜ್ಯ ಸರ್ಕಾರ ಅಥವಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉತ್ತರಿಸುತ್ತಾರೆಯೇ? ಎಂಬುದನ್ನು ಕಾದುನೋಡಬೇಕಿದೆ.
Published by: MAshok Kumar
First published: September 6, 2020, 9:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading